ಅಲ್ಪಸಂಖ್ಯಾತರಿಗೆ ರಾಜಕೀಯ ಪಕ್ಷಗಳು ಮಾಡಿದ್ದೇನು?: ರಬ್
ಶಹಾಬಾದ್: ದೇಶದಲ್ಲಿ ದಲಿತರಿಗಿಂತ ಮುಸ್ಲಿಂ ಸಮುದಾಯದ ಸ್ಥಿತಿ ಕ್ಲಿಷ್ಟಕರವಾಗಿದೆ ಎಂದು ಸಾಚಾರ್ ಸಮಿತಿ ವರದಿ ಸಲ್ಲಿಸಿದ್ದು, ಅಲ್ಪಸಂಖ್ಯಾತ ಸಮುದಾಯದ ಮತ ಕೇಳುವ ಪಕ್ಷಗಳು ಅವರಿಗಾಗಿ ಮಾಡಿದ್ದೇನು ಎಂದು ಶಹಾಬಾದ್ ವಾಡಿ ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಅಬ್ದುಲ್ ರಬ್ ಬಾರಿ ಪ್ರಶ್ನಿಸಿದ್ದಾರೆ.
ಪಟ್ಟಣದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸ್ವಾತಂತ್ರ್ಯ ನಂತರ ದೇಶದ ಎಲ್ಲ ರಾಜಕೀಯ ಪಕ್ಷಗಳು ಮುಸ್ಲಿಂ ಸಮುದಾಯದವರಿಗೆ ಚುನಾವಣೆ ವೇಳೆ ಆಶ್ವಾಸನೆ ನೀಡಿ ಮತ ಕೇಳುವ ಪಕ್ಷಗಳು, ಸಮುದಾಯದ ಅಭಿವೃದ್ಧಿ ಬಗ್ಗೆ ನಿಜವಾದ ಕಳಕಳಿಯಿದ್ದರೆ, 2011ರ ಕೋಮುಗಲಭೆ ನಿಯಂತ್ರಣ ಬಿಲ್ಲು ಜಾರಿಗೆ ಬರುವಂತೆ ಕ್ರಮ ಕೈಗೊಳ್ಳಬೇಕು ಎಂದರು.
ರಾಜ್ಯದಲ್ಲಿ ಜನಸಂಖ್ಯೆ ಆಧಾರದ ಮೇಲೆ ಅಲ್ಪಸಂಖ್ಯಾತರಿಗೆ ಚುನಾವಣೆಯಲ್ಲಿ ಟಿಕೆಟ್ ನೀಡಬೇಕು. ಪೊಲೀಸ್ ಇಲಾಖೆ, ಸೈನ್ಯದಲ್ಲಿ ಜನಸಂಖ್ಯಾ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಬೇಕು. ಕೇಂದ್ರ, ರಾಜ್ಯ ಸರ್ಕಾರಿ ನೌಕರಿಯಲ್ಲಿ ಜನಸಂಖ್ಯಾ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಬೇಕು. ಕೇಂದ್ರೀಕೃತ ಬ್ಯಾಂಕುಗಳಿಂದ ಜಾಮೀನುರಹಿತ, ಬಡ್ಡಿರಹಿತ ಬೆಳೆ ಮತ್ತು ವ್ಯಾಪಾರ ಸಾಲ ಒದಗಿಸಿ ಅದು ಅಪವ್ಯಯವಾಗದಂತೆ ನೇರವಾಗಿ ಫಲಾನುಭವಿಗಳಿಗೆ ತಲುಪುವಂತೆ ಕ್ರಮ ಕೈಗೊಳ್ಳಬೇಕು. ಅಲ್ಪಸಂಖ್ಯಾತ ಆಯೋಗಕ್ಕೆ ನ್ಯಾಯಾಲಯದ ಸಮಾನತೆ ನೀಡಬೇಕು.
ಅಲ್ಪಸಂಖ್ಯಾತರ ಬಗ್ಗೆ ಚುನಾವಣೆ ಸಂದರ್ಭದಲ್ಲಿ ಕಳಕಳಿ ವ್ಯಕ್ತಪಡಿಸುವ ರಾಜಕೀಯ ಪಕ್ಷಗಳು ಈ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಬೇಕಾಗಿದೆ ಎಂದು ಹೇಳಿದರು. ಈ ಬಗ್ಗೆ ಮುಸ್ಲಿಂ ಸಮುದಾಯದ ಮುಖಂಡರು, ಧರ್ಮಗುರುಗಳು ಮುಂದಾಳತ್ವ ವಹಿಸಿ, ರಾಜಕೀಯ ಪಕ್ಷಗಳಿಗೆ ಪ್ರಶ್ನಿಸಬೇಕಾಗಿದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

