ಗುಲ್ಬರ್ಗಾ

ಬಿಎಸ್‌ವೈ ಅಭಿವೃದ್ಧಿ ಕೆಲಸ ಜನತೆ ಮರೆಯುವಂತಿಲ್ಲ

Published On :

ಯಾದಗಿರಿ: ರಾಜ್ಯದಲ್ಲಿ ಈ ಹಿಂದೆ ಬಿಜೆಪಿ ಅಧಿಕಾರದಲ್ಲಿದ್ದಾಗ ಅಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಜಿಲ್ಲೆಗೆ ಕೈಗೊಂಡ ಅಭಿವೃದ್ಧಿ ಕೆಲಸಗಳನ್ನು ಜನತೆ ಮರೆಯುವಂತಿಲ್ಲ ಎಂದು ಮಾಜಿ ಶಾಸಕ ಡಾ. ವೀರಬಸವಂತರಡ್ಡಿ ಮುದ್ನಾಳ ಹೇಳಿದರು.
ನಗರದ ಜಿಲ್ಲಾ ಕೆಜೆಪಿ ಕಚೇರಿಯಲ್ಲಿ ಬುಧವಾರ ನಡೆದ ಯಾದಗಿರಿ ಹಾಗೂ ಗುರುಮಠಕಲ್ ಮತಕ್ಷೇತ್ರದ ಕೆಜೆಪಿ ಕಾರ್ಯಕರ್ತರ ಹಾಗೂ ಅಭಿಮಾನಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಬಿಎಸ್‌ವೈ ಅವರ ಇಚ್ಛಾಶಕ್ತಿಯಿಂದಲೇ ಯಾದಗಿರಿ ನೂತನ ಜಿಲ್ಲೆಯಾಗಿ ಅಸ್ತಿತ್ವಕ್ಕೆ ಬಂದಿರುವುದು. ಅಲ್ಲದೆ ಸ್ವಲ್ಪ ಮಟ್ಟಿಗೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ದೊರೆಯಿತು ಎಂದರು.
ಕೆಎಂಎಫ್ ಮಾಜಿ ಅಧ್ಯಕ್ಷ ಸಿದ್ದಣಗೌಡ ಕಾಡಂನೋರ್ ಮಾತನಾಡಿ, ಈ ಭಾಗದಲ್ಲಿ ಕಳೆದ ಎರಡು ಚುನಾವಣೆಗಳಲ್ಲಿ ನಮ್ಮ ನಾಯಕರು ಪರಾಜಿತಗೊಂಡರು. ಇದು ಕಾರ್ಯಕರ್ತರಲ್ಲಿ ಸ್ವಲ್ಪ ಮಟ್ಟಿಗೆ ಹತಾಶೆ ಮೂಡಿಸಿದೆ. ಆದರೂ ನಾಯಕರು ಕಾರ್ಯಕರ್ತರ ಹಾಗೂ ಎಲ್ಲಾ ವರ್ಗದ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದಾರೆ. ಎಲ್ಲರ ಹಿತದೃಷ್ಟಿಯಿಂದ ನಾವೆಲ್ಲರೂ ನಾಯಕ ಬಿಎಸ್‌ವೈ ಹಾಗೂ ಮುದ್ನಾಳ ಸಹೋದರರ ನಾಯಕತ್ವದಲ್ಲಿ ಬಿಜೆಪಿ ಸೇರುವುದು ಒಳ್ಳೆಯ ತಿರ್ಮಾನ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.
ಕೆಜೆಪಿ ಮುಖಂಡ ವೆಂಕಟರಡ್ಡಿ ಮುದ್ನಾಳ ಮಾತನಾಡಿ, ನಾವು ಅಧಿಕಾರ ಇರಲಿ ಬಿಡಲಿ ಎರಡು ಮತಕ್ಷೇತ್ರದ ಕಾರ್ಯಕರ್ತರ ಹಾಗೂ ಜನರ ಸಮಸ್ಯೆಗಳಿಗೆ ಮೊದಲಿನಿಂದಲು ಪ್ರಾಮಾಣಿಕವಾಗಿ ಹೋರಾಟ ಮಾಡುವುದರ ಮೂಲಕ ಪರಿಹಾರ ದೊರಕಿಸಿಕೊಟ್ಟಿದ್ದೇವೆ ಎಂದು ಹೇಳಿದರು.
ಜಿಲ್ಲಾ ಕೆಜೆಪಿ ಅಧ್ಯಕ್ಷ ಡಾ. ಶರಣಭೂಪಾಲರಡ್ಡಿ ನಾಯ್ಕಲ್ ಹಾಗೂ ಸಣ್ಣ ಸಿದ್ರಾಮಪ್ಪಗೌಡ ಬೆಳಗುಂದಿ ಇನ್ನಿತರರು ಮಾತನಾಡಿದರು.
ಸಭೆಯಲ್ಲಿ ಉಭಯ ಮತಕ್ಷೇತ್ರದ ಕಾರ್ಯಕರ್ತರು ಮಾತನಾಡಿ, ಬಿಜೆಪಿ ಸೇರ್ಪಡೆಯಾಗುವುದು ಒಳಿತು ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.
ಜಿಪಂ ಮಾಜಿ ಸದಸ್ಯರಾದ ರಾಮರಡ್ಡಿಗೌಡ ಕ್ಯಾಸಪನಳ್ಳಿ, ಉಮಾರಡ್ಡಿ ನಾಯ್ಕಲ್, ರಾಮಲಿಂಗಪ್ಪ ಯರಗೋಳ, ವೆಂಕಟರಾಮರಡ್ಡಿ ವಡವಟ, ಬಸವರಾಜಪ್ಪಗೌಡ ಕ್ಯಾತನಾಳ, ಭೀಮರಾಯ ಬದ್ದೇಪಲ್ಲಿ, ಶರಣಗೌಡ ಬಾಡಿಯಾಳ ಇದ್ದರು.
ಸಭೆಯಲ್ಲಿ ಯಾದಗಿರಿ ಹಾಗೂ ಗುರುಮಠಕಲ್ ಮತಕ್ಷೇತ್ರದ ಹಲವಾರು ಗ್ರಾಮಗಳಿಂದ ಆಗಮಿಸಿದ ನೂರಾರು ಕಾರ್ಯಕರ್ತರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.