ಜಿಲ್ಲೆಯಲ್ಲಿ ಶೇ. 6.25ರಷ್ಟು ಮತದಾನದಲ್ಲಿ ಹೆಚ್ಚಳ: ಜಿಲ್ಲಾಧಿಕಾರಿ ಜಮಾದಾರ್
ಯಾದಗಿರಿ: ಜಿಲ್ಲೆಯಾದ್ಯಂತ ಜಿಲ್ಲಾ ಸ್ಪೀಪ್ ಸಮಿತಿಯಿಂದ ಹಮ್ಮಿಕೊಂಡ ವಿವಿಧ ಮತದಾನ ಜಾಗೃತಿ ಕಾರ್ಯಕ್ರಮಗಳಿಂದಾಗಿ ಕಳೆದ ಲೋಕಸಭೆ ಚುನಾವಣೆಗಿಂತ ಜಿಲ್ಲೆಯಲ್ಲಿ ಈ ಬಾರಿಮತದಾನದಲ್ಲಿ ಶೇ. 6.25 ರಷ್ಟು ಹೆಚ್ಚಳವಾಗಿದೆ ಎಂದು ಜಿಲ್ಲಾಧಿಕಾರಿ ಮತ್ತು ಚುನಾವಣಾಧಿಕಾರಿ ಎಫ್.ಆರ್. ಜಮಾದಾರ್ ತಿಳಿಸಿದ್ದಾರೆ.
ಜಿಲ್ಲಾದ್ಯಂತ ಕಳೆದ ಲೋಕಸಭಾ ಚುನಾವಣೆಯಲ್ಲಿ ನಾಲ್ಕೂ ವಿಧಾನಸಭಾ ಕ್ಷೇತ್ರಗಳಲ್ಲಿ ಶೇ. 49.95ರಷ್ಟು ಮಾತ್ರ ಮತದಾನವಾಗಿತ್ತು.
ಈ ಬಾರಿಯ ಚುನಾವಣೆಯಲ್ಲಿ ಶೇ. 56.20 ರಷ್ಟು ಮತದಾನವಾಗಿದ್ದು, ಈ ಬಾರಿ ಮತದಾನದಲ್ಲಿ ಒಟ್ಟು ಶೇ. 6.25 ರಷ್ಟು ಹೆಚ್ಚಳವಾಗಿದೆ. ಅದರಂತೆ ಕಳೆದ ವಿಧಾನಸಭಾ ಚುನಾವಣೆಯಲ್ಲಿಯೂ ಸಹ ಶೇ. 9 ರಿಂದ ಶೇ. 10ರಷ್ಟು ಮತದಾನದಲ್ಲಿ ಹೆಚ್ಚಳವಾಗಿರುವುದನ್ನು ಇಲ್ಲಿ ಸ್ಮರಿಸಬಹುದಾಗಿದೆ.
ಕಳೆದ ಒಂದು ತಿಂಗಳಿನಿಂದ ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ಪೀಪ್ ಸಮಿತಿಯಿಂದ ಮತದಾರರಲ್ಲಿ ಮತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸಲು ದೊಡ್ಡ ಪ್ರಮಾಣದ ಹೊರ್ಡಿಂಗ್ ಅಳವಡಿಕೆ, ಕರ ಪತ್ರ ವಿತರಣೆ, ಪೋಸ್ಟರ್‌ಗಳ ವಿತರಣೆ, ಪ್ಲೆಜ್ ಕಾರ್ಡಗಳ ವಿತರಣೆ ಮುಂತಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
ಅದರಂತೆ ಈ ಬಾರಿ ಚುನಾವಣೆಯಲ್ಲಿ ಮತದಾನ ಮಾಡುವಂತೆ ಕೋರಿ ಮತದಾರರಿಗೆ ಸ್ವತಃ ಜಿಲ್ಲಾಧಿಕಾರಿಗಳಿಂದ ಮಮತೆಯ ಕರೆಯೋಲೆ ಮುದ್ರಿಸಿ ಆಹ್ವಾನ ನೀಡಲಾಗಿತ್ತು. ಅದರಂತೆ ಮತದಾನ ಮಾಡಿದ ನಂತರ ಮಾನ್ಯ ಜಿಲ್ಲಾಧಿಕಾರಿಗಳ ಮೂಲಕ ಮತದಾರರಿಗೆ ಧನ್ಯವಾದಗಳು ಎಂಬ ವಿನೂತನ ರಸೀದಿ ನೀಡುವಂತಹ ಪರಂಪರೆಯನ್ನು ಸಹ ಜಾರಿಗೊಳಿಸಲಾಗಿತ್ತು. ಇಂತಹ ಹಲವಾರು ಕ್ರಮಗಳಿಂದಾಗಿ ಉರಿ ಬಿಸಿಲಿನ ಮಧ್ಯೆಯೂ ಮತದಾರರು ಮತಚಲಾಯಿಸಿದ್ದು ಈ ಬಾರಿಯ ಮತದಾನದಲ್ಲಿ ಶೇ. 6.25 ರಷ್ಟು ಮತದಾನದಲ್ಲಿ ಹೆಚ್ಚಳವಾಗಿರುವುದಕ್ಕೆ ಸಮಾಧಾನವಾಗಿದೆ ಎಂದು ಅವರು ಹೇಳಿದ್ದಾರೆ.
ಲೋಕಸಭಾ ಚುನಾವಣೆ ಮುಕ್ತ ನ್ಯಾಯಸಮ್ಮತ ರೀತಿಯಲ್ಲಿ ನಡೆಸಿರುವುದಕ್ಕೆ ಮತ್ತು ಮತದಾನದಲ್ಲಿ ಹೆಚ್ಚಳವಾಗಿರುವದಕ್ಕೆ ಜಿಲ್ಲಾಧಿಕಾರಿಗಳಿಗೆ ರಾಜ್ಯ ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿಗಳು ಶುಭಾಶಯವನ್ನು ಸಲ್ಲಿಸಿದ್ದು, ಹಾಗೂ ಸ್ಪೀಪ್ ಸಮಿತಿ ಅಧ್ಯಕ್ಷ ಎಸ್.ಎ. ಜಿಲಾನಿ ಅವರು ಇದಕ್ಕಾಗಿ ಹರ್ಷವನ್ನು ವ್ಯಕ್ತಪಡಿಸಿ ಚುನಾವಣೆ ಕಾರ್ಯಕ್ಕಾಗಿ ಶ್ರಮಿಸಿದ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

