ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯ
ಲಿಂಗಸ್ಗೂರು: ತಾಲೂಕಿನಲ್ಲಿ ಹಲವು ಸಮಸ್ಯೆಗಳಿಂದ ಬಳಲುತ್ತಿದ್ದು, ಕೂಡಲೇ ಪರಿಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ್ರಿಗೆ ಮನವಿ ಸಲ್ಲಿಸಿದರು.
ತಾಲೂಕಿನ ಸರ್ಜಾಪುರ ಗ್ರಾಮದಲ್ಲಿ ಡಾ. ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಅಡಿಗಲ್ಲ ಸಮಾರಂಭಕ್ಕೆ ಸಚಿವರು ಆಗಮಿಸಿದಾಗ ಮನವಿ ಸಲ್ಲಿಸಿದ ಕಾರ್ಯಕರ್ತರು, ತಾಲೂಕಿನ ಸರ್ಜಾಪುರ, ಕುಪ್ಪಿಗುಡ್ಡ, ನಿಲೋಗಲ್, ವೀರಾಪುರ ಸೇರಿದಂತೆ ಹಲವು ಹಳ್ಳಿಗಳಲ್ಲಿ ಆರ್ಸೆನಿಕ್ ಅಂಶವುಳ್ಳ ಕುಡಿವ ನೀರು ದೊರೆಯುತ್ತಿದೆ. ಗ್ರಾಮೀಣ ಜನತೆಗೆ ಪರ್ಯಾಯ ಮಾರ್ಗವಿಲ್ಲದೆ ಇದೆ ನೀರನ್ನು ಕುಡಿದು ಅನೇಕ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಈ ಹಿಂದೆ ಸರ್ಜಾಪುರ ಗ್ರಾಮಕ್ಕೆ ಗ್ರಾಮೀಣಾಭಿವೃದ್ಧಿ ಸಚಿವ ಹೆಚ್.ಕೆ.ಪಾಟೀಲರು ಭೇಟಿ ನೀಡಿ ಶುದ್ಧ ಕುಡಿವ ನೀರು ಪೂರೈಸಲು ಅಧಿಕಾರಿಗಳಿಗೆ ಸೂಚಿಸಿದ್ದರು. ಆದರೆ ಇದುವರೆಗೆ ಕ್ರಮ ಕೈಗೊಂಡಿರುವುದಿಲ್ಲ.
ಲಿಂಗಸ್ಗೂರು ಸಾರ್ವಜನಿಕ ಆಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯ, ಸಿಬ್ಬಂದಿ ಕೊರತೆಯಿಂದ ರೋಗಿಗಳು ಪರದಾಡುವಂತಾಗಿದ್ದು, ಕೂಡಲೇ ಸಿಬ್ಬಂದಿ ನೇಮಕ ಮಾಡಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಅನ್ನಭಾಗ್ಯ ಯೋಜನೆಗೆ ಕನ್ನ ಹಾಕುವ ಅಧಿಕಾರಿಗಳು ಹಾಗೂ ನ್ಯಾಯಬೆಲೆ ಅಂಗಡಿಗಳ ವಿರುದ್ಧ ಕ್ರಮ ಜರುಗಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

