ಸ್ಮಾಟರ್ ಕ್ಲಾಸ್ ಆರಂಭಕ್ಕೆ 10 ಲಕ್ಷ ಅನುದಾನ: ಶಾಸಕರ ಭರವಸೆ
ಸುರಪುರ: ಪಟ್ಟಣದ ಸರ್ಕಾರಿ ಬಾಲಕರ ಪ್ರೌಢ, ಕಬಾಡಗೇರಾ ಹಾಗೂ ರಂಗಂಪೇಟೆ, ತಿಮ್ಮಾಪುರ ಸರ್ಕಾರಿ ಶಾಲೆಗಳಲ್ಲಿ ಸ್ಮಾಟರ್‌ಕ್ಲಾಸ್ ಆರಂಭಿಸಲು ಪುರಸಭೆಯ ಬಿಆರ್ಜಿಎಫ್ ಯೋಜನೆ ಅಡಿಯಲ್ಲಿ 10 ಲಕ್ಷ ಅನುದಾನ ಕಲ್ಪಿಸುವುದಾಗಿ ಶಾಸಕ ರಾಜಾ ವೆಂಕಟಪ್ಪ ನಾಯಕ ಭರವಸೆ ನೀಡಿದರು. ಇಲ್ಲಿನ ಬಾಲಕರ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಣ ಇಲಾಖೆ ಏರ್ಪಡಿಸಿದ್ದ ತಾಲೂಕು ಮಟ್ಟದ ಕಲಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮಹತ್ವಪೂರ್ಣ ಯೋಜನೆ: ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣದೊಂದಿಗೆ ಇತರೆ ಚಟುವಟಿಕೆಗಳಲ್ಲಿ ಮಕ್ಕಳು ಸಕ್ರಿಯವಾಗಿ ಪಾಲ್ಗೊಳ್ಳಲಿ ಎಂಬ ಉದ್ದೇಶದಿಂದ ಸರ್ಕಾರ ಈ ನೂತನ ಯೋಜನೆಯನ್ನು ಜಾರಿ ಮಾಡಿದೆ. ಕಲಿಕೆಯಲ್ಲಿ ಆಸಕ್ತಿ ಹೆಚ್ಚಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಇದೊಂದು ಮಹತ್ವಪೂರ್ಣ ಯೋಜನೆಯಾಗಿದೆ ಎಂದರು.
ಮುಂಬರುವ ದಿನಗಳಲ್ಲಿ ಈ ಕಾರ್ಯಕ್ರಮದ ಬಗ್ಗೆ ಹಚ್ಚಿನ ಪ್ರಚಾರ ನೀಡಿ ಪೂರ್ಣಪ್ರಮಾಣದಲ್ಲಿ ಮಕ್ಕಳು ಭಾಗವಹಿಸುವಂತೆ ಪ್ರೋತ್ಸಾಹ ನೀಡಬೇಕೆಂದು ಸಲಹೆ ನೀಡಿದರು.
ಪೋಷಕರು ಸಹಕಾರ ಅವಶ್ಯ: ಅಧ್ಯಕ್ಷತೆ ವಹಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಎ.ವಿ. ಕೆಂಪರಂಗಯ್ಯ ಮಾತನಾಡಿ, ಮಕ್ಕಳಲ್ಲಿನ ಕಲಿಕೆ ಹಾಗೂ ಅದರ ಖಾತರಿಯನ್ನು ಹಬ್ಬದೋಪಾದಿಯಲ್ಲಿ ಆಚರಿಸುವುದೇ ಕಲಿಕೋತ್ಸವ ಆಗಿದೆ. ಈ ಯೋಜನೆಯ ಸಾಕಾರಕ್ಕೆ ಪಾಲಕರು ಪೋಷಕರು ಸಹಕಾರ ನೀಡಬೇಕೆಂದು ಕೋರಿದರು.
ಕಾರ್ಯಕ್ರಮದಲ್ಲಿ ನಾಟಕ, ಕಂಠಪಾಠ, ಆಶುಭಾಷಣ, ಸರಳ ಗಣಿತ, ಗುಣಾಕಾರ ಮಗ್ಗಿ, ರಸಪ್ರಶ್ನೆ, ಸಂಭಾಷಣೆ, ಚಿತ್ರಕಲೆ ಸೇರಿದಂತೆ 30 ಸ್ಪರ್ಧೆಗಳಲ್ಲಿ ವಿವಿಧ ಶಾಲೆಯ ಮಕ್ಕಳು ಭಾಗವಹಿಸಿದ್ದರು. ಶಿಕ್ಷಣ ಸಮನ್ವಯಾಧಿಕಾರಿ ಮಹಾದೇವರಡ್ಡಿ ಪ್ರಾಸ್ತವಿಕ ಮಾತನಾಡಿದರು.
ತಾಪಂ ಅಧ್ಯಕ್ಷ ಶ್ರೀನಿವಾಸಗೌಡ ಪಾಟೀಲ, ಪುರಸಭೆ ಅಧ್ಯಕ್ಷ ದೇವಿಂದ್ರಪ್ಪ ಕಳ್ಳಿಮನಿ, ಅಧಿಕಾರಿ ಪಂಡಿತ ನಿಂಬೂರ, ಶಾಲಾ ಮುಖ್ಯಗುರು ಸಂಗಮ್ಮ ನಾಗಾವಿ, ಹಳ್ಳೆಪ್ಪ ಖಾಂಜಾಂಜಿ, ಚಂದ್ರಕಾಂತ ಕೊಣ್ಣೂರು, ದೇವರಾಜ ಪಾಟೀಲ, ಮುಖಂಡರಾದ ಸೂಲಪ್ಪ ಕಮತಗಿ, ವಿಠ್ಠಲ್ ಯಾದವ್, ವೆಂಕಟೇಶ ಹೊಸ್ಮನಿ, ನಾಗಪ್ಪ ಕಟ್ಟಿಮನಿ ವೇದಿಕೆಯಲ್ಲಿದ್ದರು. ಕೋರಿ ಸಂಗಯ್ಯ ಸ್ವಾಗತಿಸಿದರು. ರಾಜಶೇಖರ ದೇಸಾಯಿ ನಿರೂಪಿಸಿದರು. ಖಾದರ್ ಪಟೇಲ್ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

