ಕೊಳವೆ ಬಾವಿ ದುರಸ್ತಿಗೆ ಆಗ್ರಹ
ಕೆಂಭಾವಿ: ಸಮೀಪದ ಮಲ್ಲಾ (ಬಿ) ಗ್ರಾಪಂ ವ್ಯಾಪ್ತಿಯ ಹದನೂರ ಗ್ರಾಮದಲ್ಲಿ ಕಳೆದ ಒಂದು ತಿಂಗಳಿನಿಂದ ಕೊಳವೆ ಬಾವಿ ಕೆಟ್ಟು ಹೋಗಿದ್ದು, ದುರಸ್ತಿಗಾಗಿ ಅನೇಕ ಬಾರಿ ಮನವಿ ಮಾಡಿದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ತಾಪಂ ಸದಸ್ಯೆ ಕೃಷ್ಣಮ್ಮ ಈಶ್ವರ ಬಡಿಗೇರ ಆರೋಪಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು, ಗ್ರಾಮದಲ್ಲಿರುವ ಎಲ್ಲ ಕೊಳವೆ ಬಾವಿಗಳು ಕೆಟ್ಟು ಹೋಗಿದ್ದು, ದುರಸ್ತಿಗಾಗಿ ಗ್ರಾಪಂ ಕಚೇರಿಗೆ ಅಲೆದು ಸಾಕಾಗಿದೆ. ಸಂಬಂಧಿಸಿದ ಪಿಡಿಒ ತಿಂಗಳುಗಳಿಂದ ಕಚೇರಿಗೆ ಬಾರದೆ ಅನಧಿಕೃತ ಗೈರು ಹಾಜರಾಗಿದ್ದು, ಗ್ರಾಮದಲ್ಲಿನ ಅನೇಕ ಅಭಿವೃದ್ಧಿ ಕಾರ್ಯಗಳು ನೆನೆಗುದಿಗೆ ಬಿದ್ದಿವೆ.
ಅಲ್ಲದೆ ಕುಡಿವ ನೀರಿನ ಕೈಪಂಪು ಕೆಟ್ಟು ಅನಿವಾರ್ಯವಾಗಿ ಪಕ್ಕದಲ್ಲಿ ಹರಿಯುವ ಹಳ್ಳದ ನೀರನ್ನು ಜನತೆ ಕುಡಿಯುತ್ತಿದ್ದಾರೆ. ಇದರಿಂದ ರೋಗಗಳು ಹರಡುವ ಸಂಭವವಿದೆ. ಇದನ್ನು ಮನಗಂಡು ತಾಪಂ ಅಧಿಕಾರಿಗಳಿಗೆ ಅನೇಕ ಬಾರಿ ಮನವಿ ಮಾಡಲಾಗಿದೆಯಾದರೂ ಇನ್ನೂ ಕೊಳವೆ ಬಾವಿಗಳು ದುರಸ್ತಿ ಕಾಣದೆ ಜನತೆ ತೊಂದರೆ ಅನುಭವಿಸುತ್ತಿದ್ದಾರೆ. ಇನ್ನೆರಡು ದಿನದಲ್ಲಿ ಕೆಟ್ಟು ಹೋದ ಎಲ್ಲ ಬೋರ್‌ವೆಲ್‌ಗಳನ್ನು ದುರಸ್ತಿಗೊಳಿಸಿ ಜನತೆಗೆ ಶುದ್ಧ ಕುಡಿವ ನೀರು ಒದಗಿಸಬೇಕು. ವಿಳಂಬವಾದರೆ ಗ್ರಾಪಂ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಲಾಗುವದು ಎಂದು ಎಚ್ಚರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

