ಬಂಡೆಗೆ ಲಂಡನ್ನಲ್ಲಿ ಚಿಕಿತ್ಸೆ ಕೊಡಿಸಲು ಆಗ್ರಹಿಸಿ ಪ್ರತಿಭಟನೆ
ಗುಲ್ಬರ್ಗ: ರೌಡಿ ಮುನ್ನಾ ಜೊತೆ ನಡೆದ ಗುಂಡಿನ ಕಾಳಗದಲ್ಲಿ ಗಂಭೀರವಾಗಿ ಗಾಯಗೊಂಡ ಮಲ್ಲಿಕಾರ್ಜುನ ಬಂಡ ಅವರಿಗೆ ಲಂಡನ್ನಿನ ಕ್ವೀನ್ ಎಲಿಜಬೆತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮಾಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿ ಪ್ರತಿಭಟನೆ ನಡೆಸಿತು.
ಹೈದ್ರಾಬಾದ್ನ ಯಶೋಧಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪಿಎಸ್ಐ ಮಲ್ಲಿಕಾರ್ಜುನ ಬಂಡೆ ಅವರ ಆರೋಗ್ಯದಲ್ಲಿ ಯಾವುದೇ ಬದಲಾವಣೆ ಕಂಡಿಲ್ಲ. ಅವರಿಗೆ ಹೆಚ್ಚಿನ ಚಿಕಿತ್ಸೆಗಾಗಿ ಕೂಡಲೇ ಲಂಡನ್ನಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ ಒತ್ತಾಯಿಸಿದೆ. ಒಂದು ವೇಳೆ ಚಿಕಿತ್ಸೆ ನೀಡಲು ವಿಳಂಬ ನೀತಿ ಅನುಸರಿಸಿದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಮನೋಹರ ಬೀರನೂರ, ನಗರ ಅಧ್ಯಕ್ಷ ಗೋಪಾಲ ನಾಟೀಕರ, ಶಿವಶಂಕರ, ಸಂತೋಷ ಚೌದರಿ, ಸಂಪತ ಬಿಜಾಪೂರ, ನಾಗರಾಜ ಸ್ವಾದಿ, ಸತೀಶ ಬೀರನೂರ, ಶಂಭುಲಿಂಗ ಶಾಬಾದಕರ್ ಇನ್ನಿತರರು ಉಪಸ್ಥಿತರಿದ್ದರು.
ಜೈಕರವೇ ಪ್ರತಿಭಟನೆ: ಭೂಗತ ಪಾತಕಿ ಮುನ್ನಾ ಶೂಟೌಟ್ ಪ್ರಕರಣದಲ್ಲಿ ಕೋಮಾ ಸ್ಥಿತಿಯಲ್ಲಿರುವ ಪಿಎಸ್ಐ ಮಲ್ಲಿಕಾರ್ಜುನ ಬಂಡೆ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಲಂಡನ್ನಿಗೆ ಕಳುಹಿಸಲು ಜೈ ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿ ಪ್ರತಿಭಟನೆ ನಡೆಸಿತು.
ಹೈದ್ರಾಬಾದಿನ ಯಶೋಧಾ ಆಸ್ಪತ್ರೆಯಲ್ಲಿ ಪಿಎಸ್ಐ ಮಲ್ಲಿಕಾರ್ಜುನ ಬಂಡೆಯವರಲ್ಲಿ ಯಾವುದೇ ಚೇತರಿಕೆ ಕಾಣದೆ ಕೋಮಾ ಸ್ಥಿತಿಯಲ್ಲಿದ್ದರೂ ಹೆಚ್ಚಿನ ಚಿಕಿತ್ಸೆಗಾಗಿ ವಿದೇಶಕ್ಕೆ ಕಳುಹಿಸದೆ ಬರಿ ಹೇಳಿಕೆ ನೀಡಿ ಗೃಹ ಸಚಿವರು ಜನರಿಗೆ ಸಮಾಧಾನ ಮಾಡಿರುವುದು ವಿಷಾದಕರ ಸಂಗತಿ ಎಂದು ಅರುಣಕುಮಾರ ಪಾಟೀಲ್ ಹೇಳಿದರು.
ಪಾಕಿಸ್ತಾನದಲ್ಲಿ ಉಗ್ರರಿಂದ ಮಲಾಲ ಎಂದ ವಿದ್ಯಾರ್ಥಿನಿಯ ತಲೆಗೆ ಎರಡು ಗುಂಡುಗಳು ಹೊಕ್ಕು ಕೋಮಾ ಸ್ಥಿತಿಯಲ್ಲಿದ್ದಾಗ ಹೆಚ್ಚಿನ ಚಿಕಿತ್ಸೆಗಾಗಿ ಪಾಕಿಸ್ತಾನ ಲಂಡನ್ನಿಗೆ ಕಳುಹಿಸಿ ಮಲಾಲಳ ಜೀವವನ್ನು ಉಳಿಸಿಕೊಂಡಿತು. ಅದೇ ರೀತಿ ಮಲ್ಲಿಕಾರ್ಜುನ ಬಂಡೆಯವರನ್ನು ಲಂಡನ್ನಿಗೆ ಕಳುಹಿಸಿ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಜೈ ಕರ್ನಾಟಕ ರಕ್ಷಣಾ ವೇದಿಕೆ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

