ಗುಲ್ಬರ್ಗಾ

ಎಪಿಎಂಸಿ ಅವ್ಯವಸ್ಥೆಗೆ ಆಕ್ರೋಶ

Published On :

ಅಫಜಲ್ಪುರ:ಪಟ್ಟಣದ ಆದರ್ಶ ನಗರದಲ್ಲಿನ ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆಗೆ ಜಿ.ಪಂ ಸದಸ್ಯ ಪ್ರಕಾಶ ಜಮಾದಾರ ದಿಢೀರ್ ಭೇಟಿ ನೀಡಿ ಅವ್ಯವಸ್ಥೆಯನ್ನು ಕಂಡು ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಗುಲ್ಬರ್ಗ ಜಿಲ್ಲೆ ತೊಗರಿ ಬೆಳೆಯನ್ನು ಹೆಚ್ಚು ಬೆಳೆಯುತ್ತದೆ. ಅದರಲ್ಲಿ ಅಫಜಲ್ಪುರ ತಾಲೂಕು ಅತಿ ಹೆಚ್ಚಿಗೆ ತೊಗರಿ ಬೆಳೆಯುತ್ತದೆ. ಜ. 2ರಿಂದ ತೊಗರಿ ಖರೀದಿ ಕೇಂದ್ರ ಪ್ರಾರಂಭ ಮಾಡಿದ್ದೀರಿ. ಒಟ್ಟು 1,700 ಜನ ರೈತರು ಹೆಸರು ನೋಂದಾಯಿಸಿದ್ದಾರೆ. ಆದರೆ ಇಲ್ಲಿಯವರೆಗೆ ಕೇವಲ 640 ರೈತರ ತೊಗರಿ ಮಾತ್ರ ಖರೀದಿ ಮಾಡಿದ್ದೀರಿ.  ಇನ್ನೂ ಶೇ.70 ರಷ್ಟು ರೈತರು ಬೆಳೆದ ಬೆಳೆಯನ್ನು ತಮ್ಮ ಮನೆಯಲ್ಲಿಟ್ಟುಕೊಂಡು ಸರದಿಗಾಗಿ ಕಾಯುತ್ತ ಕುಳಿತಿದ್ದಾರೆ. ಖರೀದಿ ಬಹಳಷ್ಟು ನಿಧಾನಗತಿಯಲ್ಲಿ ಸಾಗಿದೆ. ಪ್ರತಿನಿತ್ಯ ಕೆಲ ರೈತರ ತೊಗರಿ ಗುಣಮಟ್ಟ ಸರಿಯಾಗಿಲ್ಲ ಎಂದು ವಾಪಸ್ ಕಳುಹಿಸುತ್ತಿರುವುದಾಗಿ ತಿಳಿದು ಬಂದಿದೆ. ವರ್ಷವಿಡಿ ಕಷ್ಟ ಪಟ್ಟು ಬೆಳೆದ ರೈತರ ಶ್ರಮಕ್ಕೆ ಪ್ರತಿಫಲ ಸಿಗಲಿಲ್ಲವೆಂದರೆ ಹೇಗೆ ಎಂದು ಕಿಡಿ ಕಾರಿದರು. ಎಪಿಎಂಸಿ ಅಧಿಕಾರಿ ಚಂದ್ರಮೋಹನ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಬೇಕು ಎಂದು ಅವರು ಒತ್ತಾಯಿಸಿದರು. ರೈತರ ಸಮಸ್ಯೆ ಪರಿಹಾರಕ್ಕೆ ಪಟ್ಟಣದ ಎಪಿಎಂಸಿ ಆವರಣದಲ್ಲಿ ಇನ್ನೊಂದು ತೊಗರಿ ಖರೀದಿ ಕೇಂದ್ರ ಸ್ಥಾಪಿಸಬೇಕು. ಚೌಡಾಪುರ, ಕರ್ಜಗಿಗಳಲ್ಲಿಯೂ ಕೂಡ ತೊಗರಿ ಖರೀದಿ ಕೇಂದ್ರ ಸ್ಥಾಪಿಸಬೇಕು ಎಂದು ಒತ್ತಾಯಿಸಿದರು. ತಾ.ಪಂ ಸದಸ್ಯ ದತ್ತು ಸಿಂಧೆ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.