'ಪೂರ್ಣಶಕ್ತಿ ಕೇಂದ್ರ'
ಗುಲ್ಬರ್ಗ: ಮಹಿಳಾ ಸಾವಲಂಬನೆ ಸಾಧಿಸಲು ಸರ್ಕಾರ ಬದ್ಧ, ರಾಷ್ಟ್ರೀಯ ಮಹಿಳಾ ಸ್ವಾವಲಂಬನೆ ಮಿಷನ್ ಯೋಜನೆಯಡಿ ಮಹಿಳೆಯರ ಜಿಲ್ಲಾ ಸಂಪನ್ಮೂಲ ಕೇಂದ್ರವನ್ನು ಮತ್ತು ಪೂರ್ಣಶಕ್ತಿ ಕೇಂದ್ರಗಳನ್ನು ಚಿಂಚೋಳಿ ತಾಲೂಕಿನಲ್ಲಿ ಅನುಷ್ಠಾನಗೊಳಿಸಲಾಗಿದೆ. ಈ ಯೋಜನೆಯ ಅನುಷ್ಠಾನಕ್ಕಾಗಿ 13- 14 ರಲ್ಲಿ 40 ಲಕ್ಷ ಮಂಜೂರು ಮಾಡಲಾಗಿದೆ ಎಂದು ಚಿಂಚೋಳಿ ಶಾಸಕ ಡಾ. ಉಮೇಶ ಜಾಧವ ಅವರು ತಿಳಿಸಿದರು. ಅವರು ಗುರುವಾರ ಚಿಂಚೋಳಿಯ ಚಿನ್ನಮ್ಮ ಬಸಪ್ಪ ಪಾಟೀಲ್ ಮಹಾವಿದ್ಯಾಲಯದಲ್ಲಿ ವಾರ್ತಾ ಇಲಾಖೆ, ಗುಲ್ಬರ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾ.ಪಂ. ಪ.ಪಂ. ಚಿಂಚೋಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಚಿಂಚೋಳಿಯ ಸಹಯೋಗದಲ್ಲಿ ಚಿಂಚೋಳಿ ತಾಲೂಕಿನ 144 ಗ್ರಾಮಗಳಲ್ಲಿ ಜ.2ರಿಂದ 13ರವರೆಗೆ ಸರ್ಕಾರ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ತಿಳಿಸಿಕೊಡುವ ವಿಭಾಗ ಮಟ್ಟದ ಬಹುಮಾಧ್ಯಮ ಪ್ರಚಾರಾಂದೊಲನ ಉದ್ಘಾಟಿಸಿ ಮಾತನಾಡಿದರು.
ಮಾಹಿತಿ ಕೇಂದ್ರ
ಗುಲ್ಬರ್ಗ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿವಿಧ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮಾಹಿತಿ ಕೇಂದ್ರ ವನ್ನು ಜ.1 ರಿಂದ ಐವಾನ್-ಎ-ಶಾಹಿ ಪ್ರದೇಶದಲ್ಲಿ ಪ್ರಾರಂಭಿಸಿದೆ. ಅಲ್ಪಸಂಖ್ಯಾತ ಸಮುದಾಯಕ್ಕೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ಜಿಲ್ಲೆಯ ಅಲ್ಪಸಂಖ್ಯಾತರ ಸಮುದಾಯದವರು ಗುಲ್ಬರ್ಗ ನಗರದ ಐವಾನ್-ಎ-ಶಾಹಿ ಪ್ರದೇಶದ ಮನೆ ಸಂ. 1- 114/ಎ ರಲ್ಲಿರುವ ಮಾಹಿತಿ ಕೇಂದ್ರಕ್ಕೆ ಕಚೇರಿ ವೇಳೆಯಲ್ಲಿ ಸಂಪರ್ಕಿಸಿ ಮಾಹಿತಿ ಪಡೆಯುವಂತೆ ಜಿಲ್ಲಾ ಅಲ್ಪಸಂಖ್ಯಾತ ಅಧಿಕಾರಿಗಳು ಕೋರಿದ್ದಾರೆ.
ಸಲಹಾ ಸಮಿತಿ ಸಭೆ
ಗುಲ್ಬರ್ಗ: ಪಿ.ಸಿ. ಮತ್ತು ಪಿ.ಎನ್.ಡಿ.ಟಿ. ಕಾಯ್ದೆ 1994ರಡಿ ರಚಿತಗೊಂಡ ಗುಲ್ಬರ್ಗ ಜಿಲ್ಲಾ ಸಲಹಾ ಸಮಿತಿ ಸಭೆಯುನ್ನು ಪಿ.ಸಿ. ಮತ್ತು ಪಿ.ಎನ್.ಡಿ.ಟಿ. ಕಾಯ್ದೆ 1994ರ ಅನುಪಾಲನೆ, ನೋಂದಣಿ ನವೀಕರಣ ಹಾಗೂ ಹೊಸ ಕೇಂದ್ರ ನೋಂದಣಿ ಸಂಬಂಧವಾದ ಸೂಕ್ತ ಮಾರ್ಗದರ್ಶನ ಜರುಗಿಸಬೇಕಾಗಿದೆ. ಈ ಹಿನ್ನೆಯಲ್ಲಿ ಜಿಲ್ಲಾ ಸಲಹಾ ಸಮಿತಿಯ ಸಭೆಯು ಜ. 4 ರಂದು ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕೋಣೆಯಲ್ಲಿ ಜರುಗಲಿದೆ. ಸಂಬಂಧಪಟ್ಟವರು ತಪ್ಪದೇ ಈ ಸಭೆಗೆ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಕೋರಿದ್ದಾರೆ.
