ಜಿಲ್ಲೆಯಲ್ಲಿ ಶೇ.56.20 ಮತದಾನ
ಕ.ಪ್ರ. ವಾರ್ತೆ, ಯಾದಗಿರಿ, ಏ.18
ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯ ನಾಲ್ಕೂ ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 8,44,177 ಮತದಾರರ ಪೈಕಿ 4,74,401 ಮತದಾರರು ಮತಚಲಾಯಿಸಿದ್ದು, ಜಿಲ್ಲೆಯಾದ್ಯಂತ ಒಟ್ಟು ಶೇ. 56.20ರಷ್ಟು ಮತದಾನವಾಗಿದೆ ಎಂದು ಜಿಲ್ಲಾಧಿಕಾರಿ ಎಫ್.ಆರ್. ಜಮಾದಾರ್ ತಿಳಿಸಿದ್ದಾರೆ.
ರಾಯಚೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಸುರಪುರ ವಿಧಾನಸಭಾ ಕ್ಷೇತ್ರದಲ್ಲಿ 70,959 ಪುರುಷ ಮತ್ತು 64,540 ಮಹಿಳಾ ಮತದಾರರು ಸೇರಿದಂತೆ ಒಟ್ಟು 1,35,499 ಮತದಾರರು ಮತಚಲಾಯಿಸಿದ್ದು, ಈ ಕ್ಷೇತ್ರದಲ್ಲಿ ಒಟ್ಟು ಶೇ. 58.44ರಷ್ಟು ಮತದಾನ ಆಗಿದೆ.
ಅದೇ ರೀತಿ ಶಹಾಪುರ ವಿಧಾನಸಭಾ ಕ್ಷೇತ್ರದಲ್ಲಿ 56,.402 ಪುರುಷ ಮತ್ತು 49,082 ಮಹಿಳಾ ಮತದಾರರು ಸೇರಿದಂತೆ ಒಟ್ಟು 1,05,494 ಮತದಾರರು ಮತ ಚಲಾಯಿಸಿದ್ದು, ಈ ಕ್ಷೇತ್ರದಲ್ಲಿ ಒಟ್ಟು ಶೇ. 53.42ರಷ್ಟು ಮತದಾನ ನಡೆಡಿದೆ.
ಅದರಂತೆ ಯಾದಗಿರಿ ವಿಧಾನಸಭಾ ಕ್ಷೇತ್ರದಲ್ಲಿ 57,863 ಪುರುಷ ಮತ್ತು 53,231 ಮಹಿಳಾ ಮತದಾರರು ಸೇರಿದಂತೆ ಒಟ್ಟು 1,11,094 ಮತದಾರರು ಮತ ಚಲಾಯಿಸಿದ್ದು, ಈ ಕ್ಷೇತ್ರದಲ್ಲಿ ಒಟ್ಟು ಶೇ. 55.07ರಷ್ಟು ಮತದಾನ ಆಗಿದೆ.
ಗುಲ್ಬರ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಗುರುಮಠಕಲ್ ವಿಧಾನಸಭಾ ಕ್ಷೇತ್ರದಲ್ಲಿ 61,069 ಪುರುಷ ಮತ್ತು 61,245 ಮಹಿಳಾ ಮತದಾರರು ಸೇರಿದಂತೆ ಒಟ್ಟು 1,22,314 ಮತದಾರರು ಮತಚಲಾಯಿಸಿದ್ದು, ಈ ಕ್ಷೇತ್ರದಲ್ಲಿ ಒಟ್ಟು ಶೇ. 57.35ರಷ್ಟು ಮತದಾನ ಆಗಿದೆ.
ಜಿಲ್ಲೆಯ ಈ ನಾಲ್ಕೂ ವಿಧಾನಸಭಾ ಕ್ಷೇತ್ರಗಳಲ್ಲಿ 4,25,534 ಪುರುಷ ಮತ್ತು 4,18,643 ಮಹಿಳಾ ಮತದಾರರು ಸೇರಿದಂತೆ ಒಟ್ಟು 8,44,177ಮತದಾರರು ಇದ್ದರು. ಈ ಪೈಕಿ ಜಿಲ್ಲೆಯಾದ್ಯಂತ ಗುರುವಾರ ನಡೆದ ಲೋಕಸಭಾ ಚುನಾವಣೆಯಲ್ಲಿ 2,46,298 ಪುರುಷ ಮತ್ತು 2,28,102 ಮಹಿಳಾ ಮತದಾರರು ಸೇರಿದಂತೆ ಒಟ್ಟು 4,74,401 ಮತದಾರರು ಮತಚಲಾಯಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಎಫ್.ಆರ್. ಜಮಾದಾರ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

