ಗುಲ್ಬರ್ಗಾ

ಸಮ್ಮೇಳನಾಧ್ಯಕ್ಷ ಡಿಸೋಜಾಗೆ ಜಿಲ್ಲಾ ಕಸಾಪದಿಂದ ಸನ್ಮಾನ

Published On :

ಗುರುಮಠಕಲ್: ಮಡಿಕೇರಿಯಲ್ಲಿ ನಡೆದಿರುವ 80ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ನಾ. ಡಿಸೋಜಾ ಅವರನ್ನು ಮಡಿಕೇರಿಯಲ್ಲಿ ಯಾದಗಿರಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು.
 ಪರಿಷತ್ತಿನ ಜಿಲ್ಲಾಧ್ಯಕ್ಷ ಸಿದ್ದಪ್ಪ ಹೊಟ್ಟಿ ಮಾತನಾಡಿ, ಸಮ್ಮೇಳನಾಧ್ಯಕ್ಷರಾಗಿ ನಾನು ಆಯ್ಕೆಯಾಗಿರುವುದು ಸಂತಸ ತಂದಿದೆ ಎಂದರು. ಸಮ್ಮೇಳನಾಧ್ಯಕ್ಷರ ನಿರ್ಣಯಗಳಲ್ಲಿ ಕಸ್ತೂರಿ ರಂಗನ್ ವರದಿ ಹಾಗೂ ಕನ್ನಡಿಗರಿಗೆ ಸಿಂಹ ಪಾಲು ಉದ್ಯೋಗ ದೊರೆಯುವ ಸರೋಜಿನಿ ಮಹಿಷಿ ವರದಿ ಜಾರಿಯಾಗುವುದು ಹಾಗೂ ಆಡಳಿತದಲ್ಲಿ ಕನ್ನಡ ಕಡ್ಡಾಯವಾಗುವುದು ಸೇರಿದಂತೆ 6 ಕೋಟಿ ಕನ್ನಡಿಗರ ಹಿತ ಕಾಪಾಡುವ ಮತ್ತು ಕನ್ನಡ ನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಗೆ ಪೂರಕವಾಗುವ ಅನೇಕ ನಿರ್ಣಯಗಳನ್ನು ಮಂಡಿಸಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಪರಿಷತ್ತಿನ ಜಿಲ್ಲಾ ಗೌರವ ಕಾರ್ಯದರ್ಶಿ ಪ್ರಕಾಶ ಅಂಗಡಿಕನ್ನಳ್ಳಿ ಹಾಗೂ ತಾಲೂಕು ಕಸಾಪ ಮಾಜಿ ಅಧ್ಯಕ್ಷ ಅಯ್ಯಣ್ಣ ಹುಂಡೇಕರ್, ವಿ.ಸಿ. ರೆಡ್ಡಿ, ಮಹಾದೇವಪ್ಪ ಗೌಡ, ಬಸವರಾಜ ಮೋಟ್ನಳ್ಳಿ, ನೂರೆಂದಪ್ಪ ಲೇವಡಿ, ಬಸವ ರೆಡ್ಡಿ, ದೇವರಾಜ ವರಕನಳ್ಳಿ ಇದ್ದರು.

13ರಂದು ತಿಂಥಣಿಗೆ ಸಿಎಂ ಸಿದ್ದರಾಮಯ್ಯ
ಯಾದಗಿರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಜ. 13ರಂದು ಬೆಳಿಗ್ಗೆ 11.45 ಗಂಟೆಗೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ವೀರಗೊಟ್ ಗ್ರಾಮ ತಿಂಥಣಿ ಬ್ರೀಡ್ಜ್ ಹೆಲಿಪ್ಯಾಡ್‌ಗೆ ಹೆಲಿಕಾಪ್ಟರ್ ಮೂಲಕ ಆಗಮಿಸುವರು. ನಂತರ ಯಾದಗಿರಿ ಜಿಲ್ಲೆಯ ತಿಂಥಣಿಯಲ್ಲಿ ಕೃಷಿ ವಿಶ್ವವಿದ್ಯಾಲಯ, ಹಟ್ಟಿ ಚಿನ್ನದ ಗಣಿ ನಿಯಮಿತ ಹಾಗೂ ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಇವರ ವತಿಯಿಂದ ಸ್ಥಾಪಿಸಲಾಗಿರುವ ಜೈವಿಕ ಇಂಧನ ಉದ್ಯಾನವನವನ್ನು ಉದ್ಫಾಟಿಸುವರು. ನಂತರ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ ವೀರಗೋಟ ಗ್ರಾಮದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ತೆರಳುವರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.