ಗುಲ್ಬರ್ಗಾ

ಗಂಗಾಮತ ಯುವ ಘಟಕದ ಅಧ್ಯಕ್ಷರಾಗಿ ಮಹಾದೇವಪ್ಪ

Published On :

ಗುರುಮಠಕಲ್: ಚಪೇಟ್ಲಾ ಗ್ರಾಮದ ಗಂಗಾಮತ ಯುವ ಘಟಕದ ಅಧ್ಯಕ್ಷರಾಗಿ ಮಹಾದೇವಪ್ಪ ಕೊಟಗೇರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಗಂಗಾಮತ ಕೋಲಿ ಸಮಾಜದ ಅಧ್ಯಕ್ಷ ಚುಕ್ಕಪ್ಪ ನಾಯಕ ತಿಳಿಸಿದ್ದಾರೆ. ಉಪಾಧ್ಯಕ್ಷರಾಗಿ ಶರಣಪ್ಪ ಆದ್ಗಲ್, ಶರಣಪ್ಪ ಚಂದ್ರಯುಡು ಮತ್ತು ಮಲ್ಲಿಕಾರ್ರುನ ಆದ್ಗಲ್ ಕಾರ್ಯದರ್ಶಿಯಾಗಿ, ಹನುಮಂತು ನಾಯಕೋಡಿ ಖಜಾಂಚಿಯಾಗಿ ಆಯ್ಕೆಯಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ರೇಡಿಯೋ ಪಠ್ಯ ವಿಶ್ಲೇಷಣೆ ಸದುಪಯೋಗಕ್ಕೆ ಕರೆ
ಸುರಪುರ: 10ನೇ ತರಗತಿಯ ಫಲಿತಾಂಶ ಹೆಚ್ಚಳ ಮತ್ತು ಮಕ್ಕಳ ಜ್ಞಾನವೃದ್ಧಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರ್ಕಾರ ಆಕಾಶವಾಣಿ ಮೂಲಕ ಪಠ್ಯ ವಿಷಯ ಬಿತ್ತರಿಸುವ ನೂತನ ಕಾರ್ಯಕ್ರಮವನ್ನು ಜಾರಿಗೊಳಿಸಿದೆ. ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯಬೇಕು ಎಂದು ಕ್ಷೇತ್ರಶಿಕ್ಷಣಾಧಿಕಾರಿ ಎ.ವಿ. ಕೆಂಪರಂಗಯ್ಯ  ಕರೆ ನೀಡಿದರು. ಸಮೀಪದ ರುಕ್ಮಾಪುರದ ಮಹರ್ಷಿ ವಾಲ್ಮೀಕಿ ಗ್ರಾಮಾಂತರ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ 10ನೇ ತರಗತಿ ವಿದ್ಯಾರ್ಥಿಗಳಿಗಾಗಿನ ರೇಡಿಯೋ ಪಠ್ಯ ವಿಶ್ಲೇಷಣೆ ಮತ್ತು ನೇರ ಸಂವಾದ ಕಾರ್ಯಕ್ರಮದ ನೇತೃತ್ವ ವಹಿಸಿ  ಅವರು ಮಾತನಾಡಿದರು. ಪ್ರಸಕ್ತ ವಾರ್ಷಿಕ ಪರೀಕ್ಷೆ ಬರೆಯಲಿರುವ 10ನೇ ತರಗತಿ ವಿದ್ಯಾರ್ಥಿಗಳಿಗೆ ಈ ಕಾರ್ಯಕ್ರಮ ಹೆಚ್ಚು ಅನುಕೂಲವಾಗಲಿದೆ. ಪ್ರತಿದಿನ 10.30 ರಿಂದ 11.30ರವರೆಗೆ ಆಕಾಶವಾಣಿ ಮೂಲಕ ಪಠ್ಯ ವಿಷಯದ ಕುರಿತು ಮಾಹಿತಿ ಬಿತ್ತರಿಸಲಾಗುತ್ತಿದೆ ಎಂದು ತಿಳಿಸಿದರು. ಪ್ರತಿ ದಿನ ಒಂದೊಂದು ವಿಷಯಗಳ ಬಗ್ಗೆ ವಿಷಯ ಪರಿಣಿತರು ಪಾಠ ಮಾಡುತ್ತಾರೆ.  ವಿದ್ಯಾರ್ಥಿಗಳೊಂದಿಗೆ ದೂರವಾಣಿ ಮೂಲಕ ನೇರ ಸಂವಾದ ಕಾರ್ಯಕ್ರಮವೂ ಇದೆ. ವಿದ್ಯಾರ್ಥಿಗಳು ಇದರ ಲಾಭ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು. ಶಾಲೆಯ ಮುಖ್ಯಗುರು ಮಹೇಶ ಕುಂಟೋಜಿ, ಶಿಕ್ಷಕರಾದ ಶರಣಪ್ಪ ಹೊಸ್ಮನಿ, ಶಿಕ್ಷಕರು ಇದ್ದರು.

