ಗುಲ್ಬರ್ಗಾ

ಭೂಮಾಪನ ಕಾರ್ಯಕ್ಕೆ ಜಿಲ್ಲಾಧಿಕಾರಿ ಚಾಲನೆ

Published On :

ಶಹಾಪುರ: ಭೂ ದಾಖಲೆಗಳನ್ನು ಗಣಕೀಕರಣಗೊಳಿಸುವ ಉದ್ದೇಶದಿಂದ ಪ್ರತಿಯೊಂದು ಗ್ರಾಮದಲ್ಲಿ ರಾಷ್ಟ್ರೀಯ ಭೂ ದಾಖಲೆಗಳ ಆಧುನೀಕರಣ ಯೋಜನೆ ಅಡಿಯಲ್ಲಿ ಭೂಮಾಪನ ಕಾರ್ಯ ಕೈಗೊಳ್ಳಲಾಗಿದ್ದು ಭೂ ಮಾಲೀಕರು ತಮ್ಮ  ಭೂಮಿಯನ್ನು ಸ್ಪಷ್ಟವಾಗಿ ಅಳತೆ ಮಾಡುವುದರ ಮುಖಾಂತರ ದಾಖಲೆಗಳ ಸ್ಪಷ್ಟತೆಗೆ ಅನುಕೂಲವಾಗುತ್ತದೆ ಎಂದು ಯಾದಗಿರಿ ಜಿಲ್ಲಾಧಿಕಾರಿ ಎಫ್.ಆರ್. ಜಮಾದಾರ ತಿಳಿಸಿದರು.
  ತಾಲೂಕಿನ ಮಂಡಗಳ್ಳಿ ಗ್ರಾಮದಲ್ಲಿ ಜಿಲ್ಲಾಡಳಿತದ ವತಿಯಿಂದ ಕೈಗೊಂಡ ಭೂಮಾಪನ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಗ್ರಾಮದ ಎಲ್ಲರೂ ಪರಸ್ಪರ ಸಹಕಾರ ಮನೊಭಾವನೆಯಿಂದ ಭೂಮಾಪನ ಕಾರ್ಯಕ್ಕೆ ಬೆಂಬಲಿಸಿ ಸಹಕಾರ ನೀಡಬೇಕು ಎಂದರು.
ಈ ಸಂದರ್ಭದಲ್ಲಿ ಗ್ರಾಮದ ಸಾರ್ವಜನಿಕರಿಂದ ಅವರು ಅಹವಾಲುಗಳನ್ನು ಸ್ವೀಕರಿಸಿದರು. ಗ್ರಾಮದಲ್ಲಿ ನೈರ್ಸಲ್ಯೀಕರಣ ಸಂಬಂಧ ಅವ್ಯವಸ್ಥೆಯಿದ್ದು ಸಾಂಕ್ರಾಮಿಕ ರೋಗಗಳು ಹೆಚ್ಚಾಗುತ್ತಿವೆ. ಈ ಕುರಿತು ಸಂಬಂಧಿಸಿದ ಪಂಚಾಯತಿಗೆ ಸೂಕ್ತ ಸೂಚನೆ ನೀಡಬೇಕೆಂದು ಗ್ರಾಮಸ್ಥರು ಮನವಿ ಮಾಡಿದರು.
  ಅಧಿಕಾರಿಗಳಾದ ಉಮೇಶ,  ಜಿಪಂ. ಸದಸ್ಯರಾದ ಹನುಮೇಗೌಡ ಮರಕಲ್ ಸಹಾಯಕ ಆಯುಕ್ತರಾದ ಪಿ.ಬಿ. ವಿಜಯ,  ತಹಿಸೀಲ್ದಾರ ಡಿ.ವೈ. ಪಾಟೀಲ್, ಪುಷ್ಪರಾಜ ಹಾಜರಿದ್ದರು. ಸಾರ್ವತ್ರಿಕ ಭೂಮಾಪನ ಕುರಿತು ಅಧಿಕಾರಿಗಳು ವಿವರ ನೀಡಿದರು. ಗ್ರಾಮದ ಮುಖಂಡರು, ಗ್ರಾಪಂ ಅಧ್ಯಕ್ಷರು ಸದಸ್ಯರು, ಗ್ರಾಮಸ್ಥರು, ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.