ಹಾಸ್ಟೆಲ್ ಮಂಜೂರು ಮಾಡಲು ಮನವಿ
ಯಾದಗಿರಿ: ತಾಲೂಕಿನ ಹತ್ತಿಕುಣಿ ಗ್ರಾಮದಲ್ಲಿ ಪರಿಶಿಷ್ಟ ಪಂಗಡದ ಬಾಲಕಿಯರಿಗಾಗಿ ಮೇಟ್ರಿಕ್ ಪೂರ್ವ ವಸತಿ ನಿಲಯ ಮಂಜೂರಿ ಮಾಡಬೇಕೆಂದು ಕನ್ನಡ ರಕ್ಷಣಾ ವೇದಿಕೆಯ ಗ್ರಾಮ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಕನ್ನಡಿ ನೇತೃತ್ವದ ಪದಾಧಿಕಾರಿಗಳು ಕೇಂದ್ರ ರೇಲ್ವೆ ಸಚಿವ ಮಲ್ಲಿಕಾರ್ಜುನ ಖರ್ಗೆಗೆ ಮನವಿ ಪತ್ರ ಸಲ್ಲಿಸಿ ಒತ್ತಾಯಿಸಿದರು. ಗ್ರಾಮದಲ್ಲಿ ನಡೆದ ಜನ ಸಂಪರ್ಕ ಸಭೆಯಲ್ಲಿ ಸಚಿವರಿಗೆ ಮನವಿ ಪತ್ರ ಸಲ್ಲಿಸಿದ ಅವರು ಗ್ರಾಮದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಇರುವುದರಿಂದ ಕಾಲೇಜಿಗೆ ಸುತ್ತಮುತ್ತಲಿನ ಗ್ರಾಮದ ವಿದ್ಯಾರ್ಥಿನಿಯರು ಆಗಮಿಸುತ್ತಾರೆ. ಕಾರಣ ವಸತಿ ನಿಲಯ ಅವಶ್ಯಕತೆಯಿದ್ದು. ಕೂಡಲೇ ಮಂಜೂರಿ ಮಾಡಬೇಕೆಂದು ಹೇಳಿದರು. ಸರ್ಕಾರಿ ಕಾಲೇಜಿಗೆ ಸೂಕ್ತ ಕಟ್ಟಡವಿಲ್ಲ, ಕಟ್ಟಡ ನಿರ್ಮಾಣಕ್ಕೆ ನಿವೇಶನದ ಅವಶ್ಯಕತೆಯಿದ್ದು, ಈ ಹಿಂದೆ ಕಟ್ಟಡ ನಿರ್ಮಾಣಕ್ಕೆ ಬಂದಂತಹ ಅನುದಾನ ಬಳಕೆಯಾಗದೆ ವಾಪಾಸ್ ಕಳುಹಿಸಲಾಗಿದೆ. ಕಾರಣ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಿವೇಶನ ದೊರಕಿಸಿ ಕೊಡುವುದರ ಮೂಲಕ ಕಟ್ಟಡ ಕಾಮಗಾರಿ ಆರಂಭಿಸಬೇಕೆಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ. ವೇದಿಕೆ ಪ್ರಧಾನ ಕಾರ್ಯದರ್ಶಿ ನಾಗಪ್ಪ ಗೋಪಾಳಪುರ, ಶರಣಪ್ಪ ಮಡಿವಾಳ, ಶರಣಪ್ಪ ಉಳ್ಳೆಸೂಗುರ, ರಮೇಶ ಕಂಬಾರ, ಶರಣಪ್ಪ ನಾಯಕ, ಭೀಮು ಸಾತನೂರ, ನಾಗಪ್ಪ ಶಹಾಪುರ ಸೇರಿದಂತೆ ಇನ್ನಿತರರು ಇದ್ದರು.
'ಉತ್ತಮ ಬಾಂಧವ್ಯವಿರಲಿ'
ಹುಣಸಗಿ: ಬ್ಯಾಂಕಿನೊಂದಿಗೆ ಗ್ರಾಹಕರು ಉತ್ತಮ ಬಾಂಧವ್ಯ ಇಟ್ಟುಕೊಂಡಲ್ಲಿ ಜೀವನಕ್ಕೆ ಭದ್ರತೆ ಸಿಕ್ಕಿದಂತಾಗುತ್ತದೆ ಎಂದು ಪ್ರಗತಿ ಕೃಷ್ಣಾ ಗ್ರಾಮೀಣ ಬ್ಯಾಂಕ್ ಮ್ಯಾನೇಜರ್ ವಿಜಯ ರಾಘವನ್ ಹೇಳಿದರು. ಸಮೀಪದ ರಾಜನಕೋಳೂರು ಪ್ರಗತಿ ಕೃಷ್ಣಾ ಗ್ರಾಮೀಣ ಬ್ಯಾಂಕಿನಲ್ಲಿ ನಡೆದ ಗ್ರಾಹಕರ ಸಮಾವೇಶದಲ್ಲಿ ಅವರು ಮಾತನಾಡಿ, ಕೃಷ್ಣಾ ಗ್ರಾಮೀಣ ಬ್ಯಾಂಕ್ ಇದೀಗ ರಿಸರ್ವ್ ಬ್ಯಾಂಕ್ ಸೂಚನೆಯಂತೆ ಕಳೆದ 6 ತಿಂಗಳಿನಿಂದ ಬ್ಯಾಂಕಿನ ಮುಖ್ಯ ಪ್ರವರ್ತಕರಾಗಿ ಕೆನರಾ ಬ್ಯಾಂಕ್ ಅಧಿಕಾರ ವಹಿಸಿಕೊಂಡಿದ್ದು, ಮುಂದೆ ಬ್ಯಾಂಕ್ ವ್ಯಾಪ್ತಿಯಲ್ಲಿ ಬರುವ ಸುಮಾರು ಕಡೆಗಳಲ್ಲಿ ರೈತರೊಂದಿಗೆ ನೇರ ಭೇಟಿ ಕಾರ್ಯಕ್ರಮ ಆಯೋಜಿಸಲಾಗುವುದು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