ನಾಳೆ ಪದಗಳ ಗಾಯನ
ಯಾದಗಿರಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜಾನಪದ ಹಾಗೂ ಸಾಂಪ್ರದಾಯಿಕ ಕಲೆಗಳನ್ನು ಪ್ರೋತ್ಸಾಹಿಸುವ ವಿನೂತನ ಯೋಜನೆ 'ಹಾಡೀರೆ ರಾಗಗಳ-ತೂಗೀರೆ ದೀಪಗಳ' ತತ್ತ್ವಪದಗಳ ಗಾಯನ ಕಾರ್ಯಕ್ರಮ ಫೆ. 6ರಂದು ಸುರಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ನಡೆಯಲಿದೆ.  ಕೆಂಭಾವಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಎಚ್. ಎಂ. ವಗ್ಗರ ಅಧ್ಯಕ್ಷತೆ ವಹಿಸುವರು   ವಲಯ ಕನ್ನಡ ಮತ್ತು ಸಾಹಿತ್ಯ ಪರಿಷತ್ ಅಧ್ಯಕ್ಷ ಕೆಂಭಾವಿ ನಿಂಗನಗೌಡ ದೇಸಾಯಿ ಅತಿಥಿಗಳಾಗಿರುತ್ತಾರೆ. ಆಕಾಶವಾಣಿ ಮತ್ತು ದೂರದರ್ಶನ ಕಲಾವಿದ ಕೆಂಭಾವಿ ಬಸವರಾಜ ಜೆ. ಭಂಡನೂರ ತತ್ತ್ವಪದಗಳನ್ನು ಪ್ರಸ್ತುತಪಡಿಸಲಿದ್ದಾರೆ.

