ಗುಲ್ಬರ್ಗಾ

ಧರ್ಮದ ಏಳಿಗೆಗಾಗಿ ದುಡಿಯಲು ಕರೆ

Published On :

ಸುರಪುರ: ಇಂದಿನ ಯುಗದಲ್ಲಿ ಜಾತೀಯತೆ ಹೆಚ್ಚಾಗಿದೆ. ಮೊದಲು ನಾವು ಹಿಂದೂ ಧರ್ಮದ ಏಳಿಗೆಗಾಗಿ ಸದಾ ಕಾಲ ದುಡಿಯೋಣ ನಮ್ಮ ಸನಾತನ ಧರ್ಮವನ್ನು ಉಳಿಸಿ ಬೆಳೆಸೋಣ. ನಾವು ಎಲ್ಲರೂ ಒಂದೇ ಎನ್ನುವ ಭಾವನೆ ಪ್ರತಿಯೊಬ್ಬರಲ್ಲಿ ಒಗ್ಗೂಡಿಸಬೇಕೆಂದು ರುಕ್ಮಾಪುರ ಹಿರೇಮಠದ ಗುರುಶಾಂತಮೂರ್ತಿ ಶಿವಾಚಾರ್ಯರು ಹೇಳಿದರು.
ಸಮೀಪದ ರುಕ್ಮಾಪುರ ಹಿರೇಮಠದಲ್ಲಿ ಎಳ್ಳಮಾವಾಸ್ಯೆ ನಿಮಿತ್ತ ಹಮ್ಮಿಕೊಂಡಿದ್ದ 27ನೇ ಶಿವಾನುಭವಗೋಷ್ಠಿಯ ಸಾನ್ನಿದ್ಯ ವಹಿಸಿ ಆಶೀರ್ವಚನ ನೀಡಿದರು. ಸಗರ ನಾಡಿನ ಸಾಹಿತ್ಯ ಅದ್ಭುತ. ಕಾರಣ ಸಾಹಿತಿಗಳು, ಕವಿಗಳು, ವಚನಕಾರರು ಉಳಿಸುವ ಕೆಲಸ ಮಾಡಬೇಕು ಎಂದರು. ಸಾಹಿತಿ ಸಿದ್ದರಾಮ ಹೊನ್ಕಲ್ ಶಿವಾನುಭವಗೋಷ್ಠಿ ಉದ್ಘಾಟಿಸಿ ಮಾತನಾಡಿದರು.
ಸಾಹಿತಿ ವಿಶ್ವರಾಧ್ಯ ಸತ್ಯಂಪೇಟೆ ಮಾತನಾಡಿದರು. ಪುರಸಭೆ ಅಧ್ಯಕ್ಷ ದೇವಿಂದ್ರಪ್ಪ ಕಳ್ಳಿಮನಿ ಅಧ್ಯಕ್ಷತೆ ವಹಿಸಿದ್ದರು.  2014ರ ಮಠದ ದಿನದರ್ಶಿಕೆ ಬಿಡುಗಡೆ ಮಾಡಲಾಯಿತು. ಪ್ರಮುಖರಾದ ಕಾಶಿನಾಥ ಬಣಗಾರ, ಶಂಕ್ರಪ್ಪ ಭಾವಿ, ಬಸಪ್ಪ ಗೌಡ, ಸದಾಶಿವ ಮಿಣಜಗಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.