ನರೇಗಾ ಯೋಜನೆ ಸದ್ಬಳಕೆಯಾಗಲಿ: ತಾಪಂ ಇಒ
ಸುರಪುರ: ಮಹತ್ವಾಕಾಂಕ್ಷಿ ಉದ್ಯೋಗ ಖಾತ್ರಿ ಯೋಜನೆಯ ಅನುದಾನ ದುರ್ಬಳಿಕೆಯಾಗದಂತೆ ಎಚ್ಚರಿಕೆ ವಹಿಸಬೇಕು. ರೈತರು ಮತ್ತು ಕೃಷಿ ಕಾರ್ಮಿಕರ ದುಡಿಯುವ ಕೈಗಳಿಗೆ ಕೆಲಸ ನೀಡಬೇಕು. ಮಾರ್ಚ್ ತಿಂಗಳಲ್ಲಿ ಅನುದಾನ ಸಂಪೂರ್ಣ ಖರ್ಚಾಗಬೇಕು ಎಂದು ತಾಪಂ ಇಒ ಪ್ರಭಯ್ಯ ಹಿರೇಮಠ ತಿಳಿಸಿದರು.
ತಾಪಂ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಈ ಹಿಂದೆ ತಾಲೂಕಿನಲ್ಲಿ ಉದ್ಯೋಗ ಖಾತ್ರಿ ಯೋಜನೆ ಸಮರ್ಪಕವಾಗಿಲ್ಲ ಎಂಬ ಆರೋಪವಿದೆ. ಕಾರಣ, ಈ ಬಾರಿ ಯಾವುದೇ ಕಾರಣಕ್ಕೆ ಯೋಜನೆ ದುರುಪಯೋಗವಾಗದಂತೆ ಪಿಡಿಒಗಳು ಎಚ್ಚರಿಕೆ ವಹಿಸಬೇಕು. ಯೋಜನೆಯಲ್ಲಿ ಆಯ್ಕೆ ಮಾಡಿಕೊಂಡ ಕಾಮಗಾರಿಯನ್ನು ತ್ವರಿತವಾಗಿ ಮುಗಿಸಿ ಇಲಾಖೆಗೆ ವಿವರವಾದ ಮಾಹಿತಿ ನೀಡಬೇಕು ಎಂದು ಸಲಹೆ ನೀಡಿದರು.
ಆಯ್ಕೆ ಮಾಡಿಕೊಂಡ ಕಾಮಗಾರಿಗಳ ಗುಣಮಟ್ಟ ಪರಿಶೀಲಿಸಿ ಸೂಕ್ತವಾದ ದಾಖಲೆಗಳನ್ನು ಪಡೆದುಕೊಂಡು ಎಂಐಎಸ್ ಮಾಡಬೇಕು. ಒಂದು ವೇಳೆ ಬೋಗಸ್ ಎಂದು ಕಂಡುಬಂದಲ್ಲಿ ಸಂಬಂಧಿಸಿದ ಪಿಡಿಒಗಳನ್ನೇ ಮುಂದಿನ ಬೆಳವಣಿಗೆಗೆ ಜವಾಬ್ದಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಮುಖ್ಯಮಂತ್ರಿಗಳ ಹೆಚ್ಚುವರಿ 7 ಕಾರ್ಯಕ್ರಮಗಳ ಯೋಜನೆಯಲ್ಲಿ ರಾಸಿ ಕಣ, ನಮ್ಮ ಹೊಲ ನಮ್ಮ ದಾರಿ ಸೇರಿದಂತೆ ಇತರೆ ಕಾಮಗಾರಿಯಲ್ಲಿ ಪ್ರತಿ ಪಂಚಾಯಿತಿಗೆ 50 ಫಲಾನುಭವಿಗಳನ್ನು ಆಯ್ಕೆ ಮಾಡಿಕೊಂಡು ಕಾಮಗಾರಿ ಕೈಗೆತ್ತಿಕೊಳ್ಳಲು ಸೂಚಿಸಲಾಗಿತ್ತು. ಆದರೆ ಕೆಲ ಪಂಚಾಯಿತಿಗಳಲ್ಲಿ ಈ ಯೋಜನೆಗೆ ಇನ್ನೂ ಫಲಾನುಭವಿಗಳ ಆಯ್ಕೆಯಾಗಿಲ್ಲ ಎಂದು ತಿಳಿಸಿದರು.
ರಾಜೀವಗಾಂಧಿ ಚೈತನ್ಯ ಯೋಜನೆ ಅಡಿಯಲ್ಲಿ ಉಚಿತ ಕಂಪ್ಯೂಟರ್ ತರಬೇತಿ ನೀಡುವ ಅವಕಾವಿದೆ. 18-35 ವಯಸ್ಸಿನ ಒಳಗಿನ 40 ನಿರುದ್ಯೋಗಿ ವಿದ್ಯಾವಂತರನ್ನು ಆಯ್ಕೆ ಮಾಡಿಕೊಳ್ಳಬೇಕು. ಸಿಬ್ಬಂದಿ ವೇತನಕ್ಕಾಗಿ ಬ್ಯಾಂಕ್‌ಗಳಲ್ಲಿ 42 ಗ್ರಾಪಂ.ಯವರು ಪ್ರತ್ಯೇಕ ಖಾತೆ ತೆರೆಯಬೇಕು ಎಂದು ಸಲಹೆ ನೀಡಿದರು. ಗ್ರಾಮಸಭೆ, ವಾರ್ಡ್ ಸಭೆ, ಕಾಯಕ ಸಂಘಗಳ ರಚನೆ ಮತ್ತು ಉದ್ಯೋಗ ಖಾತ್ರಿ ಯೋಜನೆಯ ಹಣ ಪಾವತಿ ಸೇರಿದಂತೆ ಇತರೆ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ವ್ಯವಸ್ಥಾಪಕ ಚಂದ್ರಶೇಖರ ಜೇವರ್ಗಿ, ಎ.ಡಿ. ವಿಶ್ವನಾಥ ಇದ್ದರು. 42 ಗ್ರಾಪಂ ಕಾರ್ಯದರ್ಶಿ, ಪಿಡಿಒ ಸಭೆಯಲ್ಲಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