ಪ್ರವೇಶಕ್ಕೆ ಅರ್ಜಿ ಆಹ್ವಾನ
ಯಾದಗಿರಿ: ಮೊರಾರ್ಜಿ ವಸತಿ ಶಾಲೆಗಳಲ್ಲಿ 6ರಿಂದ 10ನೇ ತರಗತಿವರೆಗೆ,  ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ, ಅಟಲ್ ಬಿಹಾರಿ ವಾಜಪೇಯಿ ಮಾದರಿ ವಸತಿ ಶಾಲೆಗಳಲ್ಲಿ 6ರಿಂದ 12ನೇ ತರಗತಿವರಗೆ ಕನ್ನಡ ಮತ್ತು ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಲು ಪ್ರತಿಭಾನ್ವಿತ ಗ್ರಾಮೀಣ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ.  ಈ ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಇನ್ನಿತರ ಸಾಮಗ್ರಿಗಳನ್ನು  ನೀಡುವುದರ ಜೊತೆಗೆ ಉತ್ತಮ ವಿದ್ಯಾಭ್ಯಾಸವನ್ನೂ  ನೀಡಲಾಗುತ್ತದೆ  ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಈ ಶಾಲೆಗಳಲ್ಲಿ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಅಂದರೆ ಸಾಮಾನ್ಯ ವರ್ಗ, ಪರಿಶಿಷ್ಟ ವರ್ಗ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಪ್ರವೇಶ ಲಭ್ಯವಿದೆ. ಮೊರಾರ್ಜಿದೇಸಾಯಿ ವಸತಿ ಶಾಲೆಗಳಿಗೆ 50 ಸೀಟುಗಳು ವಿದ್ಯಾರ್ಥಿನಿಯರಿಗೆ ಮತ್ತು ಕಿತ್ತೂರು ರಾಣಿ ಚೆನ್ನಮ್ಮ ಬಾಲಕಿಯರ ವಸತಿ ಶಾಲೆಗಳಲ್ಲಿ ಶೇ. 100 ರಷ್ಟು ವಿದ್ಯಾರ್ಥಿನಿಯರಿಗೆ ಸೀಟುಗಳು ಲಭ್ಯವಿರುತ್ತದೆ. 2014ರ ಮಾರ್ಚ್ 23ರಂದು ತಾಲ್ಲೂಕು ಕೇಂದ್ರಗಳಲ್ಲಿ ಜಿಲ್ಲಾ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ.
ಮೆರಿಟ್ ಆಧಾರದ ಮೇಲೆ ಮೀಸಲಾತಿ ಅನ್ವಯ ಕೌನ್ಸೆಲಿಂಗ್ ಮೂಲಕ ಆಯ್ಕೆ ನಡೆಯಲಿದೆ.  ಇತರೇ ಜಿಲ್ಲೆಗಳಿಗೆ ವಿದ್ಯಾರ್ಥಿಗಳಿಗೆ ಎರಡನೇ ಆದ್ಯತೆ ನೀಡಲಾಗುವುದು ಅರ್ಜಿಗಳು ತಾಲ್ಲೂಕಿನ ಸಮಾಜ ಕಲ್ಯಾಣಾಧಿಕಾರಿಗಳ ಕಚೇರಿ, ತಾಲ್ಲೂಕಿನ ಮೊರಾರ್ಜಿ ದೇಸಾಯಿ ಮತ್ತು ಕಿತ್ತೂರು ರಾಣಿ ಚೆನ್ನಮ್ಮ

ಬಾಲಕಿಯರ ವಸತಿ ಶಾಲೆಗಳಲ್ಲಿ ಲಭ್ಯವಿರುತ್ತದೆ.
ಪ್ರವೇಶ ಪರೀಕ್ಷೆಗೆ ಫೆ. 3ರಿಂದ ಅರ್ಜಿ ವಿತರಣೆ ಪ್ರಾರಂಭವಾಗಲಿದೆ.  ಭರ್ತಿ ಮಾಡಿದ ಅರ್ಜಿಗಳನ್ನು ಸಂಬಂಧಪಟ್ಟ ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿಗಳಿಗೆ ಸಲ್ಲಿಸಲು  ಫೆ.24 ಕೊನೆಯ ದಿನಾಂಕವಾಗಿರುತ್ತದೆ.  ಪ್ರವೇಶ ಪರೀಕ್ಷೆ ವೇಳಾಪಟ್ಟಿ ಹೀಗಿದೆ. ಮಾರ್ಚ್ 23, ಬೆಳಿಗ್ಗೆ 11ರಿಂದ 1.30 ಗಂಟೆಯವರೆಗೆ ಅರ್ಹತಾ ಪಟ್ಟಿ ಪ್ರಕಟಣೆ, ಏಪ್ರಿಲ್ 7 ರಂದು ಜಿಲ್ಲಾಮಟ್ಟದ ಕೌನ್ಸೆಲಿಂಗ್, ಏ. 21ರಿಂದ ಮೇ 14ರವರೆಗೆ ಆಯಾ ಜಿಲ್ಲೆಗಳಲ್ಲಿ ಕೌನ್ಸೆಲಿಂಗ್ ನಡೆಯುತ್ತದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.