ನಕಲಿ ವೈದ್ಯರ ಹಾವಳಿ ನಿರ್ಬಂಧಕ್ಕೆ ಕಂದಕೂರ ಆಗ್ರಹ
ಯಾದಗಿರಿ: ತಾಲೂಕಿನ ಕಂದಕೂರಲ್ಲಿ ಹಲವಾರು ವರ್ಷಗಳಿಂದ ವೈದ್ಯಕೀಯ ಜ್ಞಾನವಿಲ್ಲದ ನಕಲಿ ವೈದ್ಯರು ಆಸ್ಪತ್ರೆಗಳನ್ನು ತೆರದು ಬಡ ಜನರ ಜೀವನದ ಜೊತೆ ಚೆಲ್ಲಾಟವಾಡುತ್ತಿದ್ದಾರೆ. ಅವರ ಮೇಲೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕೆಂದು ಗ್ರಾಮದ ಔಷಧ ವ್ಯಾಪಾರಿ ಶರಣಗೌಡ ಕಂದಕೂರ ಆಗ್ರಹಿಸಿದ್ದಾರೆ. ಗುರುವಾರ ಡಿಎಚ್ಒಗೆ ದೂರು ಸಲ್ಲಿಸಿದ ಅವರು, ವೈದ್ಯರು ಪರವಾನಗಿಯನ್ನು ಕೂಡ ಪಡೆಯದೆ ಖಾಸಗಿ ಆಸ್ಪತ್ರೆಗಳನ್ನು ತೆರೆದು ರೋಗಿಗಳನ್ನು ತಪಾಸಣೆ ಮಾಡುತ್ತಿದ್ದಾರೆ. ಅಲ್ಲದೇ ನಕಲಿ ಔಷಧಿಗಳನ್ನು ಮಾರಾಟ ಮಾಡುತ್ತಿದ್ದಾರೆ. ಇದರಿಂದ ಜನರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ಹಲವಾರು ಜನರು ತಮ್ಮ ಪ್ರಾಣವನ್ನು ಕಳೆದುಕೊಂಡ ಘಟನೆಗಳನ್ನು ಜರುಗಿವೆ. ಡಿಎಚ್ಒ ಹಾಗೂ ಔಷಧ ನಿಯಂತ್ರಣಾಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

