ಗುಲ್ಬರ್ಗಾ

ಅಂಗನವಾಡಿ ನೌಕರರ ಚಳವಳಿ

Published On :

ಕನ್ನಡಪ್ರಭ ವಾರ್ತೆ  ಯಾದಗಿರಿ  ಜ.10
ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಜಿಲ್ಲಾ ಅಂಗನವಾಡಿ ನೌಕರರು ಮತ್ತು ಸಹಾಯಕರ ಸಂಘ ನಗರದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ಹಮ್ಮಿಕೊಂಡು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.
  ಪ್ರವಾಸಿ ಮಂದಿರದಿಂದ ಹೊರಟ ನೂರಾರು ನೌಕರರು ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಗೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಮುಖಂಡರು ಮಾನವನ ಸಂಪನ್ಮೂಲಗಳ ಬೆಳವಣಿಗೆಗೆ ಪೂರಕವಾಗಿ ದೇಶದಲ್ಲಿ 1975ರಲ್ಲಿ ಅಂದಿನ ಕೇಂದ್ರ ಸರಕಾರ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಜಾರಿಗೆ ತರುವ ಮೂಲಕ ಸುರಕ್ಷಿತ ಶಿಶು ಜನನ, ಗರ್ಭಿಣಿ, ಬಾಣಂತಿಯರ ಮತ್ತು 6 ವರ್ಷದೊಳಗಿನ ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರ, ಪ್ರಾಥಮಿಕ ಆರೋಗ್ಯದ ಬಗ್ಗೆ ತಿಳುವಳಿಕೆ ಮೂಡಿಸಬೇಕು. ಜೊತೆಗೆ ಪ್ರಾಥಮಿಕ ಶಿಕ್ಷಣವನ್ನು ನೀಡುವುದು ಪ್ರಮುಖ ಉದ್ದೇಶವಾಗಿದೆ. ಆದರೆ ಇಂದಿನ ಸರ್ಕಾರ ಯೋಜನೆಯನ್ನು ಪುನರ್ ರಚಿಸುವ ಹೆಸರಿನಲ್ಲಿ ಖಾಸಗೀಕರಣ ಮಾಡಲು ಮುಂದಾಗಿರುವುದನ್ನು ಖಂಡಿಸಿದರು.
ವಿವಿಧ ಬೇಡಿಕೆ: ಈ ಯೋಜನೆಯನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ನೇರವಾಗಿ ನಡೆಸಬೇಕು. ಇನ್ನೂ ಯೋಜನೆಗೆ ಹೆಚ್ಚಿನ ಅನುದಾನ ಒದಗಿಸಬೇಕು. ಸಮುದಾಯದ ಜನರನ್ನು ಒಗ್ಗೂಡಿಸುವ ಹೆಸರನ್ನು ಅಂಗನವಾಡಿ ಕೇಂದ್ರದ ಯಜಮಾನಿಕೆ ನಿರ್ವಹಣೆಯನ್ನು ಸ್ವಯಂ ಸೇವಾ ಸಂಸ್ಥೆಗಳಿಗೆ ಮತ್ತು ಗ್ರಾಮದಲ್ಲಿರುವ ಹಿತಾಸಕ್ತಿಗಳಿಗೆ ನೀಡುವುದನ್ನು ಕೈಬಿಡಬೇಕು. ಇತರ ಸಮಸ್ಯೆಗಳನ್ನು ಮುಖ್ಯಮಂತ್ರಿಗಳು ಗಂಭೀರವಾಗಿ ಪರಿಗಣಿಸಿ ನೌಕರರ ಹಿತಾಸಕ್ತಿ ಕಾಪಾಡಬೇಕು ಎಂದು ಮನವಿ ಮಾಡಿದರು.
  ಈ ಸಂದರ್ಭದಲ್ಲಿ ಸುರೇಖಾ ಕುಲಕರ್ಣಿ, ಬಂಗಾರೆಮ್ಮ, ಲಕ್ಷ್ಮೀ ಕೊರಟಗಿ, ಬಸಮ್ಮ ಆಲ್ಹಾಖ ಸುರಪುರ, ರಾಜೇಶ್ವರಿ ಶಹಾಪುರ, ಜೈಲಾಲ್ ತೋಟದಮನಿ, ಕಲ್ಪನಾ ಗುರುಸುಣಗಿ, ಎಸ್.ಎಂ. ಸಾಗರ್, ಪರಿಮಳ ಎಸ್. ಹಿರೆಮಠ ನೂರಾರು ನೌಕರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.