ಸಮರ್ಪಕ ಪಡಿತರ ಧಾನ್ಯ ವಿತರಣೆಗೆ ಆಗ್ರಹ
ಕೆಂಭಾವಿ: ಸಮೀಪದ ಏವೂರ ಗ್ರಾಮದಲ್ಲಿ ಕಳೆದ ತಿಂಗಳು ಕಳ್ಳ ಸಾಗಾಟ ಮಾಡುತ್ತಿದ್ದ ಪಡಿತರ ಧಾನ್ಯವನ್ನು ವಶಪಡಿಸಿಕೊಂಡು ಇಬ್ಬರ ಮೇಲೆ ಆಹಾರ ಇಲಾಖೆಯ ಅಧಿಕಾರಿಗಳು ಮೊಕದ್ದಮೆ ಹೂಡಿದ್ದು, ಅವರ ಮೇಲೆ ಸೂಕ್ತ ಕ್ರಮ ಕೈಗೊಂಡು ತಾಲೂಕಿನ ಎಲ್ಲ ಪಡಿತರ ಅಂಗಡಿಗಳಲ್ಲಿ ಸಮರ್ಪಕವಾಗಿ ಪಡಿತರ ಧಾನ್ಯವನ್ನು ವಿತರಿಸಲು ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ. ಈ ಕುರಿತು ಜಿಲ್ಲಾಧಿಕಾರಿಗೆ ಪತ್ರ ಬರೆದಿರುವ ಸಮಿತಿಯ ಹೋಬಳಿ ಸಂಚಾಲಕ ಶರಣಪ್ಪ ಗಾಯಕವಾಡ ಅನ್ನಭಾಗ್ಯ ಯೋಜನೆಯ ಬಿಪಿಎಲ್, ಅಂತ್ಯೋದಯ ಪಡಿತರ ಚೀಟಿದಾರರಿಗೆ ವಿತರಿಸಬೇಕಾದ ಧಾನ್ಯವನ್ನು ರಾಜಕೀಯ ಪ್ರೇರಿತವಾಗಿ ಊರಿನ ಕೆಲವರು ನ್ಯಾಯಬೆಲೆ ಅಂಗಡಿಯ ಜೊತೆ ಶಾಮೀಲಾಗಿ ಪಡಿತರ ಧಾನ್ಯವನ್ನು ಬೇರೆ ರಾಜ್ಯಗಳಿಗೆ ರವಾನೆ ಮಾಡಲು ಹೊಂಚು ಹಾಕಿದ್ದರು. ಇದನ್ನು ಮನಗಂಡ ನಮ್ಮ ಸಂಘಟನೆಯ ಸದಸ್ಯರು ಇಲಾಖೆಗೆ ದೂರು ಸಲ್ಲಿಸಿದಾಗ ಈ ಪ್ರಕರಣ ಬಯಲಿಗೆ ಬಂದಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು ಪಡಿತರದಾರರಿಗೆ ನ್ಯಾಯ ಒದಗಿಸಬೇಕೆಂದು ಕೋರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

