ಗುಲ್ಬರ್ಗಾ

ದಾಖಲೆ ಅಂತರದ ಗೆಲವು ಸಾಧ್ಯ

Published On :

ಶಹಾಪುರ:ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ ನನಗೆ ಇಡೀ ಕ್ಷೇತ್ರದಲ್ಲಿ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದ್ದು ದಾಖಲೆ ಅಂತರದಿಂದ ಗೆಲ್ಲುವುದು ನಿಶ್ಚಿತವೆಂದು ಬಿ.ವಿ.ನಾಯಕ ತಿಳಿಸಿದರು.
ಪಟ್ಟಣದಲ್ಲಿ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ರೋಡ್ ಶೋದಲ್ಲಿ ಪಾಲ್ಗೊಳ್ಳುವ ಮುನ್ನ ಬುದ್ಧನಗರ ಬಡಾವಣೆಯಲ್ಲಿರುವ ಡಾ.ಬಾಬಾಸಾಹೇಬ ಅಂಬೇಡ್ಕರ್ ಭಾವಚಿತ್ರಕ್ಕೆ ಗೌರವ ಸಲ್ಲಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷ ಎಲ್ಲಾ ವರ್ಗದವರ ಪ್ರೀತಿ ವಿಶ್ವಾಸಕ್ಕೆ ಪಾತ್ರವಾಗಿದ್ದು ಕೇಂದ್ರದ ಯುಪಿಎ ಸರ್ಕಾರದ ಸಾಧನೆಗಳು ಮತ್ತು ಪ್ರಸ್ತುತ ರಾಜ್ಯ ಸರ್ಕಾರ ಉತ್ತಮ ಯೋಜನೆಗಳು ಕಾಂಗ್ರೆಸ್ ಪಕ್ಷದ ಶ್ರೇಷ್ಠತೆಯನ್ನು ಹೆಚ್ಚಿಸಿವೆ ಎಂದರು.
ಮಾತುಗಾರಿಕೆಯಿಂದ ಸಾಧ್ಯವಿಲ್ಲ:ಮಾಜಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಮಾತನಾಡಿ, ಹೈದ್ರಾಬಾದ ಕರ್ನಾಟಕ 371ಕಲಂ ತಿದ್ದುಪಡಿ ತರುವ ಮೂಲಕ ಕಾಂಗ್ರೆಸ್ ಪಕ್ಷ ಈ ಭಾಗದ ಆರ್ಥಿಕ ಸಾಮಾಜಿಕ ಶೈಕ್ಷಣಿಕ ಬದಲಾವಣೆಗೆ ಮಹತ್ವದ ಕೊಡುಗೆ ನೀಡಿದೆ. ಅಭಿಸೃದ್ಧಿಪರ ಕೆಲಸ ಮಾಡುವ ಕಾಂಗ್ರೆಸ್ ಪಕ್ಷಕ್ಕೆ ಸರ್ವವ್ಯಾಪ್ತಿ ಬೆಂಬಲ ವ್ಯಕ್ತವಾಗುತ್ತಿದೆ. ಕೇವಲ ಮಾತುಗಾರಿಕೆಯಿಂದ ದೇಶಗೆಲ್ಲಲು ಸಾಧ್ಯವಿಲ್ಲ. ಅಭಿವೃದ್ಧಿಯನ್ನು ಮಾಡಿ ತೋರಿಸುವ ಮೂಲಕ ಕಾಂಗ್ರೆಸ್ ಮುಂಚೂಣಿಯಲ್ಲಿದೆ ಎಂದರು.ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಚಂದ್ರಶೇಖರ ಆರಬೋಳ, ಮರಿಗೌಡ ಹುಲ್ಕಲ್, ಬಸವರಾಜ ಮತ್ತಿತರರಿದ್ದರು.

ಕಾಂಗ್ರೆಸ್ಗೆ ಹೆಚ್ಚಿನ ಬೆಂಬಲ
ಶಹಾಪುರ: ದೀನ ದುರ್ಬಲರ, ಹಿಂದುಳಿದವರ ಶ್ರೇಯೋಭಿವೃದ್ಧಿಯ ಜತೆ ಎಲ್ಲಾ ವರ್ಗದವರನ್ನು ಸಾಮಾಜಿಕ ನ್ಯಾಯದಡಿ ಒಂದಾಗಿ ಕರೆದುಕೊಂಡು ಹೋಗುವ ಕಾಂಗ್ರೆಸ್ಗೆ ಹೆಚ್ಚಿನ ಬೆಂಬಲ ವ್ಯಕ್ತವಾಗುತ್ತಿದೆ. ಮತದಾರರು ರಾಯಚೂರ ಕಾಂಗ್ರೆಸ್ ಅಭ್ಯರ್ಥಿ ಬಿ.ವಿ. ನಾಯಕರನ್ನು ಬಹುಮತದಿಂದ ಲೋಕಸಭೆಗೆ ಆರಿಸಿ ಕಳುಹಿಸಲಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಆರಬೋಳ ತಿಳಿಸಿದರು.
  ಕಾರ್ಯಕರ್ತರೊಂದಿಗೆ ಪಾದಯಾತ್ರೆ ಮೂಲಕ ರೋಡ್ ಶೋ ನಡೆಸಿ  ಸುದ್ದಿಗಾರರೊಂದಿಗೆ ಮಾತನಾಡಿ ಪ್ರಸ್ತುತ ಕಾಂಗ್ರೆಸ್ನ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ  ಜನಪರ ಯೋಜನೆಗಳು ಜನರಿಗೆ ತಲುಪಿದ್ದು ಕಾಂಗ್ರೆಸ್ ಪಕ್ಷದ ಗೆಲವಿಗೆ ಸಹಕಾರಿ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.