ಪ್ರಯೋಗ ತಜ್ಞರ ನೇಮಿಸಲು ಆಗ್ರಹ
ಸುರಪುರ: ಹಸನಾಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಪ್ರಯೋಗ ಶಾಲಾ ತಂತ್ರಜ್ಞರ ಹುದ್ದೆಯನ್ನು ಮಂಜೂರು ಮಾಡಿ ಪ್ರಯೋಗ ತಜ್ಞರನ್ನು ನೇಮಿಸಲು ಕನಕ ಯುವ ಸೇನೆಯ ಉತ್ತರ ಕರ್ನಾಟಕದ ಅಧ್ಯಕ್ಷ ರಂಗನಗೌಡ ಪಾಟೀಲ ದೇವಿಕೇರಿ ಆಗ್ರಹಿಸಿದ್ದಾರೆ.
ಪ್ರಾಥಮಿಕ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಿ ಇದನ್ನು ಹೆರಿಗೆ ಆಸ್ಪತ್ರೆಯನ್ನಾಗಿ ಮಾಡಲಾಗಿದೆ. ಪ್ರತಿ ತಿಂಗಳು ಸರಾಸರಿ 50ಕ್ಕೂ ಅಧಿಕ ಹೆರಿಗೆಯಾಗುತ್ತಿವೆ. ಕಳೆದ ತಿಂಗಳು 106 ಹೆರಿಗೆಯಾಗಿದ್ದು, ಜಿಲ್ಲೆಯಲ್ಲಿ ದಾಖಲೆಯಾಗಿದೆ. ರಂಗಂಪೇಟ, ತಿಮ್ಮಾಪುರ, ದಿವಳಗುಡ್ಡ, ದೇವಿಕೇರಿ ಸೇರಿದಂತೆ 8 ಗ್ರಾಮಗಳು ಈ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಗೆ ಒಳಪಡುತ್ತವೆ.
ಉತ್ತಮ ಸೇವೆ: ಈ ಆಸ್ಪತ್ರೆಯಲ್ಲಿ ದಿನದ 24 ಗಂಟೆ ಹೆರಿಗೆ ಸೇವೆ ನೀಡಲಾಗುತ್ತಿದೆ. ಆದರೆ ಆರೋಗ್ಯ ಇಲಾಖೆ ಆಸ್ಪತ್ರೆಗೆ ಪ್ರಯೋಗ ತಜ್ಞರನ್ನು ಒದಗಿಸದ ಕಾರಣ ಹೆರಿಗೆಗಾಗಿ ಬರುವ ಮಹಿಳೆಯರು ಪರದಾಡುವಂತಾಗಿದೆ. ಆಸ್ಪತ್ರೆಯ ವೈದ್ಯರು ರೋಗಿಗಳ ಕುರಿತು ತೋರುವ ಕಾಳಜಿ ಮತ್ತು ಸಿಬ್ಬಂದಿ ಪ್ರೀತಿ ಉತ್ತಮವಾಗಿದೆ. ಇದರಿಂದ ರೋಗಿಗಳ ಸಂಖ್ಯೆ ಹೆಚ್ಚಾಗಿದೆ.
ಆದರೆ ಹೆರಿಗೆಗಾಗಿ ಬರುವವರು ರಕ್ತ, ಮೂತ್ರ, ಇತ್ಯಾದಿ ಪರೀಕ್ಷೆಗಳನ್ನು ಹೊರಗಡೆ ಮಾಡಿಸಿಕೊಂಡು ಬರಬೇಕು. ಖಾಸಗಿ ಪರೀಕ್ಷೆಯಲ್ಲಿ ಸಿಕ್ಕಾಪಟ್ಟೆ ಹಣ ನೀಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಹೀಗಾಗಿ ಬಡವರ ಪಾಲಿಗೆ ಹೆರಿಗೆ ಆಸ್ಪತ್ರೆ ಇದ್ದೂ ಇಲ್ಲದಂತಾಗಿದೆ.
ಸೌಕರ್ಯ ಅಗತ್ಯ: ಕೇಂದ್ರದ ವ್ಯಾಪ್ತಿಗೆ ಬರುವ ಎಲ್ಲಾ ಗ್ರಾಮಗಳು ಸಂಪೂರ್ಣ ನೀರಾವರಿಗೆ ಒಳಪಟ್ಟಿವೆ. ಗ್ರಾಮಗಳ ತಿಪ್ಪಿಗುಂಡಿ ಮತ್ತು ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುತ್ತಿರುವುದರಿಂದ ಸೊಳ್ಳೆಗಳ ಕಾಟ ವಿಪರೀತವಾಗಿದೆ. ಹೀಗಾಗಿ ಮೇಲಿಂದ ಮೇಲೆ ಕಾಲರಾ, ಮಲೇರಿಯಾ ಕಂಡು ಬರುತ್ತಿದೆ. ಕೂಡಲೇ ಪ್ರಯೋಗ ತಜ್ಞರನ್ನು ಮತ್ತು ಪ್ರಸೂತಿ ವೈದ್ಯರನ್ನು ಒದಗಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೆ ಬರೆದ ದೂರಿನಲ್ಲಿ ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

