ಅವ್ಯವಸ್ಥೆ ಆಗರದಲ್ಲಿ ಪದವಿ ಕಾಲೇಜು
ಯಾದಗಿರಿ: ಜಿಲ್ಲಾ ಕೇಂದ್ರದಲ್ಲಿರುವ ಸರ್ಕಾರಿ ಪದವಿ ಕಾಲೇಜು ಪದವಿ ಮತ್ತು ಸ್ನಾತಕೋತ್ತರ ಪದವಿ ತರಗತಿಗಳನ್ನು ಒಳಗೊಂಡು ಈ ಭಾಗದ ಉತ್ತಮ ಶೈಕ್ಷಣಿಕ ಸಂಸ್ಥೆ ಎನಿಸಿದೆ. ಇಲ್ಲಿನ ಮೂಲ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸಬೇಕೆಂದು ಶಾಸಕ ಡಾ. ಎ.ಬಿ. ಮಾಲಕರಡ್ಡಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ಸಂಬಂಧ ಉನ್ನತ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿರುವ ಅವರು, ಗಾತ್ರದಲ್ಲಿ ಇದೊಂದು ಮಿನಿ ವಿಶ್ವವಿದ್ಯಾನಿಲಯವಾಗಿದ್ದು, ಇಂತಹ ದೊಡ್ಡ ಕಾಲೇಜು ಮೂಲಸೌಲಭ್ಯಗಳಿಂದ ವಂಚಿತವಾಗಿ ಉತ್ತಮ ಶೈಕ್ಷಣಿಕ ವಾತಾವರಣಕ್ಕೆ ಧಕ್ಕೆಯಾಗುವಂತಾಗಿದೆ ಎಂದು ತಿಳಿಸಿದ್ದಾರೆ.
ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಕೊರತೆಯಿದೆ. 5 ಸ್ನಾತಕ ಹಾಗೂ 11 ಸ್ನಾತಕೋತ್ತರ ವಿಭಾಗಗಳಿದ್ದು, ಎಲ್ಲ ವಿಷಯಗಳಲ್ಲೂ ಪೂರ್ಣಕಾಲಿಕ ಉಪನ್ಯಾಸಕರ ಕೊರತೆಯಿದೆ. ಮ್ಯಾನೇಜರ್ ಸಹ ಇಲ್ಲದೆ ಕಚೇರಿ ಕೆಲಸಗಳಿಗೆ ತೊಂದರೆಯಾಗಿದೆ. ಇಬ್ಬರು ಎಸ್ಡಿಎ, ಎಫ್ಡಿಎ, ಕನಿಷ್ಠ ನಾಲ್ಕು ಜನ ಸೇವಕರನ್ನು ನೇಮಿಸಬೇಕು.
ಪೂರ್ಣಕಾಲಿಕ ಬೋಧಕರಿಲ್ಲ: ರಸಾಯನಶಾಸ್ತ್ರ, ಸಮಾಜಕಾರ್ಯ, ಹಿಂದಿ, ಉರ್ದು ವಿಭಾಗಗಳಲ್ಲಿ ಪೂರ್ಣಕಾಲಿಕ ಬೋಧಕರಿಲ್ಲದೇ ತುಂಬಾ ಬಡವಾಗಿವೆ. ಕಟ್ಟಡದ ನೆಲಹಾಸು ಸಂಪೂರ್ಣ ಕುಸಿದಿದ್ದು, ಹಾವು ಚೇಳುಗಳ ಆವಾಸ ಸ್ಥಾನವಾಗಿದೆ. ಕಾಲೇಜಿನ ದುರಸ್ತಿ ಕೆಲಸ ಶೀಘ್ರ ನಡೆಯಬೇಕು. ಶೌಚಾಲಯಗಳಿದ್ದರೂ ಬಳಕೆಗೆ ಯೋಗ್ಯವಾಗಿಲ್ಲ. ಕಾಲೇಜಿನಲ್ಲಿ ಪೀಠೋಪಕರಣಗಳಿಲ್ಲ. ಕಾಲೇಜು ಸುತ್ತ 2.4 ಎಕರೆ ಪ್ರದೇಶಕ್ಕೆ ಕಾಂಪೌಂಡ್ ನಿರ್ಮಿಸಬೇಕಿದೆ ಎಂದು ತಿಳಿಸಿದ್ದಾರೆ.
ಸ್ನಾತಕೋತ್ತರ ವಿಭಾಗಗಳಿಗಾಗಿ ಪ್ರತ್ಯೇಕ ಕಟ್ಟಡಕ್ಕೆ ಈಗಾಗಲೇ ಹೆಚ್ಚುವರಿ ಕೊಠಡಿಗಳ ನಿರ್ಮಾಣಕ್ಕೆ 75 ಲಕ್ಷ ಮಂಜೂರಾಗಿದ್ದು, ಇನ್ನೂ 8 ಕೊಠಡಿಗಳ ಅಗತ್ಯವಿದೆ. ಈ ಕಾಲಕ್ಕೆ ಅನುಗುಣವಾಗಿ ಸಕಲ ಸೌಲಭ್ಯ ಹೊಂದಿದ ಗ್ರಂಥಾಲಯದ ಅವಶ್ಯವಿದ್ದು, ಪ್ರತ್ಯೇಕ ಕಟ್ಟಡ ನಿರ್ಮಾಣ ಮಾಡಬೇಕು. ಅಲ್ಲದೆ ವಿದ್ಯಾರ್ಥಿಗಳನ್ನು ಸಾಂಸ್ಕೃತಿಕವಾಗಿ ಸಜ್ಜುಗೊಳಿಸಬೇಕಿದ್ದು, ಸಭಾಂಗಣ ನಿರ್ಮಿಸಬೇಕೆಂದು ಒತ್ತಾಯಿಸಿದ್ದಾರೆ.
ಅಲ್ಲದೆ ಕಾಲೇಜಿನ ಶೈಕ್ಷಣಿಕ ಹಿತದೃಷ್ಟಿಯಿಂದ ಹೊಸ ಕಾಲೇಜು ಕಟ್ಟಡದ ಸುತ್ತಲೂ ಕಾಂಪೌಂಡ್ ಅಗತ್ಯವಿದ್ದು, ಅದರ ನಿರ್ಮಾಣಕ್ಕೆ 50 ಲಕ್ಷ ಅನುದಾನ ಬಿಡುಗಡೆ ಮಾಡಬೇಕೆಂದು ಮಾಲಕರಡ್ಡಿ ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

