ಗುಲ್ಬರ್ಗಾ

'ಮರಳು ಸುಗಮ ಸಾಗಣೆಗೆ ಕ್ರಮ'

Published On :

ಲಿಂಗಸ್ಗೂರು: ರಾಜ್ಯ ಸರ್ಕಾರ ಮರಳು ನೀತಿ ನೂತನ ಕಾಯ್ದೆ ಜಾರಿಗೆ ತಂದಿದ್ದು, ಮರಳು ಸಾಗಣೆಕೆಗೆ ಇರುವ ಗೊಂದಲ ನಿವಾರಿಸಿ ಸುಗಮ ಸಾಗಣೆಗೆ ಶೀಘ್ರ ಕ್ರಮ ಕೈಗೊಳ್ಳಲಾಗುವುದೆಂದು ವೈದ್ಯಕೀಯ ಶಿಕ್ಷಣ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಸ್ಪಷ್ಟಪಡಿಸಿದರು.
ತಾಲೂಕಿನ ಸರ್ಜಾಪುರ ಗ್ರಾಮದಲ್ಲಿ ಡಾ. ಅಂಬೇಡ್ಕರ್ ಭವನ ಕಾಮಗಾರಿಗೆ ಅಡಿಗಲ್ಲು ನೆರವೇರಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ನೂತನ ಕಾಯ್ದೆ ಜಾರಿಯಾದ ನಂತರ ಕಾನೂನು ಸಚಿವರ ಜೊತೆ ಈಗಾಗಲೇ ಚರ್ಚಿಸಿದ್ದು, ಅಲ್ಲದೆ ಜಿಲ್ಲಾಧಿಕಾರಿಗೆ ಕಾಯ್ದೆ ಕುರಿತು ನಿರ್ದೇಶನ ನೀಡಲಾಗಿದೆ. ಜಿಲ್ಲೆಯಲ್ಲಿ ಮರಳು ದೊರೆಯುವ ಸ್ಥಳಗಳನ್ನು ತಾಲೂಕು ಮಟ್ಟದ ಅಧಿಕಾರಿಗಳ ತಂಡ ರಚಿಸಿ ಗುರುತಿಸಲು ಸೂಚನೆ ನೀಡಲಾಗಿದೆ. ಲಿಂಗಸ್ಗೂರು ತಾಲೂಕಿನಲ್ಲಿ ಹಂಪನಾಳ, ದೇಸಾಯಿ ಭೋಗಾಪುರ, ತಲೇಖಾನ ಸೇರಿದಂತೆ ವಿವಿಧೆಡೆ ಮರಳು ಪ್ರದೇಶ ಇರುವ ಕುರಿತು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಶೀಘ್ರ ಟೆಂಡರ್ ಪ್ರಕ್ರಿಯೆ ಆರಂಭಿಸಲಾಗುವುದೆಂದು ತಿಳಿಸಿದರು.
ಕ್ರಿಯಾ ಯೋಜನೆ ತಯಾರಿ: ಜಿಲ್ಲೆಯಲ್ಲಿ ರಸ್ತೆಗಳು ತುಂಬಾ ಹದಗೆಟ್ಟಿದ್ದು, ಲೋಕೋಪಯೋಗಿ ಸಚಿವರ ಜೊತೆ ಚರ್ಚಿಸಲಾಗಿದೆ. ವಿವಿಧ ಯೋಜನೆಯಡಿ ರಸ್ತೆ ಕಾಮಗಾರಿ ಕೈಗೊಳ್ಳಲು ಕ್ರಿಯಾ ಯೋಜನೆ ತಯಾರಿಸಲಾಗಿದ್ದು, ಇದರಲ್ಲಿ ಗ್ರಾಮೀಣ ಹಾಗೂ ಪ್ರಮುಖ ರಸ್ತೆಗಳು ಸೇರ್ಪಡೆಗೊಂಡಿವೆ. ರಾಂಪೂರ ಏತನೀರಾವರಿ ಯೋಜನೆ ಕಾಲುವೆಗಳಲ್ಲಿನ ನ್ಯೂನ್ಯತೆಗಳ ಕುರಿತು ಅಧಿಕಾರಿಗಳ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದೆಂದು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.