ಶೈಕ್ಷಣಿಕ ಪ್ರಗತಿಗೆ ಕಾಳಜಿ ವಹಿಸಲಿ
ಶಹಾಪುರ: ಶೈಕ್ಷಣಿಕವಾಗಿ ಹಾಲುಮತ ಸಮಾಜ ಉನ್ನತ ಮಟ್ಟಕ್ಕೆ ಬೆಳೆಯುವಂತೆ ಸಮಾಜದ ಮುಖಂಡರು ಶ್ರಮಿಸಬೇಕು. ಇಂತಹ ಕಾರ್ಯಕ್ರಮಗಳಲ್ಲಿ ಶೈಕ್ಷಣಿಕ ಜಾಗೃತಿ ಮೂಡಿಸುವುದು ಅಗತ್ಯವಿದೆ ಎಂದು ಶಾಸಕ ಗುರು ಪಾಟೀಲ್ ಶಿರವಾಳ ಹೇಳಿದರು.
ತಾಲೂಕಿನ ಸೈದಾಪುರ ಗ್ರಾಮದಲ್ಲಿ ಮಾಳಿಂಗರಾಯನ ಜಾತ್ರಾ ಮಹೋತ್ಸವ ಅಂಗವಾಗಿ ಗುರುವಾರ ಏರ್ಪಡಿಸಿದ್ದ ಹಾಲುಮತ ಉತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಮಕ್ಕಳಿಗೆ ಉತ್ತಮ ಶಿಕ್ಷಣ ಕಲ್ಪಿಸುವ ಜವಾಬ್ದಾರಿ ಪಾಲಕರ ಮೇಲಿದೆ. ಕಾರಣ ಎಲ್ಲರೂ ಅನಕ್ಷರತೆ ಹೋಗಲಾಡಿಸಿ, ಅಕ್ಷರತೆ ಕಡೆ ಗಮನ ಹರಿಸಬೇಕು. ಒಂದು ಸಮಾಜ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಿದಲ್ಲಿ, ಆ ಸಮಾಜ ಸಮೃದ್ಧವಾಗಿ ಬೆಳೆಯುತ್ತದೆ. ಅನಕ್ಷರತೆ ಇದ್ದಲ್ಲಿ ದಾರಿದ್ರ್ಯವಿರುತ್ತದೆ. ಅದರಿಂದ ಮೋಸ, ವಂಚನೆಯಂತ ಘಟನೆಗಳಿಗೆ ಬಲಿಯಾಗಿ ಬದುಕು ದುಸ್ತರವಾಗುತ್ತದೆ ಎಂದರು.
ನಂತರ ಮಾತನಾಡಿದ ತಿಂಥಣಿಯ ಸಿದ್ದರಾಮನಂದ ಪುರಿಶ್ರೀ, ಬೀರದೇವರ ಅಣತಿಯಂತೆ ನಾವೆಲ್ಲ ನಡೆದುಕೊಳ್ಳಬೇಕು ಎಂದರು. ಜೆಡಿಎಸ್ ಮುಖಂಡ ಶರಣಪ್ಪ ಸಲಾದಪುರ ಮಾತನಾಡಿದರು. ಮಾಜಿ ಎಂಎಲ್ಸಿ ಅಮಾತೆಪ್ಪ ಕಂದಕೂರ, ಬಸವರಾಜ ವಿಭೂತಿಹಳ್ಳಿ, ಅಡಿವೆಪ್ಪ ಮಹಾರಾಯ ಹುಲಿಜಂತಿ, ಹಯ್ಯಾಳದ ಮಾರ್ಥಂಡಪ್ಪ ಪೂಜಾರಿ, ನಗನೂರಿನ ಖಂಡಪ್ಪ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು. ನಂತರ ಏಳು ಪಲ್ಲಕ್ಕಿಗಳ ಮೆರವಣಿಗೆ ವಿಜೃಭಂಣೆಯಿಂದ ನಡೆಯಿತು. ಮೆರವಣಿಗೆಯಲ್ಲಿ ಆಕರ್ಷಕ ಡೊಳ್ಳು ಕುಣಿತ ಜರುಗಿತು. ಸರ್ವರಿಗೂ ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

