ಗುಲ್ಬರ್ಗಾ

ಕ್ರೀಡೆಯಿಂದ ಮಾನಸಿಕ ಪ್ರಗತಿ

Published On :

ಯಾದಗಿರಿ: ಸ್ಪರ್ಧಾತ್ಮಕ ಯುಗದಲ್ಲಿ ಕ್ರೀಡೆಯಿಂದ ಮಾತ್ರ ಯುವಕರಲ್ಲಿ ದೈಹಿಕ ಮಾನಸಿಕ ಪ್ರಗತಿಯಾಗಲು ಸಾಧ್ಯ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ವೀರಣ್ಣಗೌಡ ಮಲ್ಲಾಬಾದಿ ಹೇಳಿದರು.
ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಘಟಕ ವತಿಯಿಂದ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ದೇಶದ ಶಕ್ತಿಯಾಗಿರುವ ಯುವ ಜನತೆ ದುಶ್ಚಟಗಳಿಗೆ ಬಲಿಯಾಗುತ್ತಿರುವುದು ದುರಂತ. ಕಾರಣ ಯುವಪಡೆ ಅದರಿಂದ ದೂರವಾಗಿ ಕ್ರೀಡೆಗಳತ್ತ ಹಾಗೂ ಇನ್ನಿತರ ಚಟುವಟಿಕೆಗಳಲ್ಲಿ ಭಾಗಿಯಾಗಬೇಕೆಂದು ಸಲಹೆ ನೀಡಿದರು.
ಕಾರ್ಯಕ್ರಮವನ್ನು ರಾಜ್ಯ ಬಿಜೆಪಿ ಯುವ ಮೋರ್ಚಾ ಘಟಕದ ಕಾರ್ಯದರ್ಶಿ ರವೀಂದ್ರರಡ್ಡಿ ಗುರುಮಿಠಕಲ್ ಉದ್ಘಾಟಿಸಿ, ಜಿಲ್ಲಾ ಕೇಂದ್ರದಲ್ಲಿ ಬಿಜೆಪಿ ಯುವ ಮೋರ್ಚಾ ಪದಾಧಿಕಾರಿಗಳು ಕ್ರಿಕೆಟ್ ಪಂದ್ಯಾಟ ಹಮ್ಮಿಕೊಳ್ಳುವ ಮೂಲಕ ಯುವ ಕ್ರೀಡಾ ಪಟುಗಳಿಗೆ ತಮ್ಮ ಕ್ರೀಡಾ ಪ್ರತಿಭೆ ಪ್ರದರ್ಶಿಸಲು ಸೂಕ್ತ ವೇದಿಕೆ ಕಲ್ಪಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆಂದರು.
ಮುಖಂಡರಾದ ಅಶೋಕ ಹೊಕ್ರಾಣಿ, ಬಸವರಾಜ ಪಾಟೀಲ್ ಬಳ್ಹಾರ್, ಸುರೇಶ ಅಂಬಿಗೇರ, ಮಂಜು ಜಡಿ, ಅಯ್ಯಣ್ಣ ಅಳ್ಳಳ್ಳಿ, ಹಣಮಂತ ಇಟಗಿ, ನಿಂಗಪ್ಪ ಹತ್ತಿಮನಿ, ಗೋಪಾಲ ದಾಸನಕೇರಿ, ಸಾಯಿಬಣ್ಣ ಚಂಡ್ರಕಿ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.