ಗುಲ್ಬರ್ಗಾ

'ತೀರ್ಮಾನ ಬೆಂಬಲಿಸಿ ಬಿಜೆಪಿ ಸೇರ್ಪಡೆ'

Published On :

ಗುರುಮಠಕಲ್: ರಾಜ್ಯ ಹಾಗೂ ದೇಶದ ಹಿತದೃಷ್ಟಿಯಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬಿಜೆಪಿ ಪಕ್ಷದಲ್ಲಿ ಕೆಜೆಪಿ ವಿಲೀನಗೊಳಿಸುವ ನಿರ್ಧಾರವನ್ನು ನಾವೆಲ್ಲರೂ ಬೆಂಬಲಿಸಿ ಬಿಜೆಪಿಗೆ ಸೇರ್ಪಡೆಯಾಗಲು ತಿರ್ಮಾನಿಸಿದ್ದೇವೆ ಎಂದು ಮಾಜಿ ಶಾಸಕ, ಕೆಜೆಪಿ ಮುಖಂಡ ಡಾ. ವೀರಬಸವಂತರಡ್ಡಿ ಮುದ್ನಾಳ ಹೇಳಿದರು.
ಗುರುಮಠಕಲ್ ಹಾಗೂ ಯಾದಗಿರಿ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹ ಸಭೆ ನಂತರ ಬುಧವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಾಜಿ ಮುಖ್ಯಮಂತ್ರಿ ಬಿಎಸ್‌ವೈ ಅವರು ಯಾದಗಿರಿ ಜಿಲ್ಲೆಯಾಗಲು ಹಾಗೂ ಅಭಿವೃದ್ಧಿಗೆ ಪ್ರಮುಖರು ಎಂದರು.
ಜಿಲ್ಲೆಯ ಶಹಾಪುರ ಶಾಸಕ ಗುರು ಪಾಟೀಲ್ ಅವರು ಕೂಡ ಬಿಜೆಪಿ ಸೇರ್ಪಡೆಯಾಗುವ ವಿಷಯದಲ್ಲಿ ಸ್ವಲ್ಪ ಮಟ್ಟಿಗೆ ಗೊಂದಲದಲ್ಲಿದ್ದಾರೆ. ಅವರು ಕೂಡ ಬಿಜೆಪಿ ಸೇರ್ಪಡಯಾಗುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಮುಖಂಡ ವೆಂಕಟರಡ್ಡಿ ಮುದ್ನಾಳ ಮಾತನಾಡಿ, ನಾನು ಕೆಜೆಪಿ ಪಕ್ಷಕ್ಕೆ ಸೇರ್ಪಡೆ ನಿರ್ಧಾರವನ್ನು ಜೆಡಿಎಸ್ ಮುಖಂಡರು ಟೀಕಿಸಿರುವದಕ್ಕೆ ಅವರ್ಯಾರು ಎಂದು ತರಾಟೆಗೆ ತೆಗೆದುಕೊಂಡರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.