ಗುಲ್ಬರ್ಗಾ

ಕಲಿಕಾ ಮೇಳ ಮಕ್ಕಳ ಮನೋವಿಕಾಸಕ್ಕೆ ಸಹಕಾರಿ

Published On :

ಹುಣಸಗಿ: ಪ್ರತಿಯೊಂದು ಶೈಕ್ಷಣಿಕ ಮೇಲಗಳು ಮಕ್ಕಳ ಮನೋವಿಕಾಸಕ್ಕೆ ಸಹಕಾರಿಗಲಿವೆ. ಇದರಿಂದ ಗಣನೀಯ ಪ್ರಮಾಣದಲ್ಲಿ ಶೈಕ್ಷಣಿಕ ಪ್ರತಿಯಾಗಿದೆ ಎಂದು ಹುಣಸಗಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಸುರೇಶ ನೀರಗಲಿ ಅಭಿಪ್ರಾಯ ವ್ಯಕ್ತಪಡಿಸಿದರು.
ಹುಣಸಗಿಯ ಸರ್ಕಾರಿ ಮಾದರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಕಲಿಕಾ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದರು. ಮೊದಲು ಒಂದು ಪ್ರಯೋಗ ಮಾಡಬೇಕಾದರೂ ಕಷ್ಟಸಾದ್ಯದಂತಿತ್ತು. ಆದರೆ ಇಂದಿನ ಶಿಕ್ಷಣ ವಿಧಾನದಲ್ಲಿ ಪ್ರತಿಯೊಂದು ವಿಷಯವನ್ನು ಪ್ರಾಯೋಗಿಕವಾಗಿ ತಿಳಿಸಿ ಮಕ್ಕಳಲ್ಲಿ ಆವಿಯದ ಆತಂಕ ನಿವಾರಣೆ ಯಾಗುವಂತೆ ಮಾಡುತ್ತಿದೆ. ಅದಕ್ಕಾಗಿ ಇಂದಿನ ಶಿಕ್ಷಣ ಸರಳವಾಗಿ ಮಕ್ಕಳು ಹೆಚ್ಚು ತಿಳಿದುಕೊಳ್ಳಲು ಸಾಧ್ಯ ಎಂದರು.
ಶಾಲೆಯ ಪ್ರಧಾನಗುರುಗಳಾದ ಭೀಮಣ್ಣ ವಾಲ್ಮಿ ಮಾತನಾಡಿ, ಕಲಿಕಾ ಮೇಳದಿಂದ ಮಕ್ಕಳಿಗೆ ವಿಷಯದ ಸರಳತೆ ಯುಂಟುಮಾಡುತ್ತದೆ. ಮಕ್ಕಳಲ್ಲಿ ಆಟದೊಂದಿಗೆ ಪಾಠ ಎನ್ನುವಂತೆ ವಿಷಯದಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ಈ ಕಲಿಕಾ ಮೇಳ ಮಕ್ಕಳಲ್ಲಿ ಹೊಸ ಹುಮ್ಮಸ್ಸು ಮೂಡಿಸಿದೆ ಎಂದರು. 25 ಶಾಲೆಯ ನೂರಾರು ಮಕ್ಕಳು ಶಿಕ್ಷಕರು ಈ ಮೇಳದಲ್ಲಿ ಪಾಲ್ಗೊಂಡಿದ್ದರು. ಪದಹುಡುಕು, ಜ್ವಾಲಾಮುಖಿ, ಗ್ರಹಣಗಳು, ರಾಕೇಟ್ ಉಡಾವಣೆ ಸೇರಿದಂತೆ ಹಲವಾರು ವಿಷಗಳ ಕುರಿತು ವಿದ್ಯಾರ್ಥಿಗಳು ಪ್ರಯೋಗದೊಂದಿಗೆ ಮಕ್ಕಳಿಗೆ ಮಾಹಿತಿ ನೀಡುತ್ತಿರುವುದು ಕಂಡು ಬಂತು. ಶಾಲೆಯ ಶಿಕ್ಷಕರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.