ಗುಲ್ಬರ್ಗಾ

ಮಟಕಾ ಜೂಜಾಟ ಮಾಹಿತಿಗೆ ಮನವಿ

Published On :

ಶಹಾಬಾದ್: ನಗರದ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮಟಕಾ ಜೂಜಾಟ ಆಡುವುದು, ಬರೆದುಕೊಳ್ಳುವದು ಕಂಡುಬಂದಲ್ಲಿ ನಗರ ಪೊಲೀಸರಿಗೆ ಮಾಹಿತಿ ನೀಡಬೇಕೆಂದು ಡಿವೈಎಸ್ಪಿ ಮಹೇಶ ಮೇಘಣ್ಣನವರ ಮನವಿ ಮಾಡಿದ್ದಾರೆ. ಪೊಲೀಸ್ ಠಾಣೆ ವ್ಯಾಪ್ತಿಯ ಯಾವುದೇ ಭಾಗದಲ್ಲಿ ಮಟಕಾ ಚೀಟಿ ಬರೆದುಕೊಳ್ಳುವದು. ಆಡುವುದು ನಡೆದಲ್ಲಿ ನಗರಠಾಣೆಯ ಪಿಐ ವಿಜಯಕುಮಾರ ಹೊಸ್ಮನಿ ಮೊ. 9480803570ಗೆ ಅಥವಾ ಪೊಲೀಸ್ ಠಾಣೆ ದೂ. 08474- 204444ಗೆ ಸಂಪರ್ಕಿಸಲು ಕೋರಲಾಗಿದೆ. ಮಾಹಿತಿ ನೀಡುವ ನಾಗರಿಕರ ಹೆಸರನ್ನು ಗೌಪ್ಯವಾಗಿ ಇಡಲಾಗುವದು. ಪೊಲೀಸ್ ಇಲಾಖೆಗೆ ಸಾರ್ವಜನಿಕರು ಸಹಕಾರ ನೀಡಬೇಕೆಂದು ಕೋರಿದ್ದಾರೆ.
ಒಬ್ಬನ ಬಂಧನ: ವಲಯ ಡಿವೈಎಸ್ಪಿ ಮಹೇಶ ಮೇಘಣ್ಣನವರ ಮಾರ್ಗದರ್ಶನದಲ್ಲಿ ಪಿಐ ವಿಜಯಕುಮಾರ ಹೊಸ್ಮನಿ ಹಾಗೂ ಸಿಬ್ಬಂದಿಯವರು ಭಂಕೂರ ಸರ್ಕಾರಿ ಪ್ರೌಢಶಾಲೆಯ ಬಳಿ ಕೆರೆಯಮ್ಮದೇವಿ ದೇವಸ್ಥಾನದ ಬಳಿ ಮಟಕಾ ಚೀಟಿ ಬರೆದುಕೊಳ್ಳುತ್ತಿದ್ದ ಭಂಕೂರನ ಗಣೇಶ ನಗರದ ನಿವಾಸಿ ಸಂಜೀವಕುಮಾರ ರಾಠೋಡ್ನನ್ನು ಬಂಧಿಸಿ, ಆರೋಪಿಯಿಂದ 5,020 ವಶಪಡಿಸಿಕೊಂಡಿದ್ದು, ಪ್ರಕರಣ ದಾಖಲಿಸಿ ಆರೋಪಿಯನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.