ಗುರುಮಠಕಲ್: ನೀರಸ ಮತದಾನ
ಕ.ಪ್ರ.ವಾರ್ತೆ ್ಣ ಗುರುಮಠಕಲ್ ್ಣ ಏ.17
ಗುಲ್ಬರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಗುರುಮಠಕಲ್‌ನಲ್ಲಿ ಗುರುವಾರ ಕೆಲವು ಅಡ್ಡಿ ಆತಂಕ, ಅಡಚನೆಗಳ ನಡುವೆ ಮತದಾನ ನಡೆದಿದೆ. ಕೆಲವಡೆ ಮತದಾನಕ್ಕೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಮತಕ್ಷೇತ್ರದೆಲ್ಲೆಡೆಯಲ್ಲಿ ಮತದಾನ ಪ್ರಕ್ರಿಯೆಗೆ ಚಾಲನೆ ದೊರೆಯುತ್ತಿದ್ದಂತೆ ಯಲಸತ್ತಿ ಗ್ರಾಮದಲ್ಲಿ ಮತಯಂತ್ರ ಕೈಕೊಟ್ಟ ಪರಿಣಾಮವಾಗಿ ಮತದಾನ ಸುಮಾರು ಒಂದು ಗಂಟೆ ಕಾಲ ತಡವಾಗಿ ಪ್ರಾರಂಭವಾಯಿತು. ನಂತರ ಮತದಾನವು ನೀರಸವಾಗಿತ್ತು.
ಕೇಶ್ವಾರ ಗ್ರಾಮದಲ್ಲಿ ಆಶಾ ಕಾರ್ಯಕರ್ತರು ಪೋಲಿಂಗ್ ಸ್ಟೇಷನ್‌ನಲ್ಲಿ ಕುಳಿತು ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ಪಕ್ಷದ ಕಾರ್ಯಕರ್ತರು ಕೆಲ ಕಾಲ ಗೊಂದಲ ಉಂಟು ಮಾಡಿದರು. ನಂತರ ಬಿಜೆಪಿ ಬ್ಲಾಕ್ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಪಕ್ಷದ ಪ್ರಮುಖರ ಮದ್ಯಸ್ಥಿಕೆಯಲ್ಲಿ ಗೊಂದಲಕ್ಕೆ ತೆರೆ ಎಳೆಯಲಾಯಿತು.
ಅಮ್ಮಪಲ್ಲಿ ಗ್ರಾಮದಲ್ಲಿ ಪೋಲಿಂಗ್ ಅಧಿಕಾರಿಗಳು ಕಾಂಗ್ರೆಸ್ ಪಕ್ಷದ ಏಜೆಂಟರಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿ ಮತದಾನಕ್ಕೆ ಅಡ್ಡಿಪಡಿಸಲಾಗಿತ್ತು. ನಂತರ ಪ್ರಮುಖರ ಮಧ್ಯಸ್ತಿಕೆಯಿಂದ ಮತದಾನಕ್ಕೆ ಅನುವು ಮಾಡಿಕೊಡಲಾಯಿತು.
ಮತಕ್ಷೇತ್ರದ ಅನೂರ ಗ್ರಾಮಕ್ಕೆ ಮೂಲ ಸೌಕರ್ಯಗಳನ್ನು ನೀಡಿಲ್ಲ ಎಂದು ಆರೋಪಿಸಿ
ಗ್ರಾಮಸ್ಥರು 10 ಮತಗಳನ್ನು ಚಲಾವಣೆ ಮಾಡಿದ ನಂತರ ಮತದಾನ ಬಹಿಷ್ಕರಿಸಿ ಸುಮಾರು ಒಂದು ಗಂಟೆಯ ನಂತರ ಮತ್ತೆ ಮತದಾನ ಮಾಡಲು ಪ್ರಾರಂಭಿಸಿದರು.
ಕೊಂಕಲ್ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ನಡೆದ ಗಲಾಟೆಯಿಂದ ಸುಮಾರು 4 ಗಂಟೆಗೂ ಹೆಚ್ಚು ಕಾಲ ಮತದಾನ ಸ್ಥಗಿತವಾಗಿ ಉದ್ರಿಕ್ತ ಪರಿಸ್ಥಿತಿ ನಿರ್ಮಾಣವಾಗಿತ್ತು. ಪೊಲೀಸರಿಂದ ಲಘುಲಾಠಿ ಪ್ರಹಾರ, ಗ್ರಾಮಸ್ಥರಿಂದ ಕಲ್ಲು ತೂರಾಟದಂತಹ ಘಟನೆಗಳು ನಡೆದವು. ಒಟ್ಟಾರೆಯಾಗಿ ಗುರುಮಠಕಲ್ ಮತಕ್ಷೇತ್ರದಲ್ಲಿನ ಮತದಾನವು ಹತ್ತು ಹಲವು ಗಲಭೆಗಳಿಂದ ಕೂಡಿದ್ದರೂ ಶಾಂತಿಯುತವಾಗಿ ಮುಕ್ತಾಯಗೊಂಡು ಅಭ್ಯರ್ಥಿಗಳು, ಕಾರ್ಯಕರ್ತರು ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಮಾಡಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

