'ಉತ್ತಮ ಉದ್ಯೋಗಾವಕಾಶ'
ಶಹಾಬಾದ್: ನಗರದಲ್ಲಿ ನಿರ್ಮಾಣಗೊಳ್ಳಲಿರುವ ಕೌಶಲ್ಯ ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆದವರಿಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಉದ್ಯೋಗಾವಕಾಶಗಳಿವೆ ಎಂದು ಕೇಂದ್ರ ಸಚಿವ ಡಾ. ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಅವರು ಮಂಗಳವಾರ ಶಹಾಬಾದ್ ಮರತೂರ ರಸ್ತೆಯಲ್ಲಿ ರು. 180 ಕೋಟಿ ವೆಚ್ಚದಲ್ಲಿ 10ಎಕರೆ ಪ್ರದೇಶದಲ್ಲಿ ಕೇಂದ್ರ ಸರ್ಕಾರದ ಅತಿಸಣ್ಣ, ಸಣ್ಣ, ಮತ್ತು ಮಧ್ಯಮ ಕೈಗಾರಿಕೆಗಳ ತಂತ್ರಜ್ಞಾನ ಕೇಂದ್ರಕ್ಕೆ ಶಂಕುರಸ್ಥಾಪನೆ ಉದ್ಘಾಟಿಸಿ ಮಾತನಾಡಿದರು.
ಉದ್ಯೋಗಾವಕಾಶ: ಶಂಕುಸ್ಥಾಪನೆ ನೇರವೇರಿಸಿದ ಕೇಂದ್ರ ಎಂಎಸ್‌ಎಂಇ ರಾಜ್ಯ ಸಚಿವ ಕೆ.ಎಚ್. ಮುನಿಯಪ್ಪ ಮಾತನಾಡಿ, ಕೌಶಲ್ಯ ತರಬೇತಿ ಕೇಂದ್ರದಲ್ಲಿ ಹಂತಹಂತವಾಗಿ 10 ಸಾವಿರ ಜನ ಯುವಕರ ತರಬೇತಿ ಪಡೆಯಲಿದ್ದು, ತರಬೇತಿಯಿಂದ ವಿವಿಧ ಕಾರ್ಖಾನೆಗಳಲ್ಲಿ ಉದ್ಯೋಗಾವಕಾಶಗಳಿವೆ. ಉದ್ಯೋಗ ಸಿಗದೆ ಇದ್ದವರಿಗೆ ಸರ್ಕಾರ ರು. 3 ಲಕ್ಷದರೆಗೆ ಬಡ್ಡಿರಹಿತ ಸಾಲ, ರು. 10 ಲಕ್ಷದವರೆಗೆ ಶೇ. 2 ಬಡ್ಡಿ ಸಾಲವನ್ನು ನೀಡಲಾಗುತ್ತದೆ. ಇದರಿಂದ ಈ ಭಾಗದಲ್ಲಿ ನಿರುದ್ಯೋಗ ಸಮಸ್ಯೆಗೆ ಪರಿಹಾರ ಸಿಗಲಿದೆ ಎಂದು ಹೇಳಿದರು. ಶಾಸಕ ಜಿ. ರಾಮಕೃಷ್ಣ ಮಾತನಾಡಿದರು.
ಎಂಎಸ್‌ಎಂಇ ನಿರ್ದೇಶಕ ಡಿ. ಚಂದ್ರಶೇಖರ ಪ್ರಾಸ್ತಾವಿಕ ಮಾತನಾಡಿದರು. ಮಾಜಿ ಸಂಸದ ಇಕ್ಬಾಲ್ ಅಹ್ಮದ್ ಸರಡಗಿ, ಡಿಸಿಸಿ ಅಧ್ಯಕ್ಷ ಭಾಗಣ್ಣಗೌಡ ಸಂಕನೂರ, ನಗರಸಭೆ ಅಧ್ಯಕ್ಷ ಗಿರೀಶ ಕಂಬಾನೂರ, ಎಂಎಸ್‌ಎಂಇ ಕಾರ್ಯದರ್ಶಿ ಮಾಧವ ಲಾಲ್, ಜಿಲ್ಲಾಧಿಕಾರಿ ಡಾ.ಎನ್.ವಿ. ಪ್ರಸಾದ ಉಪಸ್ಥಿತರಿದ್ದರು. ಮೃತ್ಯುಂಜಯ ಸ್ವಾಮಿ ಹಿರೇಮಠ ನಿರೂಪಿಸಿದರು. ಕಾಂಗ್ರೆಸ್ ಮುಖಂಡರಾದ ವಿಜಯಕುಮಾರ ಮುಟ್ಟತ್ತಿ, ಚಂದ್ರಕಾ ಪರಮೇಶ್ವರ, ಶಿವಾನಂದ ಪಾಟೀಲ ಮರತೂರ, ಅನೀಲಕುಮಾರ ಇಂಗಿನಶೆಟ್ಟಿ, ಸುರೇಶ ನಾಯಕ, ಶರಣಗೌಡ ಪೊಲೀಸ್ ಪಾಟೀಲ, ಸುಭಾಷ ಪಂಚಾಳ ಸೇರಿದಂತೆ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

