'ಆಪ್'ಗೆ ಜನಸಂಗ್ರಾಮ ಪರಿಷತ್ ಬೆಂಬಲ
ಕನ್ನಡಪ್ರಭ ವಾರ್ತೆ ರಾಯಚೂರು ಫೆ.9
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಆಮ್ ಆದ್ಮಿ ಪಾರ್ಟಿ ಅಭ್ಯರ್ಥಿಗಳಿಗೆ ಜನಸಂಗ್ರಾಮ ಪರಿಷತ್ ಬೆಂಬಲಿಸಲಿದೆ ಎಂದು ಜನಸಂಗ್ರಾಮ ಪರಿಷತ್ತಿನ ರಾಜ್ಯ ಸಂಚಾಲಕ, ಸಮಾಜ ಪರಿವರ್ತನಾ ಸಮುದಾಯದ ಮುಖಂಡ ಎಸ್.ಆರ್.ಹಿರೇಮಠ ತಿಳಿಸಿದರು.
ನಗರದಲ್ಲಿ ಭಾನುವಾರ ಜನಸಂಗ್ರಾಮ ಪರಿಷತ್ ಮತ್ತು ಆಮ್ ಆದ್ಮಿ ಪಾರ್ಟಿ ಕರೆದಿದ್ದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದೇಶದಲ್ಲಿ ಸದ್ಯದ ರಾಜಕೀಯ ಪರಿಸ್ಥಿತಿಯಲ್ಲಿ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ಗೆ ಪರ್ಯಾಯವಾಗಿ ಜನತೆಗೆ ಉತ್ತಮ ಆಡಳಿತ ನೀಡಬಲ್ಲ ಶಕ್ತಿ ಆಮ್ ಆದ್ಮಿ ಪಾರ್ಟಿಗೆ ಮಾತ್ರ ಇದೆ. ಈ ಹಿನ್ನೆಲೆಯಲ್ಲಿ ಪರ್ಯಾಯ ಶಕ್ತಿಯಾಗಿ ಬೆಳೆಸುವ ನಿಟ್ಟಿನಲ್ಲಿ ಆಮ್ ಆದ್ಮಿ ಪಾರ್ಟಿಯಿಂದ ಕಣಕ್ಕಿಳಿಯುವ ಉತ್ತಮ ಅಭ್ಯರ್ಥಿಗಳನ್ನು ಜನಸಂಗ್ರಾಮ ಪರಿಷತ್ ಬೆಂಬಲಿಸಲಿದೆ ಎಂದು ಹೇಳಿದರು.
ಬೆಂಬಲ ಮಾತ್ರ..: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪರಿಷತ್ತು ಆಮ್ ಆದ್ಮಿ ಪಾರ್ಟಿಯ ಅಭ್ಯರ್ಥಿಗಳ ಪರವಾಗಿ ಪ್ರಚಾರದಲ್ಲಿ ಪಾಲ್ಗೊಳ್ಳಲಿದೆ. ಪರಿಷತ್ನ ಕಾರ್ಯಕರ್ತರು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಬದಲಿಗೆ ಆಮ್ ಆದ್ಮಿ ಪಾರ್ಟಿಯನ್ನು ಬೆಂಬಲಿಸಲಿದ್ದಾರೆಂದರು.
ಈ ಹಿಂದೆಯೂ ತಾವು 1989ರಿಂದ ವಿವಿಧ ಚುನಾವಣೆಗಳಲ್ಲಿ ಸೂಕ್ತ ಅಭ್ಯರ್ಥಿಗಳ ಪರ ಪ್ರಚಾರ ಕೈಗೊಂಡಿದ್ದು, ಬಿಜಾಪುರದಲ್ಲಿ ಕಳೆದ ತಿಂಗಳು ನಡೆದ ಜನಸಂಗ್ರಾಮ ಪರಿಷತ್ತಿನ ಸಭೆಯಲ್ಲಿ ಆಮ್ ಆದ್ಮಿ ಪಾರ್ಟಿಯನ್ನು ಬೆಂಬಲಿಸಲು ನಿರ್ಧರಿಸಲಾಯಿತೆಂದು ಹೇಳಿದರು.
