13ಕ್ಕೆ ಸಿದ್ದರಾಮೇಶ್ವರ ಜಯಂತ್ಯುತ್ಸವ
ಯಾದಗಿರಿ: ಜಿಲ್ಲಾಡಳಿತದ ವತಿಯಿಂದ ಜ. 13ರಂದು ಬೆಳಿಗ್ಗೆ 9ಗಂಟೆಗೆ ನಗರದ ವಿದ್ಯಾಮಂಗಲ ಕಾರ್ಯಾಲಯದಲ್ಲಿ ಶಿವಯೋಗಿ ಸಿದ್ದರಾಮೇಶ್ವರ ಜಯಂತ್ಯುತ್ಸವವನ್ನು ಆಚರಿಸಲಾಗುತ್ತಿದೆ. ಅಂದು ಈ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜವಳಿ ಬಂದರು ಹಾಗೂ ಒಳನಾಡು ಜಲಸಾರಿಗೆ ಖಾತೆ ಸಚಿವರು ಉಪಸ್ಥಿತರಿದ್ದು ದೀಪ ಬೆಳಗಿಸುವರು. ಮುಖ್ಯ ಅತಿಥಿಗಳಾಗಿ ರೇಲ್ವೆ ಸಚಿವ ಡಾ. ಮಲ್ಲಿಕಾರ್ಜುನ ಖರ್ಗೆ ಉಪಸ್ಥಿತರಿರುವರು. ಅಧ್ಯಕ್ಷತೆಯನ್ನು ಶಾಸಕ ಡಾ.ಎ.ಬಿ. ಮಾಲಕರೆಡ್ಡಿ ವಹಿಸುವರು. ಕಾರ್ಯಕ್ರಮದಲ್ಲಿ ಜಿಲ್ಲೆಯ ಜಿಪಂ ಅಧ್ಯಕ್ಷರು, ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಅತಿಥಿಗಳಾಗಿ ಜಿಲ್ಲೆಯ ಶಾಸಕರು ವಿಧಾನ ಪರಿಷತ್ ಸದಸ್ಯರು ನಗರಸಭೆಯ ಮತ್ತು ತಾಪಂ ಅಧ್ಯಕ್ಷರು ವಿಶೇಷ ಆಹ್ವಾನಿತರಾಗಿ ಉಪಸ್ಥಿತರಿರುವರು. ಕಾರ್ಯಕ್ರಮಕ್ಕೆ ಸಮಸ್ತ ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಮತ್ತು ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಜಿಲ್ಲಾಧಿಕಾರಿ ಎಫ್.ಆರ್. ಜಮಾದಾರ್ ಕೋರಿದ್ದಾರೆ.
ಪಲ್ಲಕ್ಕಿಗೆ ಕುರಿಗಳ ಹಾರಿಸಲು ನಿಷೇಧ
ಯಾದಗಿರಿ: ತಾಲೂಕಿನ ಮೈಲಾಪುರ ಗ್ರಾಮದಲ್ಲಿ ಜ. 12ರಿಂದ 16ರವರೆಗೆ ನಡೆಯಲಿರುವ ಮೈಲಾರ ಲಿಂಗೇಶ್ವರ ದೇವಸ್ಥಾನದ ಜಾತ್ರೆ ಸಂದರ್ಭದಲ್ಲಿ ದೇವರ ಪಲ್ಲಕ್ಕಿಗೆ ಕುರಿಗಳನ್ನು ಹಾರಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾದಂಡಾಧಿಕಾರಿಗಳಾದ ಎಫ್.ಆರ್. ಜಮಾದಾರ್ ಈ ಕುರಿತು ಆದೇಶ ಹೊರಡಿಸಿದ್ದಾರೆ. ಈ ಜಾತ್ರೆಯಲ್ಲಿ ಯಾವುದೇ ಕಾರಣಕ್ಕೂ ಪ್ರಾಣಿ ಹಕ್ಕು ಕಾಯ್ದೆ 1960 ಉಲ್ಲಂಘನೆ ಆಗದಂತೆ ನೋಡಿಕೊಳ್ಳಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಜ. 12ರ ಮಧ್ಯರಾತ್ರಿಯಿಂದ ಜ. 16 ಮಧ್ಯರಾತ್ರಿವರೆಗೆ ಗ್ರಾಮಕ್ಕೆ ಹೊಂದಿಕೊಂಡಿರುವ ಕೂಡು ರಸ್ತೆಗಳಲ್ಲಿ ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಬೇಕು. ಯಾವುದೇ ಕಾರಣಕ್ಕೂ ಕುರಿಗಳು ಜಾತ್ರೆಯಲ್ಲಿ ಪ್ರವೇಶ ಆಗದಂತೆ ತಡೆಗಟ್ಟಬೇಕೆಂದು ಆದೇಶದಲ್ಲಿ ತಿಳಿಸಲಾಗಿದೆ.
ಪ್ರಾಣಿ ಬಲಿ ನಿಷೇಧ
ಯಾದಗಿರಿ: ತಾಲೂಕಿನ ಅನೂರ (ಕೆ) ಗ್ರಾಮದಲ್ಲಿ ಶ್ರೀ ಗುಡೆದ ಯಲ್ಲಮ್ಮ ಜಾತ್ರೆ ಹಾಗೂ ಶೆಟ್ಟಳ್ಳಿ ಗ್ರಾಮದಲ್ಲಿ ಜ. 16ರಂದು ನಡೆಯುವ ಮಾರೆಮ್ಮ ದೇವಿ ಜಾತ್ರೆಗಳ ಸಂದರ್ಭದಲ್ಲಿ ಜಾತ್ರಾ ಸ್ಥಳದ 200 ಮೀಟರ್ ವ್ಯಾಪ್ತಿಯಲ್ಲಿ ಪ್ರಾಣಿ ಬಲಿ ಕೊಡುವುದನ್ನು ನಿಷೇಧಿಸಿ ಜಿಲ್ಲಾದಂಡಾಧಿಕಾರಿ ಎಫ್.ಆರ್. ಜಮಾದಾರ್ ಆದೇಶ ಹೊರಡಿಸಿದ್ದಾರೆ. ಜಾತ್ರೆಗಳ ಸಂದರ್ಭದಲ್ಲಿ ಕರ್ನಾಟಕ ಪ್ರಾಣಿ ಬಲಿ ನಿಷೇಧ ಕಾಯ್ದೆ 1959 ಮತ್ತು ಕರ್ನಾಟಕ ಪ್ರಾಣಿ ಬಲಿ ನಿಷೇಧ ನಿಯಮಗಳು 1963ರ ಕಾಯ್ದೆ ಮತ್ತು ನಿಯಮ ಉಲ್ಲಂಘನೆ ಆಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.ಗ್ರಾಮದ ಸುತ್ತಲೂ ಚೆಕ್‌ಪೋಸ್ಟ್ ನಿರ್ಮಿಸಿ, ಪ್ರಾಣಿಗಳನ್ನು ಗ್ರಾಮದ ಒಳಗಘೆ ಬರದಂತೆ ತಡೆಯಲು ಹಾಗೂ ದೇವರ ಹೆಸರಿನಲ್ಲಿ ಬಲಿ ಕೊಡುವುದನ್ನು ಕಡ್ಡಾಯವಾಗಿ ತಡೆ ಹಿಡಿಯುವಂತೆ ಆಯಾ ಅಧಿಕಾರಿಗಳಿಗೆ ಸೂಚಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

