ಗುಲ್ಬರ್ಗಾ

ಗುಂಡಿನ ದಾಳಿ: ಇಬ್ಬರ ಬಂಧನ

Published On :

ಗುಲ್ಬರ್ಗ: ನಗರದ ಅನ್ನಪೂರ್ಣ ಕ್ರಾಸ್ ಬಳಿಯಿರುವ ಬಾರ್‌ವೊಂದರಲ್ಲಿ ಭಾನುವಾರ ನಡೆದಿದ್ದ ಗುಂಡಿನ ದಾಳಿ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕ್ಷುಲ್ಲಕ ಕಾರಣಕ್ಕಾಗಿ ನಡೆದ ಗುಂಡಿನ ದಾಳಿಯಲ್ಲಿ ಜಗತ್ ಕ್ರಾಸ್ ಬಳಿಯಿರುವ ಶರಣಬಸಪ್ಪ ವೆಂಕಪ್ಪ(40) ಎಂಬ ವ್ಯಕ್ತಿ ತೀವ್ರವಾಗಿ ಗಾಯಗೊಂಡಿದ್ದು, ಆತನನ್ನು ಹೈದ್ರಾಬಾದ್‌ನ ಯಶೋಧಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು ಮಾಡಲಾಗಿದೆ.
ಶರಣಬಸಪ್ಪನ ಮೇಲೆ ದಾಳಿ ನಡೆಸಿ ಪರಾರಿಯಾಗಿದ್ದ ಅಯ್ಯೂಬ್ ಫಕೀರ ಸಾಬ ಬಾಗವಾನ್(45) ಹಾಗೂ ಬಾಬರ ತಂದೆ ಹೈದರ್(25) ಎಂಬುವವರನ್ನು ಬಾರ್‌ನಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ದಾಖಲಾದ ಮಾಹಿತಿ ಆಧರಿಸಿ ಬ್ರಹ್ಮಪುರ ಪೊಲೀಸ್ ಠಾಣೆಯ ಪೊಲೀಸರು ಇವರಿಬ್ಬರನ್ನು ಬಂಧಿಸಿ, ಅವರಿಂದ ಪಿಸ್ತೂಲ್ ವಶಪಡಿಸಿಕೊಂಡಿದ್ದಾರೆ. ಈ ಕುರಿತು ಬ್ರಹ್ಮಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಕಳೆದೊಂದು ವಾರದಲ್ಲಿ ನಗರದಲ್ಲಿ ನಡೆದ ಎರಡನೇ ಶೂಟೌಟ್ ಪ್ರಕರಣ ಇದಾಗಿದೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.