ನಾವ್ ರೆಡಿ, ಮತದಾನಕ್ಕೆ ನೀವೂ ಬನ್ನಿ...
ಜೇವರ್ಗಿ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಮಸ್ಟರಿಂಗ್ ಕಾರ್ಯ ನಡೆದು, ತಾಲೂಕಿನ 253 ಮತಗಟ್ಟೆಗಳಿಗೆ ಚುನಾವಣಾ ಸಾಮಗ್ರಿಗಳೊಂದಿಗೆ ಮತಗಟ್ಟೆ ಅಧಿಕಾರಿಗಳನ್ನು ಬುಧವಾರ ಕಳುಹಿಸಲಾಯಿತು. ಸಿಬ್ಬಂದಿಗೆ 253 ಮತಗಟ್ಟೆಗಳಿಗೆ ಸಾಗಿಸಲು 29 ಸರ್ಕಾರಿ ಬಸ್ಗಳು, 46 ಕ್ರೂಸರ್ ಹಾಗೂ 27 ಜೀಪ್ಗಳ ವ್ಯವಸ್ಥೆ ಕಲ್ಪಿಸಲಾಗಿತ್ತು. ಪಟ್ಟಣದ ಮತಗಟ್ಟೆ ಸಂಖ್ಯೆ 84, ಸರ್ಕಾರಿ ಪದವಿ ಪೂರ್ವ ಕಾಲೇಜು ಮಧ್ಯಭಾಗ ಅತಿ ಹೆಚ್ಚು 1,485 ಮತದಾರರಿರುವ ಮತಗಟ್ಟೆ ಎಂದು ಗುರುತಿಸಲಾಗಿದೆ. 1200ಕ್ಕೂ ಅಧಿಕ ಮತದಾರರಿರುವ ಮತಗಟ್ಟೆಗಳಿಗೆ ಒಬ್ಬ ಹೆಚ್ಚುವರಿ ಮತಗಟ್ಟೆ ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ. ತಾಲೂಕಿನ ಕೊಣ್ಣೂರ ತಾಂಡಾದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 252ರಲ್ಲಿ ಅತಿ ಕಡಿಮೆ ಮತದಾರ(264)ರಿರುವ ಮತಗಟ್ಟೆ ಎಂದು ಗುರುತಿಸಲಾಗಿದೆ. ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಇಬ್ಬರು ಡಿವೈಎಸ್ಪಿ, 3 ಸಿಪಿಐ, 13 ರೂಟ್ ಮೊಬೈಲ್, 5 ಪಿಎಸ್ಐ, 13 ಎಎಸ್ಐ, 280 ಪೊಲೀಸ್ ಸಿಬ್ಬಂದಿ, 2 ಕೆಎಸ್ಆರ್ಪಿ ತುಕಡಿ, 2 ಡಿಎಆರ್ ತುಕುಡಿ ಹಾಗೂ 75 ಗೃಹರಕ್ಷಕ ದಳದ ಸಿಬ್ಬಂದಿಯನ್ನು ಭದ್ರತಾ ಕಾರ್ಯಕ್ಕೆ ನಿಯೋಜಿಸಲಾಗಿದೆ ಎಂದು ಸಿಪಿಐ ಕಚೇರಿ ಸಿಬ್ಬಂದಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

