ಗುಲ್ಬರ್ಗಾ

ಸುಪ್ತ ಪ್ರತಿಭೆ ಹೊರತರಲು ಕಾರಂಜಿ ಸಹಕಾರಿ: ನಾಸೀರುದ್ದೀನ್

Published On :

ಯಾದಗಿರಿ: ಮಕ್ಕಳಲ್ಲಿರುವ ಸುಪ್ತ ಪ್ರತಿಭೆ ಹೊರತರಲು ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳು ಹೆಚ್ಚು ಸಹಕಾರಿ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ. ನಾಸೀರುದ್ದೀನ್ ಹೇಳಿದ್ದಾರೆ.
ನಗರದ ಡೋನ್ ಬೋಸ್ಕೋ ಶಿಕ್ಷಣ ಸಂಸ್ಥೆಯಲ್ಲಿ ಜಿಲ್ಲಾ ಪಂಚಾಯ್ತಿ ಮತ್ತು ಉಪನಿರ್ದೇಶಕರ ಕಾರ್ಯಾಲಯ ಸಾರ್ವಜನಿಕ ಶಿಕ್ಷಣ ಇಲಾಖೆ ಯಾದಗಿರಿ ವತಿಯಿಂದ ಹಮ್ಮಿಕೊಂಡಿದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಮಾತನಾಡಿ, ಶಿಕ್ಷಕರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವುದರ ಜೊತೆಗೆ ಅವರಲ್ಲಿ ಪಠ್ಯೇತರ ಚಟುವಟಿಕೆಗಳಾದ ಕಲೆ, ಸಾಹಿತ್ಯ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ  ಹವ್ಯಾಸಗಳನ್ನು ಬೆಳೆಸುವಂತೆ ಕರೆ ನೀಡಿದರು.
ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಭೀಮರಾಯ ಕಂದಕೂರ ಗ್ರಾಮೀಣ ಪ್ರದೇಶದ ಶಾಲೆಗಳಲ್ಲಿ ಹಲವಾರು ಪ್ರತಿಭೆಗಳಿರುವ ವಿದ್ಯಾರ್ಥಿಗಳಿದ್ದಾರೆ. ಶಿಕ್ಷಕರು ಅಂತಹ ವಿದ್ಯಾರ್ಥಿಗಳನ್ನು ಗುರುತಿಸಿ ಅಗತ್ಯ ಮಾರ್ಗದರ್ಶನ ನೀಡಿ ಎಂದು ಹೇಳಿದರು. ಜಿಪಂ ಅಧ್ಯಕ್ಷೆ ಭೀಮಮ್ಮ ಚಪೆಟ್ಲಾ ಕಾರ್ಯಕ್ರಮ ಉದ್ಘಾಟಿಸಿದರು. ಜಿಪಂ ಉಪಾಧ್ಯಕ್ಷೆ ಚನ್ನಬಸಮ್ಮ ಸೋಮಣೋರ್, ಜಿಲ್ಲಾ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಪಿ. ಕಿಷ್ಟಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಪ್ರಭು, ಮಲ್ಲಿಕಾರ್ಜುನ ಕವಲಿ, ಯಂಕಪ್ಪ ದೊಡ್ಡಮನಿ, ಕೃಷ್ಣ ಚಪೆಟ್ಲಾ, ಅಶೋಕ ಕೆಂಭಾವಿ, ಹೊಸಮನಿ, ಬಸವರಾಜ ಯಾಳಗಿ, ಯಂಕೊಬಾ, ಹಪೀಜ್ ಪಟೇಲ್, ರಾಠೋಡ್, ಆಶಪ್ಪ ಗಾಜರಕೋಟ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರಿಕ್ಷೆಯಲ್ಲಿ ಹೆಚ್ಚಿನ ಅಂಕ ಗಳಿಸುವಲ್ಲಿ ಸಾಧನೆಗೈದ ಶಾಲೆಗಳ ಮುಖ್ಯ ಶಿಕ್ಷಕರನ್ನು ಸನ್ಮಾನಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.