ಮರಳು ದಂಧೆ ತಡೆಯದಿದ್ರೆ ಹೋರಾಟ
ಯಾದಗಿರಿ: ಆಂಧ್ರ ಗಡಿಭಾಗವಾದ ಗುರುಮಠಕಲ್ ವ್ಯಾಪ್ತಿಯಲ್ಲಿ ಮರಳು ಮಾಫಿಯಾ ದೌರ್ಜನ್ಯ ಹೆಚ್ಚಾಗುತ್ತಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಟೋಕರಿ ಕೋಲಿ ಸಮಾಜ ಜಿಲ್ಲಾಧ್ಯಕ್ಷ ಉಮೇಶ ಮುದ್ನಾಳ ಆಗ್ರಹಿಸಿದ್ದಾರೆ.
ಎಲೇರಿ ಗ್ರಾಮ ಹಾಗೂ ಆಶಾಪುರ ತಾಂಡದ ಬಡರೈತರ ಹೊಲಗಳಲ್ಲಿ ರಾತ್ರೋರಾತ್ರಿ ಅಕ್ರಮವಾಗಿ ಜೆಸಿಬಿ ಯಂತ್ರ ಮತ್ತು ನಂಬರ್ ಪ್ಲೇಟ್ ಇಲ್ಲದ ಟ್ರಾಕ್ಟರ್ಗಳನ್ನು ಬಳಸಿ ಆಂಧ್ರದ ಲಾರಿಗಳಿಗೆ ತುಂಬಿಸಿ ಮರಳು ಸಾಗಣೆ ಮಾಡಿ ಬಡರೈತರ ಹೊಲಗಳಲ್ಲಿ ದೊಡ್ಡಗಾತ್ರದ ಕಂದಕಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಮರಳು ಸಾಗಣೆಯಿಂದ ಹಣ ಮಾಡಿಕೊಂಡು ರೈತರ ಮೇಲೆ ದೌರ್ಜನ್ಯ, ದಬ್ಬಾಳಿಕೆ ಹಾಗೂ ಜೀವಬೆದರಿಕೆ ಹಾಕಲಾಗುತ್ತಿದೆ. ಇದರಿಂದ ಬಡರೈತರು ಮತ್ತು ಮಹಿಳೆಯರು ಕಂಗಾಲಾಗಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಕೂಡ ಯಾವುದೇ ಪ್ರಯೋಜನವಾಗಿಲ್ಲ ಎಂದು ಮುದ್ನಾಳ ದೂರಿದರು.
ಚುನಾವಣಾ ನೆಪ: ಪೊಲೀಸ್ ಅಧಿಕಾರಿಗಳು ಸಹ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ನೋಡಿದರೂ ನೋಡದಂತೆ ಸುಮ್ಮನಿರುತ್ತಾರೆ. ಚುನಾವಣಾ ನೆಪ ಹೇಳುತ್ತಿರುವ ಅಧಿಕಾರಿಗಳು, ಈಗ ಚುನಾವಣಾ ಕಾರ್ಯ ಮುಗಿದಿದ್ದರೂ ಕ್ಯಾರೆ ಎನ್ನುತ್ತಿಲ್ಲ. ಸಂಬಂಧಪಟ್ಟ ಜಿಲ್ಲಾಮಟ್ಟದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕೂಲಂಕಷವಾಗಿ ಪರಿಶೀಲನೆ ಮಾಡಿ ರೈತರಿಗೆ ನ್ಯಾಯ ಒದಗಿಸಿ ಕೊಡಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ. ಅನ್ಯಾಯಕ್ಕೊಳಗಾಗಿರುವ ಹೊಲದ ಮಾಲೀಕರಿಗೆ ನ್ಯಾಯ ದೊರಕಿಸಿ ಕೋಡಬೇಕು. ಮೇ 3ರೊಳಗೆ ಕ್ರಮ ತೆಗೆದುಕೊಳ್ಳದಿದ್ದರೆ ಮೇ 6ರಂದು ವಿರುದ್ಧ ಬೃಹತ್ ಪ್ರತಿಭಟನೆ ರ್ಯಾಲಿ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಭೀಮರಾಯನಗುಡಿ: 35 ಮರಳು ಲಾರಿ ವಶ
ಶಹಾಪುರ: ಕೃಷ್ಣಾ ನದಿ ತೀರದ ಮರಳನ್ನು ಪ್ರತಿದಿನ ರಾತ್ರಿ ಹಗಲು ಎನ್ನದೆ ಅಕ್ರಮವಾಗಿ ಸಾಗಿಸುತ್ತಿದ್ದ 35 ಲಾರಿಗಳನ್ನು ಭೀಮರಾಯನಗುಡಿ ಹತ್ತಿರ ಪೊಲೀಸ್ ಇಲಾಖೆ ವಶಪಡಿಸಿಕೊಂಡಿದೆ.
ಮರಳು ಸಾಗಿಸುತ್ತಿದ್ದ ಲಾರಿಗಳನ್ನು ತಪಾಸಣೆ ಮಾಡಿದಾಗ ದಾಖಲೆಗಳು ಸಮರ್ಪಕವಾಗಿಲ್ಲದಿರುವುದು ಕಂಡು ಬಂದಿದೆ. ಅಪರಾಧ ವಿಭಾಗದ ಪಿಎಸ್ಐ ದೊಡ್ಡಪ್ಪ 35 ಲಾರಿಗಳನ್ನು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