ನುಡಿದಂತೆ ನಡೆಯುವ “A®é’: ಆಮ್ ಆದ್ಮಿ ಪಾರ್ಟಿಯು ದೆಹಲಿಯಲ್ಲಿ ಈಗಷ್ಟೇ ಅಧಿಕಾರ ಪಡೆದಿದೆ. ಉತ್ತಮ ಆಡಳಿತ ನೀಡುವ ಪ್ರಯತ್ನದಲ್ಲಿದೆ. ಅದಕ್ಕೆ ಸಾಕಷ್ಟು ಕಾಲವಕಾಶ ಬೇಕಾಗುತ್ತದೆ. ಅವ್ಯವಸ್ಥೆಯಿಂದ ಕೂಡಿದ ದೇಶದಲ್ಲಿ ದಿಢೀರ್ ಸುಧಾರಣೆ ತರುವುದು ಕಷ್ಟದ ಕೆಲಸವೇ ಸರಿ. ಈ ನಿಟ್ಟಿನಲ್ಲಿ ಆಮ್ ಆದ್ಮಿ ಪಾರ್ಟಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಮತದಾರರಿಗೆ ನೀಡಿದ ಭರವಸೆಯಂತೆಯೇ ನಡೆದುಕೊಳ್ಳುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಜನಸಂಗ್ರಾಮ ಪರಿಷತ್ ಸಂಚಾಲಕ ರಾಘವೇಂದ್ರ ಕುಷ್ಟಗಿ ಮಾತನಾಡಿ, ಜನಸಂಗ್ರಾಮ ಪರಿಷತ್ಗೆ ಸದ್ಯ ಪ್ರಮುಖ ರಾಜಕೀಯ ಪಕ್ಷಗಳನ್ನು ಮುಂಬರುವ ಚುನಾವಣೆಯಲ್ಲಿ ಸೋಲಿಸುವುದು ಮೊದಲಾದ್ಯತೆ. ಈ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಾರ್ಟಿ ಬೆಂಬಲಿಸಿ ಮನೆ ಮನೆಗೆ ತೆರಳಿ ಮತಯಾಚಿಸುವುದಾಗಿ ಹೇಳಿದರು.
ಶಿವನಗೌಡ ನಾಯಕ ಅತೀ ಭ್ರಷ್ಟ: ಜಿಲ್ಲೆಯಲ್ಲಿ ಹಿಂದುಳಿದ ದೇವದುರ್ಗ ತಾಲೂಕಿನ ಅಭಿವೃದ್ಧಿ ಹೆಸರಿನಲ್ಲಿ ಕೋಟ್ಯಂತರ ರು. ಕೊಳ್ಳೆ ಹೊಡೆದಿರುವ ಮಾಜಿ ಸಚಿವ ಶಿವನಗೌಡ ನಾಯಕ ಅತೀ ಭ್ರಷ್ಟ ರಾಜಕಾರಣಿಯಾಗಿದ್ದಾರೆ. ಅವರ ಅವಧಿಯಲ್ಲಿ ವಸತಿ ಸೇರಿ ವಿವಿಧ ಯೋಜನೆಗಳಲ್ಲಿ ಭಾರೀ ಅಕ್ರಮ ನಡೆಸಿದ್ದು ಜನಸಂಗ್ರಾಮ ಪರಿಷತ್ತು ಬಯಲಿಗೆಳೆಯುವಲ್ಲಿ ಯಶಸ್ವಿಯಾಗಿದೆ ಎಂದರು.
ಆಮ್ ಆದ್ಮಿ ಪಾರ್ಟಿ ಮುಖಂಡ ರವಿಕೃಷ್ಣ ರೆಡ್ಡಿ ಮಾತನಾಡಿ, ಸಮಾಜದಲ್ಲಿ ಸಮಾನತೆ, ಉತ್ತಮ ಆಡಳಿತ, ಭ್ರಷ್ಟಾಚಾರ ಮುಕ್ತ ದೇಶ ನಿರ್ಮಾಣದ ಕನಸಿನೊಂದಿಗೆ ಆಮ್ ಆದ್ಮಿ ಪಾರ್ಟಿ ರಾಜ್ಯದಲ್ಲೂ ಸ್ಪರ್ಧೆಗಿಳಿಯಲಿದೆ. ಇದುವರೆಗೆ ಜನಸಂಗ್ರಾಮ ಪರಿಷತ್ತಿನೊಂದಿಗೆ ಭ್ರಷ್ಟಾಚಾರದ ವಿರುದ್ಧದ ಹೋರಾಟದಲ್ಲಿ ಪಾರ್ಟಿ ಕೈಜೋಡಿಸಿದ್ದು, ಚುನಾವಣೆಯಲ್ಲಿ ಪರಿಷತ್ತು ಪಾರ್ಟಿಗೆ ಬೆಂಬಲಿಸಲಿದೆ ಎಂದರು.
ಅಭಿಯಾನ: ಹೈ.ಕ. ಭಾಗದಲ್ಲಿ ಪಾರ್ಟಿಯಿಂದ ಮನೆ ಮನೆಯಲ್ಲಿ ಆಮ್ ಆದ್ಮಿ ಎಂಬ ಘೋಷಣೆಯೊಂದಿಗೆ ಪಾರ್ಟಿಯಿಂದ ಅಭಿಯಾನ ಆರಂಭಿಸಲಾಗಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಾರ್ಟಿಯು ರಾಜ್ಯದ ಎಲ್ಲ ಕಡೆ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಚಿಂತನೆ ನಡೆಸಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜನಸಂಗ್ರಾಮ ಪರಿಷತ್ ಮತ್ತು ಆಮ್ ಆದ್ಮಿ ಪಾರ್ಟಿಯ ಪ್ರಮುಖರಾದ ಡಾ. ವಿ.ಎ. ಮಾಲಿಪಾಟೀಲ್, ಬಂದಪ್ಪಗೌಡರು, ಖಾಜಾ ಅಸ್ಲಂ ಪಾಷಾ, ಶಿವಕುಮಾರ್, ಶಾಂತಲಾ ದಾಮ್ಲೆ ಮತ್ತಿತರರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

