ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಮನವಿ
ಯಾದಗಿರಿ: ಜಿಲ್ಲೆಯಲ್ಲಿ ಪ್ರಮುಖ ರೇಲ್ವೆ ಗಾಡಿಗಳನ್ನು ನಿಲುಗಡೆ ಮಾಡುವಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರವೇ ತಾಲೂಕ ಘಟಕ ಕೇಂದ್ರ ರೇಲ್ವೆ ಹಾಗೂ ಸಾಮಾಜಿಕ ನ್ಯಾಯ ಸಬಲೀಕರಣ ಸಚಿವ ಡಾ. ಮಲ್ಲಿಕಾರ್ಜುನ ಖರ್ಗೆರಿಗೆ ಮನವಿ ಸಲ್ಲಿಸಲಾಯಿತು. ಮನವಿ ಸಲ್ಲಿಸಿ ಮಾತನಾಡಿದ ಕರವೇ ತಾಲೂಕ ಘಟಕದ ಪ್ರಧಾನ ಕಾರ್ಯದರ್ಶಿ ಮಲ್ಲು ವರ್ಕನಳ್ಳಿ, ಹೈ-ಕದ ಹರಿಕಾರರದ ತಾವುಗಳೂ ಈ ಭಾಗದ ಅಭಿವೃದ್ಧಿಗೆ 371(ಜೆ) ಕಲಂ ತಿದ್ದುಪಡಿ ತಂದು ಜನರ ಬಹುದಿನದ ಬೇಡಿಕೆಯನ್ನು ಈಡೇರಿಸಿದ್ದು, ಜಿಲ್ಲೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ರೇಲ್ವೆ ಬೋಗಿ ಕಾರ್ಖಾನೆಯಲ್ಲಿ ಸ್ಥಳೀಯರಿಗೆ ಶೇ.80 ರಷ್ಟು ಜನರಿಗೆ ಉದ್ಯೋಗ ಕಲ್ಪಿಸಿಕೊಡಬೇಕು. ಭೂಮಿ ಕಳೆದುಕೊಂಡ ರೈತರ ಕುಟುಂಬದಲ್ಲಿ ಒಬ್ಬರಿಗೆ ನೌಕರಿ ನೀಡಬೇಕು, ಗುಲ್ಬರ್ಗದಿಂದ ಬೆಂಗಳೂರಿಗೆ ಇಂಟರ್ಸಿಟಿ ಪ್ಯಾಸಂಜರ್ ಗಾಡಿ ನಿತ್ಯ ಓಡಿಸಲು ಕ್ರಮ, ಜಿಲೆಯಲ್ಲಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಸ್ಥಾಪನೆ ಮಾಡಬೇಕು, ಪ್ರಮುಖ ರೈಲುಗಳನ್ನು ಯಾದಗಿರಿಯಲ್ಲಿ ನಿಲುಗಡೆ ಮಾಡಬೇಕೆಂದು ಮನವಿ ಸಲ್ಲಿಸಿ ಒತ್ತಾಯಿಸಿದರು. ಈ ಸಂದರ್ಭದಲ್ಲಿ ಭೀಮಾಶಂಕರ ಹತ್ತಿಕುಣಿ, ಮಹಾವೀರ ಲಿಂಗೇರಿ, ಶರಣು ಗುತ್ತೆದಾರ, ನಾಗಪ್ಪ ವರ್ಕನಳ್ಳಿ, ಮಲ್ಲಿಕಾರ್ಜುನ ವರ್ಕನಳ್ಳಿ ಇತರರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

