ಜೀವನ ಶ್ರೇಯಸ್ಸಿಗೆ ಧರ್ಮ ಪರಿಪಾಲನೆ ಅಗತ್ಯ: ರಂಭಾಪುರಿಶ್ರೀ
ಯಾದಗಿರಿ: ಜೀವನದ ಹಾದಿಯಲ್ಲಿ ಕಲ್ಲು ಮುಳ್ಳು ತುಂಬಿವೆ. ಅಡಿಗಡಿಗೆ ಸಂಕಷ್ಟಗಳು ಸಂಭವಿಸುತ್ತವೆ. ಆಧ್ಯಾತ್ಮದ ಸಾಧನೆಯಿಂದ ಜೀವನದಲ್ಲಿ ಶಾಂತಿ, ನೆಮ್ಮದಿ ಪಡೆಯಲು ಸಾಧ್ಯ. ಸಂಸ್ಕಾರ, ಸದ್ವಿಚಾರಯುಕ್ತ ಧರ್ಮಪರಿಪಾಲನೆಯಿಂದ ಜೀವನದಲ್ಲಿ ಶ್ರೇಯಸ್ಸು ಮತ್ತು ಯಶಸ್ಸು ಪ್ರಾಪ್ತವಾಗಲು ಸಾಧ್ಯ ಎಂದು ಬಾಳೆಹೊನ್ನೂರು ರಂಭಾಪುರಿ ಜಗದ್ಗುರುಗಳು ಅಭಿಪ್ರಾಯಪಟ್ಟರು. ತಾಲೂಕಿನ ನಾಗನಟಿಗಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾದ ವೀರಭದ್ರೇಶ್ವರ ದೇವಸ್ಥಾನದ ಉದ್ಘಾಟನೆ ಹಾಗೂ 5ನೇ ವರ್ಷದ ಜಾತ್ರಾ ಮಹೋತ್ಸವ ಧರ್ಮ ಸಮಾರಂಭದಲ್ಲಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಧರ್ಮ, ಸಂಸ್ಕೃತಿ ಮತ್ತು ಆದರ್ಶ ಪರಂಪರೆಗಳು ನಮ್ಮ ನಂಬಿಕೆಯಿಂದ ಬೆಳೆದು ಬಂದಿವೆ. ರೇಣುಕಾಚಾರ್ಯರು ಬೋಧಿಸಿದ ತತ್ತ್ವ ಸಿದ್ಧಾಂತಗಳು ಮಾನವನ ಜೀವನದ ವಿಕಾಸಕ್ಕೆ ಅಡಿಪಾಯ. ಲೋಕದ ಕತ್ತಲೆ ಕಳೆಯಲು ಸೂರ್ಯಬೇಕು. ಬದುಕಿನ ಕತ್ತಲೆ ಕಳೆಯಲು ಶ್ರೇಷ್ಠ ಗುರುಬೇಕು. ಗುರು ಮತ್ತು ಗುರಿಯನ್ನು ಹೊಂದಿ ಮಾನವ ಜನ್ಮವನ್ನು ಸಾರ್ಥಕಪಡಿಸಿಕೊಳ್ಳಿ ಎಂದರು.
ಮಾಗಣಗೇರಿ ವಿಶ್ವಾರಾಧ್ಯ ಶಿವಾಚಾರ್ಯಸ್ವಾಮಿಗಳು ಅಧ್ಯಕ್ಷತೆಯನ್ನು ವಹಿಸಿದ್ದರು. ಹಲವಾರು ಮಠಾಧೀಶರು ಮತ್ತು ಗಣ್ಯರು ಪಾಲ್ಗೊಂಡಿದ್ದರು. ಸಿದ್ರಾಮಯ್ಯಸ್ವಾಮಿ ಹಿರೇಮಠ ಅವರಿಗೆ ಗುರುದೀಕ್ಷೆ ನೀಡಿ ಆಶೀರ್ವದಿಸಲಾಯಿತು. ಸಮಾರಂಭಕ್ಕೆ ಮುನ್ನ ಜಗದ್ಗುರುಗಳವರನ್ನು ವಾದ್ಯ, ವೈಭವ ಕಳಸ, ಪೂರ್ಣಕುಂಭದೊಂದಿಗೆ ಮೆರವಣಿಗೆ ಮೂಲಕ ಬರಮಾಡಿಕೊಳ್ಳಲಾಯಿತು.
--
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

