ಗುಲ್ಬರ್ಗಾ

ಬುನಾದಿ ಭದ್ರವಾದರೆ ಕಟ್ಟಡ ಸುಭದ್ರ: ಗುರುಲಿಂಗಪ್ಪಗೌಡ

Published On :

ಕ.ಪ್ರ. ವಾರ್ತೆ ್ಣ ಜೇವರ್ಗಿ ್ಣ ಫೆ.27
ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ತರವಾಗಿದ್ದು, ಆ ನಿಟ್ಟಿನಲ್ಲಿ ಬುನಾದಿ ಭದ್ರವಾಗಿದ್ದಲ್ಲಿ, ಕಟ್ಟಡ ಸುಭದ್ರವಾಗಿರಲು ಸಾಧ್ಯವೆಂದು ಆಂದೋಲಾ ಜಿ.ಪಂ ಸದಸ್ಯ ಗುರುಲಿಂಗಪ್ಪಗೌಡ ಪಾಟೀಲ್ ಆಂದೋಲಾ ಕರೆ ನೀಡಿದರು.
ಅವರು ಇತ್ತೀಚೆಗೆ ಪಟ್ಟಣದ ಸಜ್ಜನ್ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ ತಾಲೂಕು ಘಟಕದ 3ನೇ ವಾರ್ಷಿಕೋತ್ಸವ ಹಾಗೂ 2013ನೇ ಸಾಲಿನ ತಾಲೂಕು ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮತ್ತು ಎಸ್‌ಎಸ್‌ಎಲ್‌ಸಿ, ಪಿಯುಸಿ ವಿದ್ಯಾರ್ಥಿಗಳಿಗಾಗಿ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಸುಧಾರಣೆ ತರಬೇಕು: ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಿದಾಗ ಮಾತ್ರ ಮುಂಬರುವ ದಿನಗಳಲ್ಲಿ ದೇಶದ ಉತ್ತಮ ನಾಗರಿಕರಾಗಿ ರೂಪುಗೊಳ್ಳಲು ಸಾಧ್ಯ. ರಾಜ್ಯ ಸರ್ಕಾರ ಶಿಕ್ಷಣ ಇಲಾಖೆಗೆ ಜನಪರ ಯೋಜನೆಗಳನ್ನು ನೀಡಿದೆ. ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆ ತರಬೇಕಾಗಿದೆ ಎಂದು ಪಾಟೀಲ್ ಹೇಳಿದರು.
ಸೊನ್ನ ದಾಸೋಹ ಮಠದ ಡಾ. ಶಿವಾನಂದ ಮಹಾಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ತಾ.ಪಂ. ಅಧ್ಯಕ್ಷ ಮಲ್ಲನಗೌಡ ಪಾಟೀಲ್ ನೇದಲಗಿ, ಉಪಾಧ್ಯಕ್ಷೆ ವಿಜಯಲಕ್ಷ್ಮೀ ಆಂದೋಲಾ, ಪಪಂ ಅಧ್ಯಕ್ಷೆ ಅನೀತಾ ಪಾರ್ಶಿ ಮತ್ತಿತರರು ಆಗಮಿಸಿದ್ದರು.
ಪ್ರಶಸ್ತಿ ಪ್ರದಾನ: ಕಾರ್ಯಕ್ರಮದಲ್ಲಿ 22 ಜನ ಶಿಕ್ಷಕ, ಶಿಕ್ಷಕಿಯರು, ಕರಣಿಕ, ಬಿ.ಆರ್.ಪಿ, ಸಿ.ಆರ್.ಪಿಗಳಿಗೆ 2013ನೇ ಸಾಲಿನ ತಾಲೂಕು ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಶಿಕ್ಷಕರ ಪ್ರತಿಭಾ ಪರಿಷತ್ ತಾಲೂಕು ಘಟಕದ ಅಧ್ಯಕ್ಷ ನಾನಾಗೌಡ ಕೂಡಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಜಗನಾಥ ಇಮ್ಮಣ್ಣಿ, ಲಾಲಪ್ಪ ನಾಯಕ, ಶಂಬಣ್ಣ ಹೂಗಾರ, ಕಾಸಯ್ಯ ಗುತ್ತೇದಾರ, ಬಸಣ್ಣ ಪೂಜಾರಿ ಸೇರಿದಂತೆ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಗುರುಶಾಂತಪ್ಪ ಚಿಂಚೋಳಿ ನಿರೂಪಿಸಿದರು. ಶಂಬಣ್ಣ ಹೂಗಾರ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.