ಮೂಲ ಸೌಲಭ್ಯಕ್ಕೆ ಆಗ್ರಹ
ಗುಲ್ಬರ್ಗ: ಬೆಣ್ಣೆತೊರಾ ಯೋಜನೆಯ ಹಿನ್ನೀರಿನಿಂದ ಮುಳುಗಡೆಯಾದ ಪುನರ್ವಸತಿ ಕೇಂದ್ರಗಳಿಗೆ ಮೂಲಭೂತ ಸೌಕರ್ಯ ಒದಗಿಸಲು ಕರ್ನಾಟಕ ದಲಿತ ಸಂಘರ್ಷ ಸಮಿತಿ ಫೆ.17ರಂದು ಮುಖ್ಯ ಅಭಿಯಂತರ ಗುಲ್ಬರ್ಗ ಕಚೇರಿಗೆ ಬೀಗಮುದ್ರೆ ಹಾಕಿ ಪ್ರತಿಭಟನೆ ಮಾಡಲುಗುವುದು ಎಂದು ಸಂಚಾಲಕ ಮೋಹನ್ ಕಟ್ಟಿಮನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೆಣ್ಣೆತೋರಾ ಯೋಜನೆ ಅಡಿಯಲ್ಲಿ ನಿರಾಶ್ರಿತರಾದ ಸಾವಿರಾರು ಕುಟುಂಬಗಳು ಅನೇಕ ಸಮಸ್ಯೆಗಳ ಸುಳಿವಿನಲ್ಲಿ ಸಿಲುಕಿ ದಶಕಗಳ ಕಾಲ ಕಳೆದರೂ ಪುನರ್ವಸತಿ ಕೇಂದ್ರಗಳು ತೊಂದರೆ ಅನುಭವಿಸುತ್ತಿವೆ. ಇದರ ಬಗ್ಗೆ ಮುಖ್ಯ ಅಭಿಯಂತರರಿಗೆ ಅನೇಕ ಬಾರಿ ಸಮಿತಿಯ ವತಿಯಿಂದ ಮನವಿ ಸಲ್ಲಿಸಿದರೂ ಅಧಿಕಾರಿಗಳು ಸ್ಪಂದಿಸಿಲ್ಲ. ಅಂಕಲಗಾ ಪುನರ್ವಸತಿ ಕೇಂದ್ರಕ್ಕೆ ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಂಬಂಧಪಟ್ಟ ಶಾಸಕರು ಸ್ಥಳ ಪರಿಶೀಲನೆ ಮಾಡಿ ಅಧಿಕಾರಿಗಳಿಗೆ ಆದೇಶಿಸಿದರೂ ಅಧಿಕಾರಿಗಳು ಸ್ಪಂದಿಸಿಲ್ಲ. ಮುಳುಗಡೆಯಾದ ಅನೇಕ ಗ್ರಾಮಗಳ ಹೆಚ್ಚುವರಿ ಕುಟುಂಬಗಳಿಗೆ ನಿವೇಶನ ಹಾಗೂ ರುದ್ರಭೂಮಿ ವಿಶೇಷ ಘಟಕ ಯೋಜನೆಯ ಕಾಮಗಾರಿಗಳು ಸೇರಿದಂತೆ ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡಕೊಳ್ಳಲು ಸಂಬಂಧಪಟ್ಟಿ ಅಧಿಕಾರಿಗಳಿಗೆ ಕ್ರಮ ಕೈಗೊಂಡು ಸಿಇ ಅವರನ್ನು ಸೇವೆಯಿಂದ ಅಮಾನತುಗೊಳಿಸಬೇಕು. ಅವರ ಅಧಿಕಾರಾವಧಿಯಲ್ಲಿನ ಎಲ್ಲ ಕಾಮಗಾರಿಗಳನ್ನು ತನಿಖೆಗೆ ಒಳಪಡಿಸಿ ಅವರ ಮೇಲೆ ಕ್ರಿಮಿನಲ್ ಮೊಕದ್ದಮೆ ಹಾಕಲು ಈ ಚಳವಳಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಸಂಚಾಲಕ ವಿಜಯಕುಮಾರ ಅಂಕಲಗಿ, ಮೋಹನ ಕಟ್ಟಿಮನಿ, ಅಶೋಕ ಸಂಗೀತಕರ, ಅಂಬಾರಾಯ ಜಿಲ್ಲಾಧಿಕಾರಿಗೆ ಸಲ್ಲಿಸಿದ ಮನವಿಯಲ್ಲಿ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

