ಸ್ವಾಭಿಮಾನ್ ವಾರ್ಷಿಕೋತ್ಸವ
ಗುಲ್ಬರ್ಗ: ಭಾರತ ಸ್ವಾಭಿಮಾನ್ 5ನೇ ವಾರ್ಷಿಕೋತ್ಸವದ ಅಂಗವಾಗಿ ಭಾನುವಾರ ಇಲ್ಲಿನ ಪತಂಜಲಿ ಯೋಗ ಸಮಿತಿ ಆಸರೆಯಲ್ಲಿ ಕಾರ್ಯಕರ್ತರು ಸೇರಿಕೊಂಡು ರ್ಯಾಲಿ ನಡೆಸಿದರು. ಭಾರತ ಸ್ವಾಭಿಮಾನ ಉದ್ದೇಶ, ಅದರ ಲಾಭಗಳ ಬಗ್ಗೆ ಈ ಸಂದರ್ಭದಲ್ಲಿ ವಿವರಿಸಲಾಯ್ತು. ಜಿಲ್ಲಾಧ್ಯಕ್ಷ ಶಿವಾನಂದ ಸಾಲೀಮಠ, ಸಂಯೋಜಕ ಮಚ್ಚೇಂದ್ರನಾಥ ಮೂಲಗೆ, ಮಹಿಳಾ ಪ್ರಭಾರಿ ಸುಮಂಗಲಾ ಚಕ್ರವರ್ತಿ, ಸುಭಾಸಚಂದ್ರ, ಚಂದ್ರಶೇಖರ, ಡಾ. ಕೋಠಾರಿ, ಬಸವರಾಜ ಕೊಲ್ಳೂರ ಸೇರಿದಂತೆ ಅನೇಕ ಕಾರ್ಯಕರ್ತರು, ಯೋಗ ಶಿಕ್ಷಕರು, ಯೋಗ ಸಾಧಕರುಗಳು ಕನ್ನಡ ಭವನದಿಂದ ವಲ್ಲಭಭಾಯಿ ಪಟೇಲ್ ವೃತ್ತದವರೆಗೂ ನಡೆದ ರ್ಯಾಲಿಯಲ್ಲಿ ಭಾಗವಹಿಸಿದ್ದರು.
--
ಇಂದು ಜಿಲ್ಲಾ ಮಟ್ಟದ 'ಕಾರಂಜಿ'
ಗುಲ್ಬರ್ಗ: ಜಿಲ್ಲಾ ಪಂಚಾಯ್ತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಡಿಡಿಪಿಐ ಕಚೇರಿ ಸಂಯುಕ್ತಾಶ್ರಯದಲ್ಲಿ ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗಾಗಿ ಗುಲ್ಬರ್ಗ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳು ಜ.6ರಂದು ಬೆಳಗ್ಗೆ 10.30 ಗಂಟೆಗೆ ಸೆಂಟ್ ಮೇರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಖಮರುಲ್ ಇಸ್ಲಾಂ ಅವರು ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಕೇಂದ್ರ ರೇಲ್ವೆ ಸಚಿವ ಮಲ್ಲಿಕಾರ್ಜುನ ಖರ್ಗೆ, ವೈದ್ಯಕೀಯ ಸಚಿವ ಡಾ. ಶರಣಪ್ರಕಾಶ ಪಾಟೀಲ್, ಬೀದರ್ ಲೋಕಸಭಾ ಸದಸ್ಯ ಎನ್. ಧರಂಸಿಂಗ್, ರಾಜ್ಯ ಸಭಾ ಸದಸ್ಯ ಬಸವರಾಜ ಪಾಟೀಲ್ ಸೇಡಂ ಅವರು ಭಾಗವಹಿಸುವರು. ಶಾಸಕ ದತ್ತಾತ್ರೇಯ ಸಿ. ಪಾಟೀಲ್ ರೇವೂರ್ ಅವರು ಅಧ್ಯಕ್ಷತೆ ವಹಿಸುವರು.
ಅತಿಥಿಗಳಾಗಿ ಜಿಪಂ ಅಧ್ಯಕ್ಷ ರಮೇಶ ಎಸ್. ಮರಗೋಳ, ಶಾಸಕರಾದ ಮಾಲೀಕಯ್ಯ ಗುತ್ತೇದಾರ, ಜಿ. ರಾಮಕೃಷ್ಣ, ಬಿ.ಆರ್. ಪಾಟೀಲ್, ಡಾ. ಅಜಯಸಿಂಗ್, ಪ್ರಿಯಾಂಕ್ ಖರ್ಗೆ, ಡಾ. ಉಮೇಶ ಜಾಧವ, ವಿಧಾನ ಪರಿಷತ್ ಸದಸ್ಯರಾದ ಕೆ.ಬಿ. ಶಾಣಪ್ಪ, ಅಲ್ಲಂಪ್ರಭು ಪಾಟೀಲ್, ಜಿಪಂ ಉಪಾಧ್ಯಕ್ಷೆ ಅನಿತಾ ಪವನಕುಮಾರ ವಳಕೇರಿ ಪಾಲ್ಗೊಳ್ಳುವರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

