ಗುಲ್ಬರ್ಗಾ

ಎಸ್ಸೆಸ್ಸೆಲ್ಸಿ: ಶೈಕ್ಷಣಿಕ ಕಾರ್ಯಾಗಾರ ಇಂದು

Published On :

ಸೈದಾಪುರ: ಜಿಲ್ಲೆಯ ಯಾದಗಿರಿ ಸ್ಟೇಷನ್ ರಸ್ತೆಯ ವಿದ್ಯಾ ಮಂಗಳ ಕಾರ್ಯಾಲಯದಲ್ಲಿ ಫೆ. 4ರಂದು ಎಸ್ಸೆಸ್ಸ್ಸೆಲ್ಸಿ ಫಲಿತಾಂಶವನ್ನು ಉತ್ತಮ ಪಡಿಸುವ ಹಾಗೂ ಗುಣಾತ್ಮಕ ಶಿಕ್ಷಣ ಕುರಿತ ಶೈಕ್ಷಣಿಕ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
  ಸಾರ್ವಜನಿಕ ಶಿಕ್ಷಣ ಇಲಾಖೆ, ಎಂಆರ್‌ಎಂ ಶಿಕ್ಷಣ ಸಂಸ್ಥೆ ಹಾಗೂ ಯಾದಗಿರಿಯ ಜಿಲ್ಲಾ ಪ್ರೌಢಶಾಲಾ ಮುಖೋಪಾಧ್ಯಾಯರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಶಾಸಕರಾದ ಡಾ.ಎ.ಬಿ. ಮಾಲಕರಡ್ಡಿ ಉದ್ಘಾಟಿಸಲಿದ್ದಾರೆ. ಜಿಲ್ಲಾಧಿಕಾರಿ ಎಫ್.ಆರ್. ಜಮಾದಾರ ಅಧ್ಯಕ್ಷತೆ ವಹಿಸುವರು. ವಿಶೇಷ ಉಪನ್ಯಾಸಕರಾಗಿ ಶಿಕ್ಷಣ ತಜ್ಞ ಗುರುರಾಜ ಕರ್ಜಗಿ ಆಗಮಿಸಲಿದ್ದಾರೆ.
  ಕಾರ್ಯನಿರ್ವಾಹಕ ಅಧಿಕಾರಿ ಎಸ್.ಎ. ಜಿಲಾನಿ, ವೆಂಕಟರಡ್ಡಿ ಮುದ್ನಾಳ, ಶಶಿಲ ಜಿ. ನಮೋಶಿ, ಶಿಕ್ಷಣ ಇಲಾಖೆಯ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಸಂಪನ್ಮೂಲ ವ್ಯಕ್ತಿಗಳಾಗಿ ಮಡಬಾವಿ. ಟಿ.ಬಿ, ಅಳಗುಂಡೆ ಆರ್.ಎಸ್ ಉಪನ್ಯಾಸ ನೀಡಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.