ಚಿಂತನೆ ಮಾಡುವುದನ್ನು ಕಲಿಯಿರಿ; ವಲಯ ಕಸಾಪ ಅಧ್ಯಕ್ಷ
ಕೆಂಭಾವಿ: ಇಂದಿನ ವಿದ್ಯಾರ್ಥಿಗಳು ಪರೀಕ್ಷೆ ಸಮೀಪಿಸುತ್ತಿದ್ದಂತೆ ಚಿಂತೆ ಮಾಡುವುದು ಬಿಟ್ಟು, ಚಿಂತನೆ ಮಾಡುವುದನ್ನು ಕಲಿಯಬೇಕಾಗಿದೆ ಎಂದು ಕೆಂಭಾವಿ ವಲಯ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಿಂಗನಗೌಡ ದೇಸಾಯಿ ಪರಸನಳ್ಳಿ ನುಡಿದರು.
ಬುಧವಾರ ಕೆಂಭಾವಿ ವಲಯ ಕ.ಸಾ.ಪ ಹಾಗೂ ಸಗರನಾಡು ಸೇವಾ ಪ್ರತಿಷ್ಠಾನ ಸುರಪುರ ಇವರ ಸಹಯೋಗದಲ್ಲಿ ಸಮೀಪದ ಹೆಗ್ಗಣದೊಡ್ಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಏರ್ಪಡಿಸಲಾಗಿದ್ದ ವ್ಯಕ್ತಿತ್ವ ವಿಕಸನ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿ, ವಿದ್ಯಾರ್ಥಿಗಳು ಪರೀಕ್ಷಾ ಭಯ ಎದುರಿಸುತ್ತಿದ್ದು, ನಿರಂತರ ಪ್ರಯತ್ನ, ಸತತ ಅಧ್ಯಯನ ಹಾಗೂ ಉತ್ತಮವಾಗಿ ಅಭ್ಯಸಿಸುವುದರಿಂದ ಗುರಿ ತಲುಪಲು ಸಾಧ್ಯವಾಗುತ್ತದೆ.
ಏಕಾಗ್ರತೆ ಮತ್ತು ಸಮಚಿತ್ತದಿಂದ ನಿರಂತರವಾಗಿ ಅಧ್ಯಾಯನ ಮಾಡುವುದು ವಿದ್ಯಾರ್ಥಿಗಳ ಯಶಸ್ಸಿನ ಗುಟ್ಟು ಎಂದು ಕಿವಿ ಮಾತು ಹೇಳಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಕೆಂಭಾವಿಯ ಉದ್ಯಮಿ ಸುಮಿತ್ರಪ್ಪ ಅಂಗಡಿ ಮಾತನಾಡಿ, ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು. ಸ್ಪರ್ಧಾತ್ಮಕ ಯುಗದಲ್ಲಿ ಸ್ಪರ್ಧಾ ಮನೋಭಾವದಿಂದ ಕಲಿಬೇಕಾಗಿದೆ ಎಂದು ಹೇಳಿದರು. ಮುಖ್ಯ ಅತಿಥಿಗಳಾಗಿ ತಾಲೂಕು ಕಸಾಪ ಅಧ್ಯಕ್ಷ ಶಾಂತಪ್ಪ ಬೂದಿಹಾಳ, ಸಗರನಾಡು ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪ್ರಕಾಶ ಅಂಗಡಿ ಕನ್ನಳ್ಳಿ ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಸುರಪುರ ತಾಲೂಕು ಕಸಾಪ ವತಿಯಿಂದ 2014ನೇ ಸಾಲಿನ ಕಸಾಪ ವರ್ಷದ ವ್ಯಕ್ತಿಯಾಗಿ ಆಯ್ಕೆಯಾದ ಸಾಹಿತಿ ನಬಿಲಾಲ್ ಮಕಾಂದಾರ ಅಮ್ಮಾಪುರ ಅವರನ್ನು ಜಂಟಿ ಸಮಿತಿಗಳ ವತಿಯಿಂದ ಸನ್ಮಾನಿಸಲಾಯಿತು. ಸ. ಶಾಲೆಯ ಪ್ರಧಾನ ಗುರು ಸಣ್ಣಲಕ್ಕಪ್ಪ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮವನ್ನು ಮೌನೇಶ ಗೋನಾಲ ನಿರೂಪಿಸಿದರು. ಚಂದ್ರಶೇಖರ ಯಾಳಗಿ ಸ್ವಾಗತಿಸಿದರು. ಬಸವರಾಜ ಬಿರಾದಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಂ.ಬಿ. ಪಾಟೀ ಲ್ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

