ಗುಲ್ಬರ್ಗಾ

ಭಾರತ ನಿರ್ಮಾಣ ಯೋಜನೆ ಸದುಪಯೋಗ ಪಡೆಯಿರಿ

Published On :

ಗುಲ್ಬರ್ಗ: ಗ್ರಾಮೀಣ ಜನತೆಯ ಸರ್ವತೋಮುಖ ಅಭಿವೃದ್ಧಿಗಾಗಿ ಭಾರತ ನಿರ್ಮಾಣ ಕಾರ್ಯಕ್ರಮದಡಿ ಕೇಂದ್ರ ಸರ್ಕಾರ ಉದ್ಯೋಗ ಖಾತ್ರಿ, ಗ್ರಾಮೀಣ ಆರೋಗ್ಯ ಅಭಿಯಾನ, ಸರ್ವ ಶಿಕ್ಷಣ ಅಭಿಯಾನ, ನೀರು ಸರಬರಾಜು ಯೋಜನೆ ಮುಂತಾದ ಮಹಾತ್ವಾಕಾಂಕ್ಷೆಯ ಯೋಜನೆಗಳನ್ನು ಜಾರಿಗೊಳಿಸಿದ್ದು, ಇದರ ಸದುಪಯೋಗ ಪಡೆಯಬೇಕೆಂದು ಜಿಪಂ ಉಪಾಧ್ಯಕ್ಷೆ ಅನಿತಾ ವಳಕೇರಿ ಸಲಹೆ ನೀಡಿದರು.
  ಭಾರತ ಸರ್ಕಾರದ ಕ್ಷೇತ್ರ ಪ್ರಚಾರ ನಿರ್ದೇಶನಾಲಯ, ಗುಲ್ಬರ್ಗ ಸಮಗ್ರ ಶಿಶು ಅಭಿವೃದ್ಧಿ ಯೋಜನೆ, (ಗ್ರಾಮಾಂತರ) ಕಿರಣ ರೂರಲ್ ರಿಕನ್ಸ್‌ಟ್ರಕ್ಷನ್ ಸೊಸೈಟಿ ಗುಲ್ಬರ್ಗ ಹಾಗೂ ಖಣದಾಳ ಗ್ರಾಪಂ ಸಂಯುಕ್ತ ಆಶ್ರಯದಲ್ಲಿ ಖಣದಾಳ ಜವಾಹರ್ ಯುವಕ ಸಂಘದ ಆವರಣದಲ್ಲಿ ಭಾರತ ನಿರ್ಮಾಣ ವಿವಿಧ ಯೋಜನೆಗಳ ಕುರಿತು ಆಯೋಜಿಸಿದ್ದ ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಿರ್ಮಲ ಗ್ರಾಮ ಪುರಸ್ಕಾರಕ್ಕೆ ಸಹಕರಿಸಿ: ನಿರ್ಮಲ ಭಾರತ ಅಭಿಯಾನದಡಿ ಪ್ರತಿಯೊಂದು ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳಲು ಗ್ರಾಪಂ.ಗಳ ವತಿಯಿಂದ 9,200 ಸಹಾಯಧನ ನೀಡಲಾಗುತ್ತಿದ್ದು, ಅದರ ಸದುಪಯೋಗ ಪಡೆದು ನಿರ್ಮಲ ಗ್ರಾಮ ಪುರಸ್ಕಾರಕ್ಕೆ ಸಹಕರಿಸಬೇಕೆಂದು ಮನವಿ ಮಾಡಿದರು.
  ಪಿಡಿಒ ಮಲ್ಲಿನಾಥ ದಂಡೋತಿ ಮಾತನಾಡಿ, ಸರ್ಕಾರ ಗ್ರಾಮೀಣ ಹಾಗೂ ನಗರ ಜೀವನ ಮಟ್ಟದ ಅಂತರವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು, ಗ್ರಾಮೀಣ ಜನತೆಯು ನೆಮ್ಮದಿಯ ಜೀವನ ಸಾಗಿಸಲು ನೆರವಾಗಿದೆ ಎಂದು ಅಭಿಪ್ರಾಯಪಟ್ಟರು.
  ಶಿಶು ಅಭಿವೃದ್ಧಿ ಯೋಜನಾ ಇಲಾಖೆಯ ಜೋಷಿ ಮಾತನಾಡಿದರು. ಅಧ್ಯಕ್ಷತೆಯನ್ನು ತಾಪಂ ಸದಸ್ಯ   ಕಮಲಾಬಾಯಿ ದೇವೇಂದ್ರ ವಹಿಸಿದ್ದರು. ಗ್ರಾಪಂ ಮಾಜಿ ಸದಸ್ಯ ನಾಗೇಂದ್ರಪ್ಪ ಪಾಟೀಲ, ಕಾಶಿನಾಥ ರೋಣಿ, ಸುನಿಲ ಚನ್ನಮಣಿ ಇತರರು ಇದ್ದರು. ಎನ್.ರಾಮಕೃಷ್ಣ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿದರು.  ಎಂ.ಎಂ. ಶಿರಹಟ್ಟಿ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.