ಕಳಂಕಿತ ಸಚಿವರ ಕೈಬಿಡಲು ಬಿಜೆಪಿ ಆಗ್ರಹ
ಗುರುಮಠಕಲ್: ರಾಜ್ಯ ಸಚಿವ ಸಂಪುಟದಲ್ಲಿ ಹಲವಾರು ಪ್ರಕರಣಗಳಲ್ಲಿ ಆರೋಪವಿರುವ ಸಚಿವರಾದ ಡಿ.ಕೆ. ಶಿವಕುಮಾರ ಹಾಗೂ ರೋಷನ್ಬೇಗ್ ಅವರನ್ನು ಮುಖ್ಯಮಂತ್ರಿ ಕೂಡಲೇ ಸಂಪುಟದಿಂದ ಕೈಬಿಡಬೇಕೆಂದು ಜಿಲ್ಲಾ ಬಿಜೆಪಿ ಘಟಕದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿ ಒತ್ತಾಯಿಸಿದರು.
ಸಿಎಂ ಸಿದ್ದರಾಮಯ್ಯ ಹಲವಾರು ಸಮಾರಂಭಗಳಲ್ಲಿ ತನ್ನ ಮಂತ್ರಿ ಮಂಡಲದಲ್ಲಿ ಪ್ರಾಮಾಣಿಕ ಸಚಿವರಿದ್ದಾರೆ. ಕಳಂಕಿತರಿಗೆ ಸ್ಥಾನವಿಲ್ಲ ಎಂದು ಹೇಳಿದ್ದಾರೆ. ಆದರೆ ಮುಖ್ಯಮಂತ್ರಿಗಳು ಕಳಂಕಿತರನ್ನು ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವ ಮೂಲಕ ನುಡಿದಂತೆ ನಡೆಯದೆ ಅವರು ಕೂಡ ದಾರಿ ತಪ್ಪುತ್ತಿದ್ದಾರೆಂದು ದೂರಿದರು.
ಅಕ್ರಮ ಗಣಿಗಾರಿಕೆ ವಿರುದ್ಧ ಸಿಎಂ ಈ ಹಿಂದೆ ಬಳ್ಳಾರಿವರೆಗೆ ಪಾದಯಾತ್ರೆ ಮಾಡಿದರು. ಅದಕ್ಕಿಂತ ಮಿಗಿಲಾದ ಆರೋಪಗಳನ್ನು ಎದುರಿಸುತ್ತಿರುವ ಸಚಿವರನ್ನು ಸಂಪುಟಕ್ಕೆ ಸೇರಿಸಿಕೊಂಡಿರುವುದನ್ನು ಬಿಜೆಪಿ ಘಟಕ ಉಗ್ರವಾಗಿ ಖಂಡಿಸುತ್ತದೆ.
ಈ ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಸಚಿವರ ಮೇಲೆ ಸಣ್ಣ ಆರೋಪ ಬಂದಾಗ ಅವರ ವಿರುದ್ಧ ಹರಿಹಾಯುತ್ತಿದ್ದ ರಾಜ್ಯಪಾಲರು ಕೂಡಲೇ ಮಧ್ಯ ಪ್ರವೇಶಿಸಿ ಕಳಂಕಿತ ಸಚಿವರನ್ನು ಸಂಪುಟದಿಂದ ಕೈಬಿಡಲು ಮುಖ್ಯಮಂತ್ರಿಗೆ ಸೂಚಿಸಬೇಕೆಂದು ಆಗ್ರಹಿಸಿದರು.
ಸಿಎಂ ಸಚಿವರಿಬ್ಬರನ್ನು ಸಂಪುಟದಿಂದ ಕೈಬಿಡುವ ತನಕ ಬಿಜೆಪಿ ತನ್ನ ಹೋರಾಟವನ್ನು ಕೈಬಿಡುವುದಿಲ್ಲ ಎಂದು ಎಚ್ಚರಿಸಿದರು. ಈ ಸಂದರ್ಭದಲ್ಲಿ ನಗರ ಪ್ರಾಧಿಕಾರ ಮಾಜಿ ಅಧ್ಯಕ್ಷ ದೇವಿಂದ್ರನಾಥ ನಾದ, ಬಿಜೆಪಿ ಸಂಘಟನಾ ಕಾರ್ಯದರ್ಶಿ ನೀಲಕಂಠರಾಯ ಎಲ್ಹೇರಿ, ಭೀಮರಾಯ ಜಂಗಳಿ, ಚನ್ನಯ್ಯ ಮಾಳಿಕೇರಿ, ಬಸವರಾಜ ಪಾಟೀಲ್ ಬಿಳ್ಹಾರ್, ಲಿಂಗಪ್ಪ ಹತ್ತಿಮನಿ, ಹಣಮಂತ ಇಟಗಿ, ರಮೇಶ ಕೋಟಿಮನಿ, ಅನಂತರಾವ ದೇಶಪಾಂಡೆ, ವೆಂಕಟರಡ್ಡಿ ಅಬ್ಬೆತುಮಕೂರ, ರಘು ಚವ್ಹಾಣ, ನರಸಿಂಗ ಠಾಕೂರ್, ವೆಂಕಟೇಶ ಹುಲಕಲ್, ಲಘುಮಣ್ಣ ಮುಂಡರಗಿ, ಸುಭಾಶ ಬಿರಾದರ್ ಸೇರಿದಂತೆ ಹಲವರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