ಪೌಷ್ಟಿಕ ಆಹಾರ
ಆಳಂದ: ತಾಲೂಕಿನ ಅಂಗನವಾಡಿ ಕೇಂದ್ರಗಳಲ್ಲಿ ದಾಖಲಾದ ಮಕ್ಕಳಿಗೆ ಅದರಲ್ಲೂ ಅಪೌಷ್ಟಿಕ ಮಕ್ಕಳಿಗೆ ಹಾಗೂ ಸಾಧಾರಣ ಮಕ್ಕಳಿಗೆ ವಾರದಲ್ಲಿ ನಾಲ್ಕು ದಿವಸ ಮೊಟ್ಟೆಗಳ ವಿತರಣೆ ಹಾಗೂ ಹಾಲು ಪ್ರತಿದಿನ ವಿತರಣೆ ಮಾಡಲಾಗುತ್ತಿದೆ. ಅಲ್ಲದೇ ಪೌಷ್ಟಿಕ ಆಹಾರ ನೀಡಲಾಗುತ್ತಿದೆ. 6 ತಿಂಗಳಿನಿಂದ 3 ವರ್ಷದ ಮಕ್ಕಳು, 3 ರಿಂದ 6 ವರ್ಷದ ಮಕ್ಕಳು, ಗರ್ಭಿಣಿ ಬಾಣಂತಿಯರು ಮತ್ತು ಕಿಶೋರಿಯರು ಇದರ ಲಾಭ ಪಡೆಯಬೇಕೆಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಕೋರಿದ್ದಾರೆ.
ಸಂಪರ್ಕ ಕಾರ್ಯಕ್ರಮ
ಕರಾಮುವಿ 13- 14ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಪ್ರವೇಶಾತಿ ಪಡೆದ ಸ್ನಾತಕೋತ್ತರ ಪ್ರಥಮ ಮತ್ತು ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಸಂಪರ್ಕ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಸಂಪರ್ಕ ಕಾರ್ಯಕ್ರಮವು ಕನ್ನಡ, ಇಂಗ್ಲಿಷ್, ಹಿಂದಿ, ರಾಜ್ಯಶಾಸ್ತ್ರ, ಸಮಾಜಶಾಸ್ತ್ರ, ಇತಿಹಾಸ, ಅರ್ಥಶಾಸ್ತ್ರ, ವಾಣಿಜ್ಯಶಾಸ್ತ್ರ (ಎಂಕಾಂ,) ಪ್ರಥಮ ಮತ್ತು ದ್ವಿತೀಯ ವಿಭಾಗದಲ್ಲಿ ಪ್ರವೇಶಾತಿ ಪಡೆದ ಎಲ್ಲ ವಿದ್ಯಾರ್ಥಿಗಳು ಜ.3 ರಿಂದ 7ರವರೆಗೆ ಮಧ್ಯಾಹ್ನ 1 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಸಂಪರ್ಕ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು.
ಇಂದು ಕೊನೆ ದಿನ
ಕರಾಮು ವಿಶ್ವವಿದ್ಯಾಲಯವು 13- 14ನೇ ಶೈಕ್ಷಣಿಕ ಸಾಲಿಗೆ ಬಿ.ಎ, ಬಿ.ಕಾಂ, ಎಂ.ಎ, ಎಂ.ಕಾಂ ಮತ್ತು ಡಿಪ್ಲೋಮಾ ಕೋರ್ಸ್ಗಳಿಗೆ ಪ್ರವೇಶ ಪಡೆಯಲು ಜ. 4ವರೆಗೆ ಅಂತಿಮ ಗಡುವು ನೀಡಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳು ಪ್ರವೇಶ ಶುಲ್ಕ ನೀಡದೇ ಮೇಲಿನ ಕೋರ್ಸ್ಗಳಿಗೆ ಪ್ರವೇಶ ಪಡೆಯಬಹುದು. ಕೂಡಲೇ ಪ್ರವೇಶ ಪಡೆದುಕೊಂಡು ಸಿದ್ಧಪಾಠ ಪಡೆಯಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

