ಗ್ರಾಹಕರಿಗೆ ಬ್ಯಾಂಕ್ ಮುಷ್ಕರ ಬಿಸಿ
ಗುಲ್ಬರ್ಗ: ವೇತನ ಪರಿಷ್ಕರಣೆ ಮಾಡಬೇಕು ಹಾಗೂ ಬ್ಯಾಂಕಿಂಗ್ ವಲಯದಲ್ಲಿನ ಸುಧಾರಣೆ ಕ್ರಮಗಳನ್ನು ತಕ್ಷಣ ನಿಲ್ಲಿಸಬೇಕೆಂದು ಆಗ್ರಹಿಸಿ ಫೆ.10 ಮತ್ತು 11ರ ಎರಡು ದಿನಗಳ ಅಖಿಲ ಭಾರತ ಮುಷ್ಕರದ ಹಿನ್ನೆಲೆಯಲ್ಲಿ ಗುಲ್ಬರ್ಗ ನಗರ ಹಾಗೂ ಜಿಲ್ಲಾದ್ಯಂತ ವಿವಿಧ ಬ್ಯಾಂಕುಗಳ ನೌಕರರು ಕೆಲಸ ಸ್ಥಗಿತಗೊಳಿಸಿ ಮುಷ್ಕರಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ.
ಇದರಿಂದಾಗಿ ಗುಲ್ಬರ್ಗ ಮಹಾನಗರ ಹಾಗೂ ಜಿಲ್ಲೆಯ ವಿವಿಧೆಡೆಗಳಲ್ಲಿ ಬ್ಯಾಂಕ್ಗಳಲ್ಲಿ ಕೆಲಸ ಸಂಪೂರ್ಣ ಸ್ಥಗಿತಗೊಂಡಿತ್ತು. ಸಾಮಾನ್ಯ ಗ್ರಾಹಕರು ಹಾಗೂ ರೈತರು ಪರದಾಡುವಂತಾಯ್ತು. ಗ್ರಾಹಕರಿಗೆ ಹಣದ ಅಗತ್ಯವಿರುವುದರಿಂದ ಎಟಿಎಂ ಮೊರೆ ಹೋಗಬೇಕಾಯ್ತು. ಮುಷ್ಕರದ ಹಿನ್ನೆಲೆಯಲ್ಲಿ ಎಟಿಎಂಗಳಲ್ಲೂ ತುಂಬ ಜನದಟ್ಟಣೆ ಕಂಡಿತು.
ಬೃಹತ್ ರ್ಯಾಲಿ: ಮುಷ್ಕರದ ಅಂಗವಾಗಿ ಬ್ಯಾಂಕ್ ನೌಕರ ಸಂಘಟನೆಗಳ ಬೃಹತ್ ರ್ಯಾಲಿ ಸೂಪರ್ ಮಾರ್ಕೆಟ್ ಸ್ಬಿಎಚ್ ವಲಯ ಕಚೇರಿಯ ಮುಂದೆ ನಡೆಯಿತು. ರ್ಯಾಲಿಯಲ್ಲಿ ನೌಕರ ಸಂಘಟನೆಗಳ ಹಿರಿಯರು ಅನೇಕರು ಮಾತನಾಡಿದರು. ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ ಗುಲ್ಬರ್ಗ ಜಿಲ್ಲಾ ಘಟಕದ ಸಂಚಾಲಕರಾದ ಕಿರಣ ಚಿವಟೆ, ಯೂ. ದಯಾನಿಧಿ, ಎಲ್ಬಿ ತೈಕಲ್, ಎನ್.ಕೆ. ಉಪಳಾಂವಕರ್ ಸೇರಿದಂತೆ ವಿವಿಧ ಬ್ಯಾಂಕುಗಳ ಸಂಘಟನೆ ಮುಖಂಡರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

