ಗುಲ್ಬರ್ಗಾ

ಜ್ಞಾನಕ್ಕೆ ಹಿರಿ ಕಿರಿದೆಂಬ ಭೇದ-ಭಾವವಿಲ್ಲ

Published On :

ಯಾದಗಿರಿ: ಮನುಷ್ಯ ಜೀವನ ಪರಮ ಶ್ರೇಷ್ಠವಾಗಿದೆ. ಮಾನವನಾಗಿ ಜನ್ಮ ತಾಳುವುದೇ ಮಹಾಭಾಗ್ಯ. ಅದಕ್ಕಾಗಿ ವಿದ್ಯಾರ್ಥಿಗಳು ಜೀವನ ಪ್ರೀತಿ ರೂಢಿಸಿಕೊಳ್ಳಬೇಕೆಂದು ಶಾಸಕ ಡಾ. ಎ.ಬಿ ಮಾಲಕರಡ್ಡಿ ಕರೆ ನೀಡಿದ್ದಾರೆ.
ನಗರದ ಸರ್ಕಾರಿ ಪದವಿ ಕಾಲೇಜಿನಲ್ಲಿ ನಡೆದ ವಾರ್ಷಿಕ ಸ್ನೇಹಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿ ಜ್ಞಾನಕ್ಕೆ ಹಿರಿ ಕಿರಿದೆಂಬ ಬೇಧ-ಭಾವವಿಲ್ಲ. ನಿಷ್ಠೆ, ಶ್ರದ್ಧೆ, ಪ್ರಾಮಾಣಿಕತೆಯಿಂದ ಪ್ರಯತ್ನಿಸಿದಲ್ಲಿ ಜ್ಞಾನವನ್ನು ಸಂಪಾದಿಸಿಕೊಳ್ಳಬಹುದು ಎಂದರು. ಸಾಧನೆಯ ಹಾದಿಯಲ್ಲಿ ನಡೆಯುವಾಗ ಅದಮ್ಯ ಉತ್ಸಾಹ ಮತ್ತು ಅಪ್ಪಟ ಪ್ರಯತ್ನಶೀಲತೆಯೊಂದಿಗೆ ಮುಂದುವರೆದಲ್ಲಿ ನಿಶ್ಚಿತ ಗುರಿಯನ್ನು ಖಂಡಿತ ತಲುಪಬಹುದೆಂದು ಅಭಿಪ್ರಾಯಪಟ್ಟರು.
ಸಂಬಂಧಗಳನ್ನು ಗಟ್ಟಿಗೊಳಿಸುವಂತಾಗಬೇಕು:ಮುಖ್ಯಅತಿಥಿಗಳಾಗಿದ್ದ ಗುಲ್ಬರ್ಗ ವಿ.ಜಿ ಮಹಿಳಾ ಕಾಲೇಜಿನ ಪ್ರಾಧ್ಯಾಪಕ ಡಾ. ಈಶ್ವರಯ್ಯಮಠ ಮಾತನಾಡಿ ಇಂದು ಶಿಕ್ಷಿತರಾದವರು ಸ್ವಾರ್ಥಿಗಳಾಗಿ ಸಂಕುಚಿತ ಭಾವದಿಂದ ವರ್ತಿಸುತ್ತಿರುವುದು ಶಿಕ್ಷಣ ವ್ಯವಸ್ಥೆಯನ್ನು ಅಣಕಿಸುವಂತಾಗಿದೆ.  ನಮ್ಮ ಶಿಕ್ಷಣ ಸಾಮಾಜಿಕ ಮತ್ತು ಕೌಟುಂಬಿಕ ಸಂಬಂಧಗಳನ್ನು ಗಟ್ಟಿಗೊಳಿಸುವಂತಾಗಬೇಕೆಂದು ಅಭಿಪ್ರಾಯಪಟ್ಟರು.
ಪ್ರಾಂಶುಪಾಲ ಡಾ.ಸುಭಾಶ್ಚಂದ್ರ ಕೌಲಗಿ ಅಧ್ಯಕ್ಷತೆ ವಹಿಸಿ ಮಾತನಾಡಿ ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಕಲೆ, ಎನ್‌ಎಸ್‌ಎಸ್ ಮತ್ತು ಎನ್‌ಸಿಸಿಗಳಲ್ಲಿ ತೊಡಗಿಸಿಕೊಂಡರೆ ಸರ್ವಾಂಗೀಣ ಅಭಿವೃದ್ದಿ ಸಾಧ್ಯ ಎಂದು ಹೇಳಿದರು.
ಸಾಂಸ್ಕೃತಿಕ ಹಾಗು ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಈ ಸಂದರ್ಭದಲ್ಲಿ ಬಹುಮಾನ ನೀಡಲಾಯಿತು. ಈ ಸಂಧರ್ಭದಲ್ಲಿ ಮೋನಯ್ಯ ಕಲಾಲ್, ರಾಘವೇಂದ್ರ ಬಂಡಿಮನಿ, ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.