ಜಿಲ್ಲಾ ಮಟ್ಟದ ಸ್ಕೌಟ್ಸ್, ಗೈಡ್ಸ್ ಸಮಾವೇಶ
ಯಾದಗಿರಿ: ದೇಶದ ಗಡಿ ಭಾಗವನ್ನು ಸೈನಿಕರು ರಕ್ಷಿಸುತ್ತಾರೆ. ಹಾಗೆಯೇ ದೇಶದ ಆಂತರಿಕ ಸೈನಿಕರು ಸ್ಕೌಟ್ಸ್ ಮತ್ತು ಗೈಡ್ಸ್ ಆಗಿರುತ್ತಾರೆಂದು ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಲ್ಲಾ ಕಾರ್ಯದರ್ಶಿ ಸಿ.ಎಮ್. ಪಟ್ಟೇದಾರ ಹೇಳಿದ್ದಾರೆ.
ಚಿರಂಜೀವಿ ಪ್ರೌಢಶಾಲೆಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ಸಮಾವೇಶದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು, ದೇಶಾಭಿಮಾನಿಯಾದವನು ರಾಷ್ಟ್ರವನ್ನು ರಕ್ಷಿಸುತ್ತಾನೆ. ಶಿಕ್ಷಕರು ಮಕ್ಕಳನ್ನು ಜವಾಬ್ದಾರಿಯುತ ನಾಗರಿಕರಾಗಿ ರೂಪಿಸುತ್ತಾರೆ. ಮಕ್ಕಳಲ್ಲಿ ಶಿಸ್ತು, ಧೈರ್ಯ, ದೇಶ ಪ್ರೇಮ, ನಾಡು ನುಡಿ ಬಗ್ಗೆ ಗೌರವ. ಸಮಯ ಪ್ರಜ್ಞೆ ಹಾಗೂ ರಾಷ್ಟ್ರೀಯ ನಾಯಕರ ಬಗ್ಗೆ ಅಭಿಮಾನವನ್ನು ಬೆಳೆಸುವ ಮಹತ್ವದ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದರು.
ಮುಖ್ಯ ಅತಿಥಿಗಳಾಗಿದ್ದ ತರಬೇತಿ ಆಯುಕ್ತರಾದ ಸುಲೋಚನಾ ಬೆಂಜಮಿನ್ ಮಾತನಾಡಿ, ದೇಶಾಭಿಮಾನದ ಕೊರತೆ ಕಾರಣ ಇಂದಿನ ಸಮಾಜದಲ್ಲಿ ಕೊಲೆ, ಸುಲಿಗೆ, ಡಕಾಯತಿ, ಅತ್ಯಾಚಾರ ಮುಂತಾದ ಸಮಾಜಘಾತುಕ ಚಟುವಟಿಕೆಗಳು ಹೆಚ್ಚಾಗಿವೆ. ಯುವಕರಲ್ಲಿ ದೇಶಾಭಿಮಾನ ಬೆಳೆಸುವ ನಿಟ್ಟಿನಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ನ ೆಪಾತ್ರ ಮಹತ್ವದ್ದಾಗಿದೆ ಎಂದರು. ಪ್ರತಿ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ನ ಘಟಕಗಳು ಆರಂಭವಾಗಲಿ ಎಂದು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ನಾಗರತ್ನ ಅನಪೂರ ಹೇಳಿದರು. ಚಿರಂಜೀವಿ ಪ್ರೌಢಶಾಲೆ ಪ್ರಾಂಶುಪಾಲ ಮ್ಯಾಥು ಮೇರಿ ಮಾರ್ಗರೇಟ್ ಮಾತನಾಡಿದರು.
ಇದೇ ಸಂದರ್ಭದಲ್ಲಿ ಮಾನವಿಯಲ್ಲಿ ನಡೆದ ರಾಜ್ಯಮಟ್ಟದ ಕಬ್ಸ್ ಮತ್ತು ಬುಲ್ಬುಲ್ ಉತ್ಸವದಲ್ಲಿ ಭಾಗವಹಿಸಿದ್ದ ಯಾದಗಿರಿ ತಾಲೂಕಿನ ಮುಂಡರಗಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಪದಕ ಮತ್ತು ಪ್ರಮಾಣ ಪತ್ರ ನೀಡಿ ಸನ್ಮಾನಿಸಲಾಯಿತು. ಜಿಲ್ಲಾ ಆರೋಗ್ಯ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷ ಭೀಮರಾಯ ಹಯ್ಯಾಳಪ್ಪನೋರ ಕಾರ್ಯಕ್ರಮವನ್ನು ಉದ್ಘಾಟಿಸಿದರು, ತಾಲೂಕ ದೈಹಿಕ ಶಿಕ್ಷಣಾಧಿಕಾರಿ ಶಂಕರ ಸೋನಾರ, ರಾಯಚೂರ ಜಿಲ್ಲಾ ಸಂಘಟನಾ ಆಯುಕ್ತ ರಾವುತ ರಾವ್, ಯಾದಗಿರಿ ಜಿಲ್ಲಾ ಸಂಘಟನಾ ಆಯುಕ್ತ ರಾಘವೇಂದ್ರ ಉಪಸ್ಥಿತರಿದ್ದರು, 140ಕ್ಕೂ ಹೆಚ್ಚು ಸ್ಕೌಟ್ ಮತ್ತು ಗೈಡ್ಸ್ ವಿಭಾಗದ ಶಿಬಿರಾರ್ಥಿಗಳು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

