ಗುಲ್ಬರ್ಗಾ

ಪಾಲಿಟೆಕ್ನಿಕ್ ಕಾಲೇಜು ಸ್ಥಳ ಪರಿಶೀಲನೆ

Published On :

ಸುರಪುರ: 2009ರಲ್ಲಿ ಪ್ರಾರಂಭವಾದ ಇಲ್ಲಿನ ಡಿಪ್ಲೋಮಾ ಕಾಲೇಜು ಕಟ್ಟಡವಿಲ್ಲದೆ ವಿದ್ಯಾರ್ಥಿಗಳು ತೊಂದರೆಯನ್ನು ಅನುಭವಿಸುತ್ತಿದ್ದರು. ಶಾಸಕ ರಾಜಾ ವೆಂಕಟಪ್ಪ ನಾಯಕ ಬುಧವಾರ ಕಾಲೇಜಿಗೆ ಭೇಟಿ ನೀಡಿ ಕಟ್ಟಡ ಮತ್ತು ವಸತಿ ನಿಲಯದ ಸ್ಥಳವನ್ನು ಪರಿಶೀಲಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಬಹುದಿನಗಳಿಂದ ಕಾಲೇಜಿಗೆ ಕಟ್ಟಡ ವಿರಲಿಲ್ಲ. ವಿದ್ಯಾರ್ಥಿಗಳು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಕಾರಣ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಇಲ್ಲಿಯ ಡಿಗ್ರಿ ಕಾಲೇಜಿನ ಹಿಂದುಗಡೆ ಉಳಿದಿರುವ ನಿವೇಶನದಲ್ಲಿ ಕಾಲೇಜು ಕಟ್ಟಡ ಮತ್ತು ವಸತಿ ನಿಲಯ ನಿರ್ಮಿಸಿಕೊಡಲಾಗುವುದು ಎಂದು ಭರವಸೆ ನೀಡಿದರು. ಸಂಬಂಧಿಸಿದ ಆಯುಕ್ತರೊಂದಿಗೆ ತಾವು ಮಾತನಾಡಿ, ಡಿಗ್ರಿ ಕಾಲೇಜಿನ ಹಿಂದುಗಡೆ ಉಳಿದ ನಿವೇಶನದಲ್ಲಿ ಕಾಲೇಜು ಕಟ್ಟಡ ಹಾಗೂ ವಸತಿ ನಿಲಯ ನಿರ್ಮಿಸಿಕೊಡುವುದಾಗಿ, ಗ್ರಂಥಾಲಯಕ್ಕೆ ಹೆಚ್ಚಿನ ಪುಸ್ತಕಗಳನ್ನು ಖರೀದಿಸಲು ಸಹಾಯಧನ ನೀಡುವುದಾಗಿ ತಿಳಿಸಿದರು. ಇದೇ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯ ಶ್ರೀಕಾಂತ ಜಿ.ಕೆ. ಶಾಸಕರನ್ನು ಸನ್ಮಾನಿಸಿದರು. ರಾಮನಗೌಡ, ಬಸವರಾಜ, ಪ್ರೇಮದತ್ತ, ಶೃತಿ ಚಾಮಾ, ಮುಖಂಡರಾಧ ಸೂಲಪ್ಪ, ವಿಠ್ಠಲ್ ಯಾದವ್, ರಾಜಶೇಖರಗೌಡ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.