ಬಾಲಕಿ ಮೇಲೆ ಅತ್ಯಾಚಾರ ಆರೋಪ
ಶಹಾಪುರ: ಬಡತನದ ಬವಣೆಯಿಂದಾಗಿ ಹೊಲದಲ್ಲಿ ನೆರೆಹೊರೆಯವರೊಡನೆ ಕೂಲಿ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ದಿನನಿತ್ಯ ಟಂಟಂ(ಆಟೋರಿಕ್ಷಾ) ದಲ್ಲಿ ಕರೆದುಕೊಂಡು ಹೋಗುವವನೆ ಬಾಲಕಿಯೊಬ್ಬಳ ಅಸಹಾಯಕತೆಯನ್ನು ದುರುಪಯೋಗ ಪಡಿಸಿಕೊಂಡು ಪುಸಲಾಯಿಸಿ ಬಲಾತ್ಕಾರ ಮಾಡಿದ ಘಟನೆ ಏ. 8ರಂದು ನಡೆದಿದೆ. ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು ಶಹಾಪುರ ಠಾಣೆಯಲ್ಲಿ ದೂರು ದಾಖಲಾಗಿದೆ. ಶಹಾಪುರ ಠಾಣಾ ಪಿಐ ಜೆಎನ್ ನ್ಯಾಮಗೌಡ ಪ್ರಕರಣ ದಾಖಲಿಸಿಕೊಂಡು ಆರೋಪಿ ಸೋಪಣ್ಣನ ವಿರುದ್ಧ ಕ್ರಮ ಕೈಗೊಂಡಿದ್ದಾರೆ.
ಆರೋಪಿಗೆ ತಕ್ಕ ಶಿಕ್ಷೆಯಾಗಲಿ: ಈ ನಡುವೆ ಏನು ಅರಿಯದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಕ್ಕೆ ಗುರಿಯಾಗಿರುವ ಟಂಟಂ ಚಾಲಕ ಸೋಪಣ್ಣ ಸಾಯಬಣ್ಣ ಭಜಂತ್ರಿ ವಿರುದ್ಧ ಕ್ರಮ ಕೈಗೊಳ್ಳಬೇಕು. ಪೋಲಿಸ ಇಲಾಖೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಜಿಲ್ಲಾಧಿಕಾರಿಗಳು ಈ ಕುರಿತು ಕಾಳಜಿವಹಿಸಿ ನೊಂದ ಬಾಲಕಿಯ ರಕ್ಷಣಗೆ ಮುಂದಾಗಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಜೇವರ್ಗಿಯಲ್ಲಿ ಶ್ರೀದೇವಿಪುರಾಣ ಆರಂಭ
ಜೇವರ್ಗಿ: ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಮಹಾಲಕ್ಷ್ಮೀ ಹಾಗೂ ಈಶ್ವರ ಮಂದಿರಗಳ ವಾಸ್ತು ಶಾಂತಿ ಮತ್ತು ಮೂರ್ತಿ ಪುನರ್ ಪ್ರತಿಷ್ಠಾಪನಾ ಹಾಗೂ ಕಳಸಾರೋಹಣ ಕಾರ್ಯಕ್ರಮದ ನಿಮಿತ್ತ ಶ್ರೀದೇವಿಯ ಪುರಾಣ ಪ್ರವಚನ ಆರಂಭಗೊಂಡಿತು. ಪುರಾಣ ಪ್ರವೀಣ ಬಸವರಾಜ ಶಾಸ್ತ್ರಿ ಕುಕನೂರ ಪುರಾಣ ಸತತ 10 ದಿನಗಳವರೆಗೆ ಈ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಏ. 25ರಿಂದ ಮೇ.5 ರವರೆಗೆ ದೇವಿಪುರಾಣ ನಡೆಯಲಿದೆ. ಪುರಾಣ ಕಾರ್ಯಕ್ರಮದಲ್ಲಿ ಭಾಗವಹಿಸುವ ಭಕ್ತಾದಿಗಳಿಗೆ ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿತ್ತು. ಪುರಾಣ ಕಾರ್ಯಕ್ರಮದಲ್ಲಿ ಪಟ್ಟಣದ ಸದ್ಭಕ್ತಾದಿಗಳು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

